• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
He is not an officer!

ಆತ ಅಧಿಕಾರಿಯೇ ಅಲ್ಲ!

May 11, 2026

ಆರ್ ಸಿ ಬಿ: ಕ್ರಿಕೆಟ್ ಪಾರ್ಟಿಯಲ್ಲಿ ಕಿರಿಕ್!

May 11, 2026
Bike skid One person death another pain!

ಬೈಕ್ ಸ್ಕಿಡ್: ಒಬ್ಬರ ಸಾವು-ಮತ್ತೊಬ್ಬರಿಗೆ ನೋವು!

May 11, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
He is not an officer!

ಆತ ಅಧಿಕಾರಿಯೇ ಅಲ್ಲ!

May 11, 2026

ಆರ್ ಸಿ ಬಿ: ಕ್ರಿಕೆಟ್ ಪಾರ್ಟಿಯಲ್ಲಿ ಕಿರಿಕ್!

May 11, 2026
Bike skid One person death another pain!

ಬೈಕ್ ಸ್ಕಿಡ್: ಒಬ್ಬರ ಸಾವು-ಮತ್ತೊಬ್ಬರಿಗೆ ನೋವು!

May 11, 2026
  • Home
Tuesday, May 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಜನೌಷಧಿ ಕೇಂದ್ರ: ಜನರ ದೂರಿಗೆ ಸ್ಪಂದಿಸಿದ ಸಂಸದ

Achyutkumar by Achyutkumar
February 27, 2026
320
VIEWS
Share on FacebookShare on WhatsappShare on Twitter
ADVERTISEMENT

`ಕಡಿಮೆ ದರದಲ್ಲಿ ಉನ್ನತ ಗುಣಮಟ್ಟದ ಔಷಧಿ ಸಿಗಲಿ’ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಎಲ್ಲಡೆ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಿದೆ. ಆದರೆ, `ಜನೌಷಧಿ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಅಗತ್ಯವಿರುವ ಔಷಧಿಗಳೇ ಸಿಗುತ್ತಿಲ್ಲ’ ಎಂಬ ಆಕ್ಷೇಪವ್ಯಕ್ತವಾಗಿದೆ.

ADVERTISEMENT

ಇದೇ ವಿಷಯವಾಗಿ ಶುಕ್ರವಾರ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾತನಾಡಿದ್ದು, `ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಜನೌಷಧಿ ಕೇಂದ್ರದಲ್ಲಿ ಔಷಧಿ ಸಿಗಬೇಕು’ ಎಂದು ತಾಕೀತು ಮಾಡಿದ್ದಾರೆ. `ಜನೌಷಧಿ ಕೇಂದ್ರಗಳಲ್ಲಿ ಸಾರ್ವಜನಿಕರಿಂದ ಹೆಚ್ಚು ಬೇಡಿಕೆ ಇರುವ ಔಷಧಗಳ ಸಿಗುತ್ತಿಲ್ಲ ಎಂಬ ದೂರುಗಳಿವೆ. ಸಾರ್ವಜನಿಕರಿಗೆ ದುಬಾರಿ ಬೆಲೆಯ ಔಷಧಗಳನ್ನು ಕಡಿಮೆ ಬೆಲೆಯಲ್ಲಿ ನೀಡುವ ಉದ್ದೇಶದಿಂದಲೇ ಜನೌಷಧಿ ಕೇಂದ್ರ ತೆರೆಯಲಾಗಿದ್ದು, ಅಲ್ಲಿ ಯಾವುದೇ ಔಷಧಗಳ ಕೊರತೆ ಆಗದಂತೆ ಎಚ್ಚರಿಕೆವಹಿಸಬೇಕು’ ಎಂದವರು ಆರೋಗ್ಯ ಇಲಾಖೆ ಮತ್ತು ಜಿಲ್ಲಾ ಔಷಧ ನಿಯಂತ್ರಕರಿಗೆ ನಿರ್ದೇಶನ ನೀಡಿದ್ದಾರೆ. ಇದರೊಂದಿಗೆ ಅಗತ್ಯವಿರುವ ಕಡೆ ಹೊಸ ಜನೌಷಧಿ ಕೇಂದ್ರಗಳನ್ನು ತೆರೆಯಲು ಅಗತ್ಯ ಅನುಮತಿ ಕೊಡಬೇಕು’ ಎಂದು ಸೂಚಿಸಿದ್ದಾರೆ.

ADVERTISEMENT

`ಆರೋಗ್ಯ ಇಲಾಖೆಯ ಹೊಸ ಕಟ್ಟಡಗಳು ನಿರ್ಮಾಣವಾದ ನಂತರ ಹಳೆಯ ಕಟ್ಟಡಗಳನ್ನು ಬಳಸದೇ ಇರುವುದರಿಂದ ಶಿಥಿಲಾವಸ್ಥೆಗೆ ತಲುಪುತ್ತಿದೆ. ಈ ಕಟ್ಟಡಗಳನ್ನು ಸಾಮಾಜಿಕ ಚಟುವಟಿಕೆಗಳ ಬಳಕೆಗೆ ನೀಡುವ ಕುರಿತಂತೆ ಕ್ರಮ ಜರುಗಿಸಬೇಕು. ಆಯುಷ್ಮಾನ್ ಕಾರ್ಡ್ ಮತ್ತು ಹಿರಿಯ ನಾಗರಿಕರಿಗೆ ನೀಡುವ ವಯೋ ವಂದನಾ ಕಾರ್ಡ್ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ವಿತರಿಸುವ ಕುರಿತು ಶಿಬಿರ ಆಯೋಜಿಸಬೇಕು. ಕುಮಟಾದಲ್ಲಿ ಟ್ರಾಮಾ ಸೆಂಟರನ್ನು ತ್ವರಿತವಾಗಿ ಆರಂಭಿಸಲು ಕ್ರಮ ಜರುಗಿಸಬೇಕು. ಕ್ರಿಮ್ಸ್ಗೆ ಸರಬರಾಜಾಗಿರುವ ವೈದ್ಯಕೀಯ ಉಪಕರಣಗಳನ್ನು ಶೀಘ್ರದಲ್ಲಿ ಅಳವಡಿಸಿ, ಸಾರ್ವಜನಿಕರಿಗೆ ಅವುಗಳ ಪ್ರಯೋಜನ ಒದಗಿಸುವಂತೆ ಮಾಡಬೇಕು’ ಎಂದು ಅವರು ಸೂಚನೆ ನೀಡಿದ್ದಾರೆ.

ADVERTISEMENT

`ಮಳೆ ಮಾಪನ ಕೇಂದ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪರಿಶೀಲಿಸಿ ಅಗತ್ಯವಿರುವಲ್ಲಿ ಹೊಸ ಯಂತ್ರಗಳನ್ನು ಶೀಘ್ರದಲ್ಲಿ ಅಳವಡಿಸಬೇಕು. ಬೆಳೆ ವಿಮೆಯ ಮೊತ್ತ ರೈತರಿಗೆ ಸಮರ್ಪಕವಾಗಿ ತಲುಪಬೇಕು. ಕೇಂದ್ರ ಪುರಸ್ಕೃತ ತೋಟಗಾರಿಕಾ ಇಲಾಖೆಯ ಯೋಜನೆಗಳನ್ನು ಎಲ್ಲಾ ರೈತರಿಗೆ ತಲುಪಿಸಬೇಕು’ ಎಂದು ಸೂಚಿಸಿದ್ದಾರೆ. ಕೃಷಿ ಇಲಾಖೆಯಿಂದ ರೈತರ ಪಂಪ್ ಸೆಟ್‌ಗಳಿಗೆ ಸೋಲಾರ್ ಅಳವಡಿಸುವ ಕುಸುಮ್ ಬಿ ಯೋಜನೆಯ ಬಗ್ಗೆ ವ್ಯಾಪಕ ಪ್ರಚಾರ ಮತ್ತು ಮತ್ತು ಅರಿವು ಮೂಡಿಸಬೇಕು. ಸೂರ್ಯ ಘರ್ ಯೋಜನೆಯನ್ನು ಜಿಲ್ಲೆಯ ಸರಕಾರಿ ಕಚೇರಿಗಳಲ್ಲಿ ಅಳವಡಿಸಬೇಕು’ ಎಂದವರು ಹೇಳಿದ್ದಾರೆ.

ಪ್ರಮುಖ ಪ್ರವಾಸಿ ತಾಣಗಳಾದ ಗೋಕರ್ಣ, ಮುರುಡೇಶ್ವರ, ಬನವಾಸಿ, ಉಳವಿ ಸೇರಿದಂತೆ ಎಲ್ಲಾ ಸ್ಥಳಗಳಲ್ಲಿ ಕಂಡುಬರುವ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಂತೆ ಸೂಚಿಸಿದ ಅವರು `ನಗರಸ್ಥಳೀಯ ಸಂಸ್ಥೆಗಳ ತಮ್ಮ ವ್ಯಾಪ್ತಿಯ ಅಕ್ಕಪಕ್ಕದಲ್ಲಿನ ಗ್ರಾಮಗಳ ತ್ಯಾಜ್ಯವನ್ನೂ ಕೂಡಾ ಸಂಗ್ರಹಿಸಬೇಕು, ಪ್ರವಾಸಿ ತಾಣಗಳಲ್ಲಿ ತ್ಯಾಜ್ಯ ವಿಲೇವಾರಿಗೆ ವಿಶೇಷ ಕಾರ್ಯಕ್ರಮ ರೂಪಿಸಿ ಅಭಿಯಾನ ನಡೆಸಬೇಕು. ನಗರ ಪ್ರದೇಶಗಲ್ಲಿ ಅವಶ್ಯವಿರುವ ಕಡೆಗಳಲ್ಲಿ ಮೊಬೈಲ್ ಟಾಯ್ಲೆಟ್ ಗಳನ್ನು ಅಳವಡಿಸಬೇಕು’ ಎಂದು ಹೇಳಿದರು. ಸರ್ಕಾರಿ ಕಚೇರಿಗಳಲ್ಲಿರುವ ಅನುಪಯುಕ್ತ ವಸ್ತು ಮತ್ತು ವಾಹನಗಳನ್ನು ನಿಯಮಾನುಸಾರ ವಿಲೇವಾರಿ ಮಾಡಿ ಸ್ವಚ್ಛತೆ ಕಾಪಾಡುವಂತೆ ತಿಳಿಸಿದರು.

ಕುಟುಂಬಕ್ಕೆ ಆಧಾರವಾಗಿದ್ದ ವ್ಯಕ್ತಿ ಮೃತಪಟ್ಟರೆ ನೀಡುವ ಪರಿಹಾರ ಯೋಜನೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 629 ಮಂದಿ ಮಾತ್ರ ಪಡೆದಿದ್ದು, ಈ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಹೆಚ್ಚು ಅರಿವು ಮೂಡಿಸುವಂತೆ ಮತ್ತು ಅರ್ಜಿ ಸಲ್ಲಿಸುವ ವಿಧಾನಗಳನ್ನು ಸಾರ್ವಜನಿಕರಿಗೆ ತಿಳಿಸುವಂತೆ ಸಂಸದರು ತಿಳಿಸಿದರು, ಈ ಕುರಿತಂತೆ ಉತ್ತರಿಸಿದ ಜಿಲ್ಲಾಧಿಕಾರಿಗಳು ಈ ಯೋಜನೆಯ ನೆರವು ಪಡೆಯಲು ಸಂತ್ರಸ್ಥರ ಕುಟುಂಬದವರು ಜಿಲ್ಲೆಯ ಅಟಲ್ ಜನಸ್ನೇಹಿ ಕೇಂದ್ರ ಅಥವಾ ಗ್ರಾಮ ಒನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದರು. ವಸತಿ ಯೋಜನೆಗಳ ಕುರಿತು ಪರಿಶೀಲನೆ ನಡೆಸಿ ಜಿಲ್ಲೆಯಲ್ಲಿ ಬಾಕಿ ಇರುವ ವಸತಿ ಯೋಜನೆಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಿ ಫಲಾನುಭವಿಗಳಿಗೆ ಮನೆ ವಿತರಿಸುವಂತೆ ಮತ್ತು ದಾಂಡೇಲಿಯಲ್ಲಿನ ವಸತಿ ನಿರ್ಮಾಣದ ಕುರಿತು ಸಮಸ್ಯೆಯನ್ನು ಇತ್ಯರ್ಥಪಡಿಸಿ ಅರ್ಹರಿಗೆ ಮನೆ ಮಂಜೂರು ಮಾಡಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು. `ಜಲ ಜೀವನ ಮಿಷನ್ ಯೋಜನೆಯಡಿ ಲೆಫ್ಟ್ ಔಟ್ ಹಳ್ಳಿಗಳಿಗೆ ಯೋಜನೆ ರೂಪಿಸಲು ಅಗತ್ಯ ಅನುಮೋದನೆ ಪಡೆದುಕೊಳ್ಳಿ. ಬಹುಗ್ರಾಮ ಕುಡಿಯುವ ನೀರು ಯೋಜನೆಗಳನ್ನು ಆದ್ಯತೆಯಲ್ಲಿ ಮುಕ್ತಾಯಗೊಳಿಸಿ. ಈಗಾಗಲೇ ಜಿಲ್ಲೆಯಲ್ಲಿ ಮುಕ್ತಾಯಗೊಂಡಿರುವ ಜಲ ಜೀವನ ಮಿಷÀನ್ ಕಾಮಗಾರಿಗಳ ಪ್ರಗತಿ ಬಗ್ಗೆ 2 ವಾರದಲ್ಲಿ ವರದಿ ನೀಡಿ, ಪ್ರಸ್ತುತ ಬೇಸಿಗೆ ಆರಂಭವಾಗಿದ್ದು ನಗರ ಪ್ರದೇಶದಲ್ಲಿ ಮತ್ತು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಾರದAತೆ ತಕ್ಷಣದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ’ ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಕೆ ಲಕ್ಷಿಪ್ರಿಯ, ಜಿ ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ ಇದ್ದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
He is not an officer!

ಆತ ಅಧಿಕಾರಿಯೇ ಅಲ್ಲ!

May 11, 2026

ಆರ್ ಸಿ ಬಿ: ಕ್ರಿಕೆಟ್ ಪಾರ್ಟಿಯಲ್ಲಿ ಕಿರಿಕ್!

May 11, 2026
Bike skid One person death another pain!

ಬೈಕ್ ಸ್ಕಿಡ್: ಒಬ್ಬರ ಸಾವು-ಮತ್ತೊಬ್ಬರಿಗೆ ನೋವು!

May 11, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋