ಶಿರಸಿಯ ಪ್ರತಿಷ್ಠಿತ ಶ್ರೀ ಭೂತೇಶ್ವರ ಪತ್ತಿನ ಸಹಕಾರಿ ಸಂಘಕ್ಕೆ ‘ಲೋಕಧ್ವನಿ ಹೆಮ್ಮೆಯ ಸಾಧಕ ‘ ಪ್ರಶಸ್ತಿ ಸಂದ ಹಿನ್ನಲೆಯಲ್ಲಿ ಕೆಡಿಸಿಸಿ ಬ್ಯಾಂಕ್ ನೂತನ ನಿರ್ದೇಶಕ ಮೋಹನ್ ನಾಯಕ್ ಗೋಕರ್ಣ ಭೇಟಿ ನೀಡಿ ಶುಭ ಕೋರಿದ್ದಾರೆ.
ಕಳೆದ ಅಕ್ಟೋಬರ್ ತಿಂಗಳಲ್ಲಿ ನಡೆದ ಚುನಾವಣೆಯಲ್ಲಿ ಕೆಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ಸಂಘದ ಕಚೇರಿಗೆ ಭೇಟಿ ನೀಡಿದ ಮೋಹನ್ ನಾಯಕ್ ಅವರನ್ನು ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ‘ಸಂಘವು ಇತ್ತೀಚಿಗೆ ಲೋಕಧ್ವನಿ ಹೆಮ್ಮೆಯ ಸಾಧಕ ಪ್ರಶಸ್ತಿಗೆ ಭಾಜನರಾಗಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ. ಇನ್ನಷ್ಟು ಪ್ರಶಸ್ತಿಗಳು ಸಂಘಕ್ಕೆ ಬರುವಂತಾಗಲಿ.ವಸಂತ ಶೆಟ್ಟಿಯವರಿಂದ ಸ್ಥಾಪನೆಯಾದ ಶ್ರೀ ಭೂತೇಶ್ವರ ಪತ್ತಿನ ಸಹಕಾರಿ ಸಂಘವು ಇನ್ನಷ್ಟು ಬೆಳೆಯಲಿ ‘ ಎಂದು ಮೋಹನ್ ನಾಯಕ್ ಆಶಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶ್ರೀಧರ ಮೊಗೇರ್, ಉಪಾಧ್ಯಕ್ಷ ಭಾಸ್ಕರ ಶೆಟ್ಟಿ, ಆಂತರಿಕ ಸಲಹೆಗಾರ ಪಿ ಡಿ ಮದ್ಗುಣಿ, ನಿರ್ದೇಶಕರಾದ ಅಮಿತ್ ಹೆಗಡೆ, ರಾಘವೇಂದ್ರ ಹೆಗಡೆ, ಪೀಟರ್ ಫರ್ನಾಂಡೀಸ್, ತುಕಾರಾಮ ನೆತ್ರೇಕರ ಮುಖ್ಯ ಕಾರ್ಯನಿರ್ವಾಹಕ ವಿನಾಯಕ ಶೆಟ್ಟಿ ಇತರರು ಇದ್ದರು.