`ಕೇಂದ್ರ ಸರ್ಕಾರ ಈ ದಿನ ಮಂಡಿಸಿದ ಬಜೆಟ್ ಕೃಷಿ ಕ್ಷೇತ್ರಕ್ಕಿಂತಲೂ ಕಾರ್ಪೋರೇಟ್ ಕಂಪನಿಗಳಿಗೆ ಅನುಕೂಲಕರವಾಗಿದೆ. ಈ ಬಜೆಟ್ ಕೃಷಿ ಕ್ಷೇತ್ರ ಅಭದ್ರಗೊಳಿಸುವುದರ ಜೊತೆ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ’ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತಾರಾಮ ನಾಯಕ ಅವರು ಹೇಳಿದ್ದಾರೆ.
`ಮೆಕ್ ಇನ್ ಇಂಡಿಯಾ ಮತ್ತು ಆತ್ಮ ನಿರ್ಬರ ಎಂಬ ಮಹಾ ಮೋಸ ಇಡೀ ಕೃಷಿ ಕ್ಷೇತ್ರವನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ ಅರ್ಪಿಸುತ್ತಿದೆ. ಈ ವ್ಯವಸ್ಥೆಯಿಂದ ಕೃಷಿ ಕ್ಷೇತ್ರ ಅಭದ್ರವಾಗಲಿದೆ’ ಎಂದವರು ಆತಂಕವ್ಯಕ್ತಪಡಿಸಿದ್ದಾರೆ. `ಬಜೆಟಿನಲ್ಲಿ ಕಿಸಾನ್ ನಿಧಿ ಹೆಚ್ಚಿಸಿಲ್ಲ. ಗ್ರಾಮೀಣ ಯುವ ಜನರಿಗೆ ಉದ್ಯೋಗ ಕೊಡುವ ಯೋಜನೆಗಳಿಲ್ಲ’ ಎಂದವರು ಅಸಮಧಾನಹೊರಹಾಕಿದ್ದಾರೆ.
`ಕೇಂದ್ರ ಬಜೆಟ್ ಸಂಪೂರ್ಣವಾಗಿ ದಕ್ಷಿಣ ಭಾರತವನ್ನು ನಿರ್ಲಕ್ಷಿಸಿದೆ. ಹೀಗಾಗಿ ಒಕ್ಕೂಟ ವ್ಯವಸ್ಥೆಗೆ ಈ ಬಜೆಟ್ ಮಾರಕವಾಗಿದೆ’ ಎಂದವರು ಹೇಳಿದ್ದಾರೆ. `ಅಂಕೋಲಾ- ಹುಬ್ಬಳ್ಳಿ ರೇಲ್ವೆ ಲೈನ್ ಬಗ್ಗೆ ಪ್ರಸ್ತಾಪ ಇಲ್ಲ. ರಾಷ್ಟ್ರೀಯ ಹೆದ್ದಾರಿ ದ್ವಿಪತದ ಬಗ್ಗೆ ಏನನ್ನೂ ಹೇಳಿಲ್ಲ. ಹೀಗಾಗಿ ಕೇಂದ್ರ ಬಜೆಟ್ ನಿರಾಸದಾಯಕವಾಗಿದ್ದು, ಜನ ವಿರೋಧಿ ನೀತಿ ವಿರುದ್ಧ ಪ್ರತಿಭಟನೆ ಅನಿವಾರ್ಯ’ ಎಂದು ಶಾಂತರಾಮ ನಾಯಕ ಅವರು ಹೇಳಿದ್ದಾರೆ.