`ಹುಟ್ಟು-ಸಾವಿನ 21ದಿನದ ಒಳಗೆ ನೋಂದಣಿ ಮಾಡುವುದು ಕಡ್ಡಾಯವಾಗಿದ್ದು, ಯಾವುದೇ ಕಾರಣಕ್ಕೂ ವಿಳಂಭವಾಗದAತೆ ಎಚ್ಚರಿಕೆವಹಿಸಿ’ ಎಂದು ಜಿಲ್ಲಾಧಿಕರಿ ಕೆ ಲಕ್ಷ್ಮೀಪ್ರಿಯ ಸೂಚಿಸಿದ್ದಾರೆ.
ಜನನ ಮರಣ ನೊಂದಣಿ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು `ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸುವ ಜನನ ಮತ್ತು ಮರಣದ ನೋಂದಣಿ ಮಾಡುವ ಬಗ್ಗೆ ಅಧಿಕಾರಿಗಳು ಅರಿವು ಮೂಡಿಸಬೇಕು. ನೋಂದಣಿ ನಂತರ ಡಿಜಿಟಲ್ ಸಿಗ್ನೇಜರ್ ಹೊಂದಿರುವ ಪ್ರಮಾಣ ಪತ್ರವನ್ನು ವಿತರಿಸಬೇಕು’ ಎಂದು ನಿರ್ದೇಶನ ನೀಡಿದ್ದಾರೆ. `ಪ್ರತಿ ತಾಲೂಕುಗಳಲ್ಲಿಯೂ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ಸಭೆ ನಡೆಸಬೇಕು. ಜನನ ಮರಣದ ನೋಂದಣಿ ಸಮಯದಲ್ಲಿ ದಿನಾಂಕ ತಪ್ಪಾಗಿ ನಮೂದಾಗದ ರೀತಿ ಎಚ್ಚರಿಕೆವಹಿಸಬೇಕು’ ಎಂದವರು ಸೂಚಿಸಿದರು.
`ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಂರಕ್ಷಣಾಧಿಕಾರಿಗಳು, ನೊಂದಣಾಧಿಕಾರಿಗಳು, ಉಪನೋಂದಣಾಧಿಕಾರಿಗಳು, ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಆಪರೇಟರ್‌ಗಳಿಗೆ ತರಬೇತಿ ನೀಡಬೇಕು. ಮರಣ ಕಾರಣದ ಪ್ರಮಾಣಪತ್ರಗಳನ್ನು ಕಡ್ಡಾಯವಾಗಿ ನೀಡುವ ಕುರಿತಂತೆ ಆರೋಗ್ಯ ಇಲಾಖೆಯ ಮೂಲಕ ಜಿಲ್ಲೆಯಲ್ಲಿನ ಎಲ್ಲಾ ಆಸ್ಪತ್ರೆಗಳಿಗೆ ನಿರ್ದೇಶನ ನೀಡಬೇಕು’ ಎಂಬ ಸೂಚನೆ ನೀಡಿದ್ದಾರೆ. ಜನನ ಮರಣದ ನೊಂದಣಿಯ ದಾಖಲೆಗಳನ್ನು ಶಾಶ್ವತವಾಗಿ ಕಾಯ್ದಿರಿಸುವ ಕುರಿತಂತೆ ಅವುಗಳನ್ನು ಸ್ಕಾನಿಂಗ್ ಮತ್ತು ಡಿಜಿಟಲೈಶನ್ ಮಾಡುವ ಕುರಿತಂತೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗೆ ಅವರು ಸೂಚಿಸಿದ್ದಾರೆ.
`ಜಿಲ್ಲೆಯಲ್ಲಿ ಪ್ರಸಕ್ತ ಕ್ಯಾಲೆಂಡರ್ ವರ್ಷದಲ್ಲಿ ಇದುವರೆಗೆ 6494 ಗಂಡು ಮತ್ತು 6049 ಹೆಣ್ಣು ಮಗುವಿನ ಜನನವಾಗಿದೆ. 4771 ಪುರುಷರು ಮತ್ತು 3681 ಮಹಿಳೆಯರು ವಿವಿಧ ಕಾರಣಗಳಿಂದ ಮರಣ ಹೊಂದಿದ್ದಾರೆ’ ಎಂದು ಈ ಸಭೆಯಲ್ಲಿ ಮಾಹಿತಿ ನೀಡಲಾಗಿದೆ. ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸೋಮಶೇಖರ್ ಮೇಸ್ತಾ, ಕ್ರಿಮ್ಸ್ ಡೀನ್ ಡಾಪೂರ್ಣಿಮಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ನೀರಜ್, ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ ಸಭೆಯಲ್ಲಿದ್ದರು.