ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26 ನೇ ಸಾಲಿಗೆ ಭಾರತ ಸರ್ಕಾರದ ಶಾಸನಬದ್ಧ ಅಂಗಿಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ (ಈuಟಟ ಖಿime) ಪಿ.ಎಚ್.ಡಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರೀಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್) ಸಮುದಾಯದ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್ ಮಾದರಿಯಲ್ಲಿ ಪಿ.ಎಚ್.ಡಿ ಫೆಲೋಶಿಪ್ ನೀಡಲಾಗುತ್ತಿದ್ದು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯು ಕರ್ನಾಟಕದ ನಿವಾಸಿಯಾಗಿರಬೇಕು, ಮತೀಯ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. ವಿದ್ಯಾರ್ಥಿ ವಯಸ್ಸು ಗರಿಷ್ಟ ಮಿತಿ 35 ಮೀರಿರಬಾರದು, ಕುಟುಂಬದ ವಾರ್ಷಿಕ ಆದಾಯ ರೂ.8 ಲಕ್ಷ ಮೀರಿರಬಾರದು. ವಿದ್ಯಾರ್ಥಿ ಯಾವುದೇ ಸರ್ಕಾರಿ ಉದ್ಯೋಗಿಯಾಗಿರಬಾರದು. ಇತರೇ ಮೂಲದಿಂದ ಯಾವುದೇ ಫೆಲೋಶಿಪ್ ವಿದ್ಯಾರ್ಥಿವೇತನ ಪಡೆಯುತ್ತಿರಬಾರದು.
ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ವೆಬ್‌ಸೈಟ್ <hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ> ನಲ್ಲಿ ಅರ್ಜಿ ಸಲ್ಲಿsಸಲು ಸೆಪ್ಟಂಬರ್ 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿಸಂಖ್ಯೆ: 8277799990/08382-220336 ವೆಬ್‌ಸೈಟ್ <hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.iಟಿ/uಣಣಚಿಡಿಚಿ_ಞಚಿಟಿಟಿಚಿಜಚಿ/ಠಿubಟiಛಿ/> ಅಲ್ಪಸಂಖ್ಯಾತರ ಕಛೇರಿ, ತಾಲೂಕಾ ವಿಸ್ತರಣಾಧಿಕಾರಿಗಳ ಕಛೇರಿ ಅಥವಾ ಅಯಾ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Discussion about this post