ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಎರಡು ತಾಲೂಕಿನ ಶಾಲೆಗಳಿಗೆ ಜುಲೈ 3ರಂದು ಜಿಲ್ಲಾಡಳಿತ ರಜೆ ಘೋಷಿಸಿದೆ.
ದಾಂಡೇಲಿ ಹಾಗೂ ಜೊಯಿಡಾ ತಾಲೂಕಿಗೆ ಸೀಮಿತಗೊಳಿಸಿ ರಜೆ ಆದೇಶ ಹೊರಡಿಸಲಾಗಿದೆ. ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಈ ರಜೆ ಭಾಗ್ಯ ಸಿಗಲಿದೆ. ಕಾಲೇಜುಗಳಿಗೆ ರಜೆ ಘೋಷಣೆಯಾಗಿಲ್ಲ.
ರಜಾ ಅವಧಿಯ ಪಾಠವನ್ನು ಬೇಸಿಗೆ ಅವಧಿಯಲ್ಲಿ ಸರಿದೂಗಿಸಿಕೊಳ್ಳುವಂತೆಯೂ ಆದೇಶದಲ್ಲಿದೆ. ಸುರಿಯುತ್ತಿರುವ ಮಳೆಯನ್ನು ಗಮನಿಸಿ ಜುಲೈ 2ರ ರಾತ್ರಿ ವೇಳೆ ಈ ಆದೇಶ ಹೊರಡಿಸಲಾಗಿದೆ.
Discussion about this post