• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕೆಲಸ ಮಾಡದೇ ಕಾಸು ಹೊಡೆದವರಿಗೆ ಅಮಾನತು ಶಿಕ್ಷೆ!

September 8, 2026
DJ Ban Ganeshotsav organizer expresses dissatisfaction!

ಡಿಜೆ ನಿಷೇಧ: ಅಸಮಧಾನವ್ಯಕ್ತಪಡಿಸಿದ ಗಣೇಶೋತ್ಸವದ ಆಯೋಜಕ!

September 8, 2026
Ganesh Festival: Use of DJs is prohibited. No permission for loudspeakers at night either!

ಗಣೇಶ ಹಬ್ಬ: ಡಿಜೆ ಬಳಸುವ ಹಾಗಿಲ್ಲ. ರಾತ್ರಿ ಮೈಕ್’ಗೂ ಅನುಮತಿ ಇಲ್ಲ!

  • Home
  • Janamata
Wednesday, September 9, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕೈಗಾ: ಇಮೇಲ್ ಮೂಲಕ ವಿಕಿರಣ ಸೋರಿಕೆ!

Achyutkumar by Achyutkumar
Kaiga Radiation leak via email!
Share on FacebookShare on WhatsappShare on Twitter
ADVERTISEMENT

ಕೈಗಾ ಅಣು ವಿದ್ಯುತ್ ಘಟಕದಲ್ಲಿ ವಿಕಿರಣ ಸೋರಿಕೆಯಾದ ಬಗ್ಗೆ ಜಿಲ್ಲಾಡಳಿತಕ್ಕೆ ಇಮೇಲ್ ಹಾಗೂ ಫಾಕ್ಸ್ ಮೂಲಕ ಸಂದೇಶ ಬಂದಿದೆ. ತರಾತುರಿಯಲ್ಲಿ ಜಿಲ್ಲಾಡಳಿತ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, `ಅಣು ವಿಕಿರಣ ಸೋರಿಕೆಯಾದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಆಯೋಜಿಸಿದ್ದ ಅಣಕು ಕಾರ್ಯಾಚರಣೆ ಯಶಸ್ವಿಯಾಗಿದೆ’ ಎಂದು ಸಂಜೆ ವೇಳೆಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ತಿಳಿಸಿದ್ದಾರೆ.

Advertisement. Scroll to continue reading.

ಅಣು ವಿಕಿರಣ ಸೋರಿಕೆ ಆದಲ್ಲಿ ಕೈಗೊಳ್ಳಬೇಕಾದ ಮುನ್ನಚ್ಚರಿಕೆ ಬಗ್ಗೆ ಪ್ರತಿ ವರ್ಷವೂ ಜನರಲ್ಲಿ ಅರಿವು ಮೂಡಿಸಲು ಅಣಕು ಕಾರ್ಯಾಚರಣೆ ನಡೆಸಲಾಗುತ್ತಿದೆ. ಅದರ ಪ್ರಕಾರ, ಕೈಗಾ ಅಣು ವಿದ್ಯುತ್ ಘಟಕದಲ್ಲಿ ವಿಕಿರಣ ಸೋರಿಕೆ ನಡೆದಾಗ ಅನುಸರಿಸಬೇಕಾದ ವಿಧಾನಗಳ ಬಗ್ಗೆ ಗುರುವಾರ ತಾಲೀಮು ನಡೆಸಲಾಗಿದೆ. ಪೂರ್ವ ಸೂಚನೆಯ ಪ್ರಕಾರ ಕೈಗಾ ಸೈಟ್ ಡೈರೆಕ್ಟರ್ ಬೆಳಗ್ಗೆ 6.30ಕ್ಕೆ ಫ್ಯಾಕ್ಸ್ ಹಾಗೂ ಇಮೇಲ್ ಸಂದೇಶದ ಮೂಲಕ ಜಿಲ್ಲಾಡಳಿತಕ್ಕೆ ಅಣು ವಿಕಿರಣದ ಸೋರಿಕೆ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಕಿರಣ ಸೋರಿಕೆ ವಲಯಗಳಾದ ಹರ್ಟುಗಾ, ಗೂಳೆ ಮತ್ತು ನಗೆಕೋವೆ, ಕುಚೆಗಾರ, ಶಿರ್ವೆ, ಕೆರವಡಿ, ದೇವಳಮಕ್ಕಿ ಗ್ರಾಮಗಳನ್ನು ಪ್ರಭಾವಿತ ಗ್ರಾಮಗಳೆಂದು ಗುರುತಿಸಿ ಅಲ್ಲಿ ಕಾರ್ಯಾಚರಣೆಯನ್ನು ನಡೆಸಲಾಗಿದೆ.

ADVERTISEMENT

ವಿಕಿರಣ ಸೋರಿಕೆ ಬಗ್ಗೆ ಕೈಗಾ ಸ್ಥಳ ನಿರ್ದೇಶಕರಿಂದ ಮಾಹಿತಿ ಸ್ವೀಕೃತಿಯಾದ ಕೂಡಲೇ ಜಿಲ್ಲಾಧಿಕಾರಿಗಳು ಸಭೆ ನಡೆಸಿದ್ದು, ಎಲ್ಲಾ ಅಧಿಕಾರಿಗಳಿಗೆ ತುರ್ತು ಅಗತ್ಯ ಕಾರ್ಯಾಚರಣೆ ಕೈಗೊಳ್ಳುವಂತೆ ಸೂಚನೆ ನೀಡಿದರು. ವಿಕಿರಣದಿಂದ ಪ್ರಭಾವಕ್ಕೆ ಒಳಗಾದ ಗ್ರಾಮಗಳಿಗೆ ವಾಹನ ಸಂಚಾರ ನಿಷೇಧಿಸಿದರು. ಅಣು ವಿಕಿರಣವು ವಾತಾವರಣದಲ್ಲಿ ಗಾಳಿಯ ಮೂಲಕ ಹರಡುತ್ತಿದ್ದ ಕಾರಣ ಜನರಿಗೆ ಅರಿವು ಮೂಡಿಸಲಾಯಿತು.

Advertisement. Scroll to continue reading.
ADVERTISEMENT

`ಅಣು ವಿದ್ಯುತ್ ಸ್ಥಾವರದಲ್ಲಿ ಸೋರಿಕೆಯಾದ ಅಣು ವಿಕಿರಣದ ಪ್ರಮಾಣವು ಅತ್ಯಂತ ಕಡಿಮೆ ಇದ್ದು, ಇದು ಸಾರ್ವಜನಿಕರಿಗೆ ಹೆಚ್ಚಿನ ಅಪಾಯ ಒಡ್ಡುವುದಿಲ್ಲ. ಈ ಸೋರಿಕೆಯನ್ನು ನಿಯಂತ್ರಿಸಲು ತಂತ್ರಜ್ಞರು ಎಲ್ಲಾ ರೀತಿಯ ಗರಿಷ್ಠ್ಠ ಪ್ರಯತ್ನಗಳನ್ನು ಕೈಗೊಳ್ಳುತ್ತಿದ್ದು, ಜಿಲ್ಲಾಡಳಿತದೊಂದಿಗೆ ಕೈಗಾ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದಾರೆ’ ಎಂದು ಡೀಸಿ ಜನರಿಗೆ ಭರವಸೆ ನೀಡಿದರು. `ಸೋಷಿಯಲ್ ಮೀಡಿಯಾಗಳಲ್ಲಿ ಬರುವ ಯಾವುದೇ ಊಹಾಪೋಹಗಳಿಗೆ ಕಿವಿಗೊಡದೇ ಜಿಲ್ಲಾಡಳಿತವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೀಡುವ ಪ್ರಕಟಣೆಗಳನ್ನು ಮಾತ್ರ ಗಮನಿಸಬೇಕು’ ಎಂದು ಮನವಿ ಮಾಡಿದರು.

ಅಣು ವಿಕಿರಣವು ಹರಡುತ್ತಿದ್ದ ಪ್ರದೇಶಗಳಲ್ಲಿನ ಸಾರ್ವಜನಿಕರಿಗೆ ಆರೋಗ್ಯ ಇಲಾಖೆ ವತಿಯಿಂದ ವಿಕಿರಣದ ಅಪಾಯವಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಕಿರಣ ತಡೆ ನಿಯಂತ್ರಣ ಮಾತ್ರೆಗಳನ್ನು ವಿತರಿಸಲಾಯಿತು. ಈ ಪ್ರದೇಶಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ಮುಂದಿನ ಆದೇಶದವರೆಗೆ ರಜೆಯನ್ನು ಘೋಷಿಸಲಾಯಿತು. ಸಾರ್ವಜನಿಕರಿಗೆ ಸ್ಥಳೀಯವಾಗಿ ಸಿದ್ದಪಡಿಸಿದ ಆಹಾರ ಮತ್ತು ನೀರು ಸೇವನೆ ಮಾಡದಂತೆ ಸೂಚನೆ ಸಿಕ್ಕಿತು. ಜಿಲ್ಲಾಡಳಿತದ ವತಿಯಿಂದ ಪ್ರಭಾವಿತ ವಲಯದ ಹೊರಗಿನಿಂದ ಸಿದ್ದಪಡಿಸಿದ ಆಹಾರದ ಪ್ಯಾಕೇಟ್‌ಗಳನ್ನು ಮತ್ತು ಕುಡಿಯುವ ನೀರಿನ ಬಾಟೆಲ್‌ಗಳನ್ನು ಸರಬರಾಜು ಮಾಡಲಾಯಿತು.

ವಿಕಿರಣ ಹರಡಿದ್ದ ಹರ್ಟುಗಾ ಗ್ರಾಮದ ನಿವಾಸಿಗಳನ್ನು ಪ್ರಭಾವಿತ ವಲಯದ ಹೊರಗಿನ ಜೋಯಿಡಾ ತಾಲ್ಲೂಕಿನ ಕುಂಬಾರವಾಡದ ಸಮುದಾಯ ಭವನಕ್ಕೆ ಮತ್ತು ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು. ವಿಕಿರಣ ಪ್ರಸಾರಗೊಂಡಿದ್ದ ಇತರೇ ಗ್ರಾಮಗಳಲ್ಲಿನ ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯ ಮೂಲಕ ತಪಾಸಣೆ ನಡೆಯಿತು. ಸಂಜೆ ವೇಳೆ ಅಣಕು ಕಾರ್ಯಾಚರಣೆ ಯಶಸ್ವಿಯಾದ ಬಗ್ಗೆ ಡೀಸಿ ಘೋಷಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕೆಲಸ ಮಾಡದೇ ಕಾಸು ಹೊಡೆದವರಿಗೆ ಅಮಾನತು ಶಿಕ್ಷೆ!

September 8, 2026
DJ Ban Ganeshotsav organizer expresses dissatisfaction!

ಡಿಜೆ ನಿಷೇಧ: ಅಸಮಧಾನವ್ಯಕ್ತಪಡಿಸಿದ ಗಣೇಶೋತ್ಸವದ ಆಯೋಜಕ!

September 8, 2026
Ganesh Festival: Use of DJs is prohibited. No permission for loudspeakers at night either!

ಗಣೇಶ ಹಬ್ಬ: ಡಿಜೆ ಬಳಸುವ ಹಾಗಿಲ್ಲ. ರಾತ್ರಿ ಮೈಕ್’ಗೂ ಅನುಮತಿ ಇಲ್ಲ!

September 8, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!