ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷರಾಗಿದ್ದ ಅನಂತಮೂರ್ತಿ ಹೆಗಡೆ ಅವರನ್ನು ಇದೀಗ ರೈತ ಮೋರ್ಚಾ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಸೊಪ್ಪಿನ ಬೆಟ್ಟದ ಸಮಸ್ಯೆ, ಬೆಳೆ ವಿಮೆ ಪರಿಹಾರ ಬಾರದಿರುವಿಕೆ, ಕೃಷಿ-ಮಾಧ್ಯಮಿಕ ಸಾಲ ಮಂಜೂರಾತಿ ವಿಷಯದಲ್ಲಿ ವಿಳಂಬ, ಪಹಣಿ ಪತ್ರಿಕೆ ದರ ದುಬಾರಿ ಸೇರಿ ರೈತರು ಅನುಭವಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಅನಂತಮೂರ್ತಿ ಹೆಗಡೆ ಅವರು ಧ್ವನಿ ಎತ್ತುವ ಸಾಧ್ಯತೆಗಳಿವೆ. ಈ ಹಿಂದೆ ಅನಂತಮೂರ್ತಿ ಹೆಗಡೆ ಅವರು ತಮ್ಮ ಸ್ವಂತ ಹಣದಲ್ಲಿ ಕೊನೆಗೌಡರಿಗೆ ವಿಮೆ ಮಾಡಿಸಿದ್ದರು. ಜೊತೆಗೆ ಸಂಕಷ್ಟಕ್ಕೆ ಒಳಗಾದ ರೈತರನ್ನು ಭೇಟಿ ಮಾಡಿ ಸಮಾಧಾನ ಹೇಳಿದ್ದರು. ಅದರೊಂದಿಗೆ ಬಿಜೆಪಿ ಸಂಘಟನೆಗೆ ಶ್ರಮಿಸಿದ್ದರು.
ಅನಂತಮೂರ್ತಿ ಹೆಗಡೆ ಅವರು ಅಡಿಕೆ ಬೆಳೆಗಾರರಾಗಿದ್ದು, ರೈತರ ಸಮಸ್ಯೆಗಳ ಬಗ್ಗೆ ಅರಿವು ಹೊಂದಿದ್ದಾರೆ. ಈ ಎಲ್ಲಾ ಹಿನ್ನಲೆ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷರಾಗಿದ್ದ ಅನಂತಮೂರ್ತಿ ಹೆಗಡೆ ಅವರನ್ನು ಅಧ್ಯಕ್ಷ ಸ್ಥಾನ ಕೊಡಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಎನ್ ಎಸ್ ಹೆಗಡೆ ಅವರು ಬಿಜೆಪಿಯ ಉತ್ತg ಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರ ನೇಮಕಾತಿ ಆದೇಶ ಹೊರಡಿಸಿದ್ದಾರೆ. `ಪಕ್ಷ ನೀಡಿದ ಈ ಹುದ್ದೆಗೆ ನ್ಯಾಯ ಕೊಡಿಸುವುದರ ಜೊತೆ ರೈತ ಪರ ಧ್ವನಿಯಾಗುವೆ’ ಎಂದು ಅನಂತಮೂರ್ತಿ ಹೆಗಡೆ ಹೇಳಿದ್ದಾರೆ.