ರಸ್ತೆ ಅಪಘಾತದಿಂದ ಆಗುವ ಸಾವು-ನೋವಿನ ಪ್ರಮಾಣ ತಗ್ಗಿಸುವುದಕ್ಕಾಗಿ ಕುಮಟಾ ಪೊಲೀಸರು ವಿನೂತನ ತಂತ್ರ ಅನುಸರಿಸುತ್ತಿದ್ದಾರೆ. ಸಂಚಾರಿ ನಿಯಮ ಉಲ್ಲಂಘಿಸುವವರ ಫೋಟೋ ತೆಗೆದು ತಮಗೆ ರವಾನಿಸುವಂತೆ ಪ್ರಕಟಣೆ ಹೊರಡಿಸಿದ್ದಾರೆ!
ADVERTISEMENT
ಕುಮಟಾ ವಿಭಾಗಾಧಿಕಾರಿ ಶ್ರವಣಕುಮಾರ ಅವರು ಸಂಚಾರಿ ನಿಯಮ ಕಟ್ಟುನಿಟ್ಟಿನ ಪಾಲನೆಗಾಗಿ ಸಭೆ ನಡೆಸಿದ್ದು, ಈ ಸಭೆಯಲ್ಲಿ ಸಾರ್ವಜನಿಕರ ಸಹಕಾರದಲ್ಲಿ ಸಂಚಾರಿ ನಿಯಮ ಪಾಲನೆ ಮಾಡುವವರನ್ನು ಶಿಕ್ಷಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಅದರ ಭಾಗವಾಗಿ ಹೆಲ್ಮೆಟ್ ಧರಿಸದೇ ಬರುವ ಬೈಕ್ ಸವಾರರಿಗೆ ಪೆಟ್ರೋಲ್ ನೀಡದಂತೆ ಬಂಕ್ ಮಾಲಕರಿಗೆ ಸೂಚಿಸಲಾಗಿದೆ. ಸೀಟ್ ಬೆಲ್ಟ ಧರಿಸದೇ ಕಾರು ಓಡಿಸುವವರಿಗೂ ಇದೇ ನಿಯಮ ಅನ್ವಯ ಆಗಲಿದೆ. ಅದರ ಮುಂದುವರೆದ ಭಾಗವಾಗಿ ಹೆಲ್ಮೆಟ್ ಧರಿಸದೇ ವಾಹನ ಓಡಿಸುವವರ ಫೋಟೋಗಳನ್ನು ರವಾನಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ADVERTISEMENT
ದ್ವಿಚಕ್ರವಾಹನದಲ್ಲಿ ಸಂಚರಿಸುವ ಪ್ರತಿಯೊಬ್ಬರು ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದ್ದು, `ಹಿಂಬದಿ ಸವಾರರು ಸಹ ಹೆಲ್ಮೆಟ್ ಧರಿಸಬೇಕು’ ಎಂದು ಪೊಲೀಸರು ಸೂಚನೆ ರವಾನಿಸಿದ್ದಾರೆ. `ಕಾರಿನಲ್ಲಿ ಸಂಚರಿಸುವವರು ಸೀಟ್ ಬೆಲ್ಟ್ ಧರಿಸಬೇಕು. ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರು ಕಂಡ ಜನ ಅವರ ವಾಹನದ ಜೊತೆ ಅವರ ಫೋಟೋ ತೆಗೆದು ತಮಗೆ ಕಳುಹಿಸಬೇಕು’ ಎಂದು ಪ್ರಕಟಣೆ ನೀಡಿದ್ದಾರೆ.
✨ ಒಂದೇ ಸೂರಿನಡಿ ಹಲವು ಸಾಮಗ್ರಿ ಖರೀದಿಸಿ ✨
ಹಬ್ಬದ ಸಡಗರ ಇನ್ನಷ್ಟು ಹೆಚ್ಚಿಸಿ
📅 ದಿನಾಂಕ: ಅಕ್ಟೋಬರ್ 24 & 25
📍 ಸ್ಥಳ: ಹೊಟೇಲ್ ಸುಪ್ರಿಯಾ, ಶಿರಸಿ
ADVERTISEMENT
ಸಂಚಾರಿ ನಿಯಮ ಉಲ್ಲಂಘಿಸುವವರ ಫೋಟೋ ಇಲ್ಲಿ ಕಳುಹಿಸಿ: 9480805234, 9480805272, 8277988244 ಅಥವಾ 8277988236