ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 14ರಿಂದ ಭಾರೀ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲಿಯೂ ಕರಾವಳಿ ಭಾಗದಲ್ಲಿ ಮಳೆಯ ಜೊತೆ ಜೋರು ಗಾಳಿಯೂ ಬೀಸಲಿದೆ.
ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಈ ಬಗ್ಗೆ ಎಚ್ಚರಿಕೆ ನೀಡಿದೆ. ಜುಲೈ 14ರಿಂದ 16ರವರೆಗೂ ಗಾಳಿ – ಮಳೆ ಹೆಚ್ಚಳವಾಗುವ ಬಗ್ಗೆ ತಜ್ಞರು ಮಾಹಿತಿ ನೀಡಿದ್ದಾರೆ.
ಈ ಅವಧಿಯಲ್ಲಿ ಗಂಟೆಗೆ 40-50ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಹೆಚ್ಚಿದೆ. ಗಾಳಿಯೂ 60ಕಿಮೀ ವೇಗಕ್ಕೂ ತಲುಪುವ ಬಗ್ಗೆ ಅಂದಾಜಿಸಲಾಗಿದೆ. ಹೀಗಾಗಿ ಸಣ್ಣ ಮತ್ತು ಮಧ್ಯಮ ಗಾತ್ರದ ದೋಣಿಗಳು ಸಮುದ್ರಕ್ಕೆ ಇಳಿಯುವುದು ಅಪಾಯ.
`ಈ ಮೂರು ದಿನಗಳ ಕಾಲ ಸಾರ್ವಜನಿಕರು ಸಾಕಷ್ಟು ಮುನ್ನಚ್ಚರಿಕೆವಹಿಸಬೇಕು. ಸಮುದ್ರ ಪ್ರದೇಶಗಳಿಗೆ ಯಾರೂ ಹೋಗಬಾರದು. ನದಿ-ನೀರಿರುವ ಕಡೆ ಮಕ್ಕಳು ಹೋಗದಂತೆ ಎಚ್ಚರಿಕೆವಹಿಸಬೇಕು. ನೀರು ಸಂಗ್ರಹಣಾ ಸ್ಥಳದಲ್ಲಿ ಯಾವುದೇ ಮನರಂಜನಾ ಚಟುವಟಿಕೆಯನ್ನು ನಡೆಸಬಾರದು’ ಎಂದು ಜಿಲ್ಲಾಡಳಿತ ಸೂಚಿಸಿದೆ.
ಅದಾಗಿಯೂ ತುರ್ತು ಸೇವೆ ಅಗತ್ಯವಿದ್ದರೆ ಇಲ್ಲಿ ಫೋನ್ ಮಾಡಿ:
08382-229857 ಅಥವಾ 9483511015
Discussion about this post