ಶಿರಸಿಯ ಸ್ಕೋಡ್‌ವೆಸ್ ಸಂಸ್ಥೆಯೂ ಕರ್ನಾಟಕದ ಕರಾವಳಿ ಭಾಗದಲ್ಲಿ ಕಾಂಡ್ಲಾ ಕಾಡು ಕಾಪಾಡುವ ಅಭಿಯಾನ ಶುರು ಮಾಡಿದೆ. ಕುಮಟಾದ ಕಿಮಾನಿ ಅಘನಾಶಿನಿ ನದಿ ತೀರಲ್ಲಿ ಈ ಅಭಿಯಾನಕ್ಕೆ ಚಾಲನೆ ಸಿಕ್ಕಿದೆ.
ಆಸ್ಟರ್ ಡಿ ಎಮ್ ಫೌಂಡೇಶನ್‌ನ ಆಸ್ಟರ್ ವಾಲೆಂಟರ‍್ಸ್, ಸ್ಕೊಡ್‌ವೆಸ್ ಸಂಸ್ಥೆ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ಈ ಅಭಿಯಾನ ನಡೆಯುತ್ತಿದೆ. ಅಭಿಯಾನಕ್ಕೆ ಚಾಲನೆ ನೀಡಿದ ಕುಮಟಾ ಉಪವಿಭಾಗೀಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೃಷ್ಣೇಗೌಡ ಅವರು `ಕಾಂಡ್ಲಾ ವನಗಳು ಅತೀ ಹೆಚ್ಚು ಆಮ್ಲಜನಕ ಉತ್ಪಾದಿಸುವ ಸಸ್ಯ ಪ್ರಬೇಧಗಳಾಗಿವೆ. ಈ ಪ್ರದೇಶದಲ್ಲಿ ವಿಶಿಷ್ಟ ರೀತಿಯ ಜೀವ ವೈವಿಧ್ಯ ಸರಪಳಿಗಳು ಸಹಜವಾಗಿಯೇ ರೂಪುಗೊಳ್ಳುತ್ತವೆ. ಅಲ್ಲದೇ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸುಮಾರು ಶೇ 65 ಕ್ಕಿಂತ ಹೆಚ್ಚಿನ ಪ್ರಮಾಣದ ಅನಾಹುತಗಳನ್ನು ತಡೆಯುವುದರಿಂದ ಕಾಂಡ್ಲಾ ಸಂರಕ್ಷಣೆಯ ಜವಾಬ್ದಾರಿ ಸಾರ್ವತ್ರಿಕಗೊಳ್ಳಬೇಕು’ ಎಂದು ಕರೆ ನೀಡಿದ್ದಾರೆ.
ಆಸ್ಟರ್ ಡಿ ಎಮ್ ಫೌಂಡೇಶನ್‌ನ ಸಿಎಸ್‌ಆರ್ ವಿಭಾಗದ ಮುಖ್ಯಸ್ಥ ರೋಹನ್ ಪ್ರಾಂಕೋ ಮಾತನಾಡಿ `ಭಾರತದ ಪಶ್ಚಿಮ ಸಾಗರ ತೀರ ಪ್ರದೇಶಗಳ ಸಂರಕ್ಷಣೆಯಲ್ಲಿ ಕಾಂಡ್ಲಾ ನೆಡುತೋಪುಗಳು ಪ್ರಮುಖ ಪಾತ್ರವಹಿಸುತ್ತಿರುವುದರಿಂದ ಅವುಗಳನ್ನು ಸಂರಕ್ಷಿಸುವ ಅವಶ್ಯಕತೆಯಿದೆ. ಹೀಗಾಗಿ ಕರ್ನಾಟಕದ ಕರಾವಳಿ ತೀರಗಳಲ್ಲಿ ಪ್ರತಿಷ್ಠಿತ ಸ್ಕೊಡ್‌ವೆಸ್ ಸಂಸ್ಥೆಯ ಸಹಯೋಗದಲ್ಲಿ ಕಾಂಡ್ಲಾ ಸಂರಕ್ಷಣಾ ಅಭಿಯಾನ ನಡೆಸುತ್ತಿದ್ದೇವೆ’ ಎಂದು ಹೇಳಿದ್ದಾರೆ. ಸ್ಕೊಡ್‌ವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟೇಶ ನಾಯ್ಕ ಮಾತನಾಡಿ `ಕಾಂಡ್ಲಾ ಸಂರಕ್ಷಣಾ ಅಭಿಯಾನದಲ್ಲಿ 05 ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಡುವ ಉದ್ದೇಶ ಹೊಂದಲಾಗಿದೆ. ಈಗಾಗಲೇ ನೆಡುತೋಪು ಕಾರ್ಯ ಆರಂಭಗೊAಡಿದೆ’ ಎಂದಿದ್ದಾರೆ.
ಸ್ಕೊಡ್‌ವೆಸ್‌ನ ಕೃಷಿ ವಿಭಾಗದ ಮುಖ್ಯಸ್ಥ ಪ್ರಶಾಂತ ನಾಯಕ, ಸಂಯೋಜಕ ಗಂಗಾಧರ ನಾಯ್ಕ, ವಲಯ ಅರಣ್ಯಾಧಿಕಾರಿ ರಾಜು ನಾಯ್ಕ, ಆಸ್ಟರ್ ಡಿ ಎಮ್ ಫೌಂಡೇಶನ್‌ನ ಸ್ವಯಂ ಸೇವಕರು ಹಾಗೂ ಸ್ಕೊಡ್‌ವೆಸ್ ಸಂಸ್ಥೆಯ ಸಿಬ್ಬಂದಿ ಈ ಕಾರ್ಯಕ್ರಮದಲ್ಲಿದ್ದರು.