ಸಿದ್ದಾಪುರದ ಸಂಜೀವಿನಿ ಒಕ್ಕೂಟದ ಸದಸ್ಯೆ ಸರಸ್ವತಿ ನಾಯ್ಕ ಹಾಗೂ ಈಶ್ವರ ನಾಯ್ಕ ದಂಪತಿ ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ‍್ಯೋತ್ಸವದಲ್ಲಿ ಭಾಗವಹಿಸುವ ಅವಕಾಶಪಡೆದಿದ್ದಾರೆ. ಈ ಕಾರ್ಯಕ್ರಮದ ಭಾಗವಾಗಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ.
ಕೌಶಲ್ಯಾಭಿವೃದ್ದಿ ಮತ್ತು ಜೀವನೋಪಾಯ ಇಲಾಖೆ ಅವರಿಗೆ ಈ ಅವಕಾಶ ನೀಡಿದೆ. ಮನಮನೆ ಸಂಜೀವಿನಿ ಒಕ್ಕೂಟದ ಹಸವಂತೆ ಗ್ರಾಮದ ಪ್ರಗತಿ ಸ್ತ್ರೀ ಶಕ್ತಿ ಸಂಘದ ಸದಸ್ಯರಾಗಿರುವ ಅವರು ಇದೀಗ ದೆಹಲಿಗೆ ತೆರಳುವ ಸಿದ್ಧತೆ ಮಾಡಿಕೊಂಡಿದ್ದರೆ.
ಸಂಜೀವಿನಿ ಯೋಜನೆಯಡಿಯಲ್ಲಿ ನಡೆಯುವ ಸರಸ್ ಮೇಳಗಳಲ್ಲಿ ಭಾಗವಹಿಸಿದ್ದ ಈ ದಂಪತಿ ತಮ್ಮ ಚಿತ್ತಾರ ಕಲೆಯನ್ನು ಪ್ರದರ್ಶಿಸಿದ್ದರು. ಈ ಹಿನ್ನಲೆ ನವದೆಹಲಿಯಲ್ಲಿ ಸ್ವಾತಂತ್ರ‍್ಯ ದಿನಾಚರಣೆಯ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲೆಯ ಚಿತ್ತಾರ ಕಲೆಯ ಕುಶಲಕರ್ಮಿಗಳನ್ನು ಪ್ರತಿನಿಧಿಸುವ ಸರಸ್ವತಿ ಅವರನ್ನು ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗಿದೆ.
Discussion about this post