ದಾಂಡೇಲಿಯಲ್ಲಿ ನಡೆದ ಅಪಘಾತದಲ್ಲಿ ಅಲ್ಲಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ ಅವರು ಗಾಯಗೊಂಡಿದ್ದು, ಸದ್ಯ ಅವರು ಆಸ್ಪತ್ರೆ ಸೇರಿದ್ದಾರೆ. ಸ್ಕೂಟಿಯಲ್ಲಿ ತೆರಳುತ್ತಿದ್ದ ಮೋಹನ ಹಲವಾಯಿ ಅವರಿಗೆ ಟಾಕ್ಟರ್ ಡಿಕ್ಕಿಯಾಗಿದೆ.
ದಾಂಡೇಲಿ ನಗರದ ಬರ್ಚಿ ರಸ್ತೆಯಲ್ಲಿ ಮಂಗಳವಾರ ಮುಂಜಾನೆ ಮೋಹನ ಹಲವಾಯಿ ಅವರು ಸಂಚರಿಸುತ್ತಿದ್ದರು. ಸ್ಕೂಟಿಯಲ್ಲಿ ಹೋಗುತ್ತಿದ್ದ ಅವರಿಗೆ ವೇಗವಾಗಿ ಬಂದ ಟಾಕ್ಟರ್ ಗುದ್ದಿತು. ಅದಾದ ನಂತರ ಆ ಟಾಕ್ಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯಿತು. ಸ್ಕೂಟಿಯಲ್ಲಿದ್ದ ಮೋಹನ ಹಲವಾಯಿ ಅವರು ನೆಲಕ್ಕೆ ಬಿದ್ದು ಪೆಟ್ಟು ಮಾಡಿಕೊಂಡರು.
ಮೋಹನ ಹಲವಾಯಿ ಅವರು ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ನಗರಸಭೆ ಸದಸ್ಯರಾಗಿಯೂ ಕೆಲಸ ಮಾಡುತ್ತಿದ್ದಾರೆ. ಅಪಘಾತದಲ್ಲಿ ಅವರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ. ಅಪಘಾತ ನೋಡಿದ ಜನ ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಾರೆ. ಅವರಿಗೆ ಸದ್ಯ ಚಿಕಿತ್ಸೆ ಮುಂದುವರೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.