ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 5ರಿಂದ 11ರವರೆಗೆ ಎಸ್‌ಎಸ್‌ಎಲ್‌ಸಿ-3 ಪರೀಕ್ಷೆ ನಡೆಯಲಿದೆ. ಈ ಹಿಂದಿನ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಉತ್ತೀರ್ಣರಾಗುವ ಅವಕಾಶಕ್ಕಾಗಿ ಈ ಪರೀಕ್ಷೆ ನಡೆಸಲಾಗುತ್ತಿದೆ.
ಈ ಪರೀಕ್ಷೆ ನಡೆಸಲು ಜಿಲ್ಲೆಯಲ್ಲಿ 12 ಕೇಂದ್ರಗಳನ್ನು ತೆರೆಯಲಾಗಿದೆ. ಒಟ್ಟು 2609 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಈ ಸಲವು ಎಲ್ಲಾ ಕೇಂದ್ರದಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಮಕ್ಕಳಿಗೆ ಮೂಲಭೂತ ಸೌಕರ್ಯ ಒದಗಿಸಲಾಗುತ್ತಿದೆ.
ಪರೀಕ್ಷೆಗೆ ನೊಂದಣಿ ಮಾಡಿಕೊಂಡಿರುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಪರೀಕ್ಷೆಗೆ ಹಾಜರಾಗುವಂತೆ ಅಧಿಕಾರಿಗಳು ಸಂಪರ್ಕಿಸಲಿದ್ದಾರೆ. ವಿದ್ಯಾರ್ಥಿಗಳು ಉತ್ತೀರ್ಣರಾಗುವ ನಿಟ್ಟಿನಲ್ಲಿ ಅಗತ್ಯ ತರಬೇತಿ ಮತ್ತು ಮಾರ್ಗದರ್ಶನ ನೀಡುವ ಹೊಣೆಯನ್ನು ಅಧಿಕಾರಿಗಳಿಗೆವಹಿಸಲಾಗಿದೆ.
`ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ಸಾಗಾಣಿಕೆ ಸಂದರ್ಭದಲ್ಲಿ ಮತ್ತು ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು. ಎಸ್ ಎಸ್ ಎಲ್ ಸಿ-3 ಪರೀಕ್ಷೆಯು ಅನುತ್ತಿರ್ಣರಾದ ವಿದ್ಯಾರ್ಥಿಗಳಿಗೆ ಉತ್ತೀರ್ಣರಾಗಲು ಹಾಗೂತಮ್ಮ ವಿದ್ಯಾಭ್ಯಾಸವನ್ನು ಮುಂದುವರೆಸಲು ಈ ಬಾರಿಯ ಕೊನೆಯ ಅವಕಾಶವಾಗಿದೆ.
`SSLC ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ಅರಿವು ಮೂಡಿಸಬೇಕು’ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೂಚಿಸಿದ್ದಾರೆ.
Discussion about this post