ಕಾರವಾರದಲ್ಲಿನ ಮನೆಯೊಂದಕ್ಕೆ ಬೆಂಕಿ ಬಿದ್ದಿದ್ದು, ಲಕ್ಷಾಂತರ ರೂ ಮೌಲ್ಯದ ಸಾಮಗ್ರಿಗಳು ನಾಶವಾಗಿದೆ. ವಿದ್ಯುತ್ ಶಾರ್ಟ ಸರ್ಕೀಟ್ ಅವಘಡಕ್ಕೆ ಕಾರಣ ಎಂಬ ಮಾಹಿತಿ ಸಿಕ್ಕಿದೆ.
Advertisement. Scroll to continue reading.
ಕಾರವಾರ ನಗರ ಬಾಡದ ಗುರುಮಠದ ಸಮೀಪದ ಹಂಚಿನ ಮನೆಯಲ್ಲಿ ಶುಕ್ರವಾರ ಬೆಳಿಗ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಪ್ರವೀಣ ಜಾವೇಕರ ಅವರಿಗೆ ಸೇರಿದ ಮನೆ ಇದಾಗಿದ್ದು, ಕುಟುಂಬದ ಸದಸ್ಯರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಬೆಂಕಿಯ ಜ್ವಾಲೆ ಉಲ್ಬಣವಾಗಿದ್ದರಿಂದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿದೆ.
ಅಗ್ನಿಶಾಮಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸಿಬ್ಬಂದಿ ಬೆಂಕಿ ಆರಿಸುವ ಪ್ರಯತ್ನ ಮಾಡಿದ್ದಾರೆ. ಪರಿಣಾಮ ಇನ್ನಷ್ಟು ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿ ಉರಿಯುವುದು ತಪ್ಪಿದೆ. ಅಗ್ನಿಶಾಮಕ ಠಾಣಾಧಿಕಾರಿ ಮಹಾಬಲೇಶ್ವರ ಗೌಡ, ಪ್ರಮುಖ ಅಗ್ನಿಶಾಮಕ ಸಿಬ್ಬಂದಿ ಸಪ್ನಿಲ್ ಪೇಡ್ನೆಕರ, ಟೋನಿ, ಕುಮಾರ ಕೆ ಎನ್, ಪ್ರವೀಣ ಕೆ ಬೆಮಕಿಯ ಜ್ವಾಲೆ ಆರಿಸಿದ್ದಾರೆ.