ಕೆಮ್ಮಿನ ಸಿರಪ್ ದುರುಯೋಗದಿಂದ ಮಕ್ಕಳಲ್ಲಿ ಗಂಭೀರ ಪ್ರಮಾಣದ ಆರೋಗ್ಯ ಸಮಸ್ಯೆ ಕಾಡುತ್ತಿದೆ. ಅಂಥ ಸಿರಪ್ ಮಾರುಕಟ್ಟೆಗೆ ಬಂದು ಅನೇಕರು ಬಳಸಿದ ತರುವಾಯ ಈ ವಿಷಯ ಸರ್ಕಾರದ ಗಮನಕ್ಕೆ ಬಂದಿದೆ. ಮಕ್ಕಳ ಆರೋಗ್ಯ ಕಾಪಾಡುವುದಕ್ಕಾಗಿ ಸಿರಪ್ ಬಳಕೆಗೆ ಸರ್ಕಾರ ಮಾರ್ಗದರ್ಶನ ಹೊರಡಿಸಿದೆ.
Advertisement. Scroll to continue reading.
ಚಿಕ್ಕ ಮಕ್ಕಳಿಗೆ ಕೆಮ್ಮಿನ ಸಿರಪ್‌ಗಳನ್ನು ನೀಡಬೇಡಿ
`2 ವರ್ಷಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮು ಅಥವಾ ಶೀತದ ಸಿರಪ್‌ಗಳನ್ನು ನೀಡಬೇಡಿ’ ಎಂದು ಸರ್ಕಾರ ಮನವಿ ಮಾಡಿದೆ. `2ರಿಂದ 5 ವರ್ಷಗಳ ವಯಸ್ಸಿನ ಮಕ್ಕಳಿಗೆ ಸರಿಯಾದ ವೈದ್ಯಕೀಯ ಪರೀಕ್ಷೆಯ ನಂತರ ತಜ್ಞ ವೈದ್ಯರ ನಿರ್ದಿಷ್ಟ ಸಲಹೆ ಮೇರೆಗೆ ಮಾತ್ರ ಔಷಧಿಗಳನ್ನು ನೀಡಬೇಕು’ ಎಂದು ಸೂಚಿಸಲಾಗಿದೆ. `ದೊಡ್ಡ ಮಕ್ಕಳಿಗೆ ಸಹ ಕೆಮ್ಮಿನ ಸಿರಪ್‌ಗಳನ್ನು ವೈದ್ಯರ ಸಲಹೆಯ ಮೇರೆಗೆ ಮಾತ್ರ ಬಳಸಬೇಕು. ಸಾಧ್ಯವಾದಷ್ಟು ಕಡಿಮೆ ಅವಧಿಗೆ ಕನಿಷ್ಠ ಅಗತ್ಯವಿರುವ ಡೋಸ್ ಮಾತ್ರ ಬಳಸಬೇಕು. ಬಹು ಔಷಧಿಗಳ ಸಂಯೋಜನೆ ಇರುವ ಸಿರಪ್‌ಗಳನ್ನು ಉಪಯೋಗಿಸಬಾರದು’ ಎಂದು ಸೂಚಿಸಲಾಗಿದೆ.
Advertisement. Scroll to continue reading.
ಸುರಕ್ಷಿತ ಮನೆಮದ್ದುಗಳು
ಹೆಚ್ಚಿನ ಸಂದರ್ಭಗಳಲ್ಲಿ ಮಕ್ಕಳಲ್ಲಿ ಕೆಮ್ಮು ಮತ್ತು ಶೀತವು ಸೌಮ್ಯವಾಗಿರುತ್ತದೆ. ಸುರಕ್ಷಿತವಾದ ಕ್ರಮಗಳಿಂದ ನಿಧಾನವಾಗಿ ಉತ್ತಮಗೊಳ್ಳುತ್ತದೆ. ಪೋಷಕರು ಮಕ್ಕಳಿಗೆ ಸಾಕಷ್ಟು ದ್ರವ ಪದಾರ್ಧಗಳನ್ನು ನೀಡುವುದು. ಸಾಕಷ್ಟು ವಿಶ್ರಾಂತಿ ಮತ್ತು ನಿದ್ರೆ ಮಾಡಲು ಅವಕಾಶ ನೀಡುವುದು. ಪೌಷ್ಟಿಕ ಆಹಾರವನ್ನು ನೀಡಬೇಕು ಎಂದು ಸೂಚಿಸಲಾಗಿದೆ.
Advertisement. Scroll to continue reading.
ಸ್ವಯಂ ಔಷಧೋಪಚಾರ ಮಾಡಬೇಡಿ
`ವೈದ್ಯರು ಪ್ರಿಸ್ಕಿçಪ್ಷನ್ ಇಲ್ಲದೇ ಕೆಮ್ಮಿನ ಸಿರಪ್‌ಗಳನ್ನು ಎಂದಿಗೂ ಖರೀದಿಸಬೇಡಿ. ಈ ಹಿಂದೆ ಬಳಸಿ ಉಳಿದ ಔಷಧಿಗಳನ್ನು ಅಥವಾ ಇತರರು ಶಿಫಾರಸು ಮಾಡಿದ ಔಷಧಿಗಳನ್ನು ಬಳಸುವುದನ್ನು ನಿಲ್ಲಿಸಿ. ಯಾವುದೇ ಅಸಹಜ ಪ್ರತಿಕ್ರಿಯೆ, ನಿದ್ರಾವಸ್ಥೆ, ವಾಂತಿ ಅಥವಾ ಉಸಿರಾಟದ ತೊಂದರೆಯನ್ನು ತಕ್ಷಣ ಹತ್ತಿರದ ತಜ್ಞ ವೈದ್ಯರಿಗೆ ವರದಿ ಮಾಡಿ. ಯಾವಾಗಲೂ ಔಷಧದ ಅವಧಿ ಮಗಿಯುವ ದಿನಾಂಕಗಳನ್ನು ಪರಿಶೀಲಿಸಿ ಮತ್ತು ಲೇಬಲ್‌ಗಳನ್ನು ಎಚ್ಚರಿಕೆಯಿಂದ ಓದಿ’ ಎಂದು ಸರ್ಕಾರ ಸೂಚನೆ ನೀಡಿದೆ.
`ಮಕ್ಕಳಲ್ಲಿ ಉಸಿರಾಟದ ತೊಂದರೆ ಅಥವಾ ವೇಗವಾಗಿ ಉಸಿರಾಟ, ನಿರಂತರ ಅಥವಾ ಉಲ್ಪಣಗೊಳ್ಳುತ್ತಿರುವ ಕೆಮ್ಮು, ಅತಿಯಾದ ಜ್ವರ ಅಥವಾ ಆಹಾರ ತಿರಸ್ಕರಿಸುವುದು. ನಿದ್ರಾವಸ್ಥೆ ಅಥವಾ ಅಸಹಜ ಪ್ರತಿಕ್ರಿಯೆ ಲಕ್ಷಣಗಳು ಕಂಡು ಬಂದರೆ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಗಳನ್ನು ಸಂಪರ್ಕಿಸಬೇಕು. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಠಿಯಿಂದ, ಔಷಧಿಗಳ ತರ್ಕಬದ್ದ ಬಳಕೆಯನ್ನು ಉತ್ತೇಜಿಸಲು ಮತ್ತು ಕೆಮ್ಮು ಸಿರಪ್‌ಗಳ ಅನುಚಿತ ಬಳಕೆಯಿಂದ ಉಂಟಾಗುವ ಹಾನಿಯನ್ನು ತಡೆಗಟ್ಟಲು ಈ ಎಲ್ಲಾ ಸಲಹೆಗಳನ್ನು ಪಾಲಿಸಬೇಕು’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಿಸಿದೆ.