ಉತ್ತರ ಕನ್ನಡ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರ ಸ್ವಕ್ಷೇತ್ರ ಭಟ್ಕಳದಲ್ಲಿ ಅನಾಹುತಗಳ ಪ್ರಮಾಣ ಹೆಚ್ಚಾಗಿರುವ ಬಗ್ಗೆ ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ಅವರು ಅಚ್ಚರಿವ್ಯಕ್ತಪಡಿಸಿದ್ದಾರೆ. ಶಾಂತಿಪ್ರಿಯರ ಜಿಲ್ಲೆ ಎಂದೇ ಹೆಸರುಪಡೆದ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಪ್ರಾಪ್ತರೇ ಕೈಯಲ್ಲಿ ಆಯುಧಹಿಡಿದ ಬಗ್ಗೆ ಅವರು ಆತಂಕವ್ಯಕ್ತಪಡಿಸಿದ್ದಾರೆ.
`ಈಚೆಗೆ ಭಟ್ಕಳ ಮತ್ತು ಮುರುಡೇಶ್ವರದ ಆಸುಪಾಸಿನಲ್ಲಿ ಸರಣಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಅಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ’ ಎಂದು ಅನಂತಮೂರ್ತಿ ಹೆಗಡೆ ಅವರು ಹೇಳಿದ್ದಾರೆ. `ಬೈಲೂರಿನಲ್ಲಿ ಅಪ್ರಾಪ್ತ ಮುಸ್ಲಿಮರು ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಅದಾಗಿಯೂ, ಅದನ್ನು ಆಕಸ್ಮಿಕ ಎಂಬAತೆ ಬಿಂಬಿಸಲಾಗಿದೆ. ಇದೊಂದು ವ್ಯವಸ್ಥಿತ ಸಂಚಾಗಿದ್ದು, ಆಡಳಿತ ಯಂತ್ರದ ವೈಫಲ್ಯಕ್ಕೆ ಹಿಡಿದ ಕನ್ನಡಿ’ ಎಂದವರು ಅವಲೋಕಿಸಿದ್ದಾರೆ.
`ಮಂಕಾಳು ವೈದ್ಯರ ಕ್ಷೇತ್ರದಲ್ಲಿಯೇ ಇಂಥ ಘಟನೆ ನಡೆದರೂ ಅವರು ಮೌನವಾಗಿದ್ದಾರೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಅವರು ಇಂತ ಕೃತ್ಯಕ್ಕೆ ಬೆಂಬಲ ನೀಡುತ್ತಿದ್ದಾರೆಯೇ?’ ಎಂದು ಅನಂತಮೂರ್ತಿ ಹೆಗಡೆ ಅವರು ಪ್ರಶ್ನಿಸಿದ್ದಾರೆ. `ಮಾದಕ ವ್ಯಸನಕ್ಕೆ ಒಳಗಾಗಿ ಅಪ್ರಾಪ್ತರು ಪ್ರಚೋದನೆಗೆ ಒಳಗಾಗಿದ್ದಾರೆ. ಮದರಸಾಗಳಲ್ಲಿ ಏನು ಕಲಿಸಲಾಗುತ್ತಿದೆ? ಎನ್ನುವುದರ ಬಗ್ಗೆ ತನಿಖೆ ಆಗಬೇಕು’ ಎಂದು ಆಗ್ರಹಿಸಿದ್ದಾರೆ. `ಉತ್ತರ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಟ, ಕೊಲೆ, ದರೋಡೆ ಮತ್ತು ಗಾಂಜಾ ಮಾಫಿಯಾಗಳು ರಾಜಾರೋಷವಾಗಿ ನಡೆಯುತ್ತಿವೆ. ಪೊಲೀಸರು ಕೇವಲ ಯುವಕರನ್ನು ಬಂಧಿಸಿ ಬಿಡುವ ಬದಲು ಅವರ ಹಿಂದಿರುವ ಪ್ರಚೋದನಕಾರಿ ಶಕ್ತಿಯನ್ನು ನಾಶಪಡಿಸಬೇಕು’ ಎಂದು ಒತ್ತಾಯಿಸಿದ್ದಾರೆ.