ಶಾಲೆಯಲ್ಲಿ ನೀಡುವ ಬಿಸಿಯೂಟ, ವಿದ್ಯಾರ್ಥಿ ನಿಲಯದಲ್ಲಿ ಕೊಡುವ ಆಹಾರ ಹಾಗೂ ಅಪೌಷ್ಠಿಕ ಮಕ್ಕಳಿಗೆ ಸರ್ಕಾರದಿಂದ ಸರಬರಾಜಾಗುವ ಪೌಷ್ಠಿಕ ಆಹಾರ ವಿತರಣೆಯಲ್ಲಿ ಲೋಪ ಎಸಗಿದ ನೌಕರರ ವಿರುದ್ಧ ಕರ್ನಾಟಕ ರಾಜ್ಯ ಆಹಾರ ಆಯೋಗ ಕಠಿಣ ಕ್ರಮ ಜರುಗಿಸಿದೆ. ಈಬಗ್ಗೆ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಹೆಚ್ ಕೃಷ್ಣ ಅವರು ಮಾಹಿತಿ ನೀಡಿದ್ದು, ತಪ್ಪು ಮಾಡಲು ಬಯಸುವವರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
Advertisement. Scroll to continue reading.
ಕಾರವಾರದ ಬಜಾರ್ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟ ವಿತರಣೆ ಮತ್ತು ಸ್ವಚ್ಛತೆ ಕಾಪಾಡುವ ಕಾರ್ಯದಲ್ಲಿ ನಿರ್ಲಕ್ಷö್ಯವಹಿಸಿದ ಶಿಕ್ಷಕರ ವಿರುದ್ದ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ. ಅಲ್ಲಿ ಲೋಪ ಎಸಗಿದ ಶಿಕ್ಷಕರಿಗೆ 15 ದಿನಗಳ ಕಡ್ಡಾಯ ರಜೆಯ ಶಿಕ್ಷೆನೀಡಿದ್ದಾರೆ. ಅಮದಳ್ಳಿಯ ಬಿ ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡದ ಸಿಬ್ಬಂದಿಗೆ ಮತ್ತು ಕ್ರಿಮ್ಸ್ ನಲ್ಲಿ ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ನೀಡುವ ಆಹಾರದ ಕುರಿತಂತೆ ನಿರ್ಲಕ್ಯ ತೋರಿದ ವೈದ್ಯರಿಗೆ ಸಂಬAದಪಟ್ಟ ಹಿರಿಯ ಅಧಿಕಾರಿಗಳ ಮೂಲಕ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ.
`ಜಿಲ್ಲೆಯ ಎಲ್ಲಾ ವಿದ್ಯಾರ್ಥಿ ನಿಲಯಗಳಲ್ಲಿ ಊಟದ ವ್ಯವಸ್ಥೆ , ಸಾರ್ವಜನಿಕ ಪಡಿತರ ಆಹಾರ ವಿತರಣೆ, ಶಾಲೆಗಳಲ್ಲಿ ಬಿಸಿಯೂಟ, ಅಂಗನವಾಡಿಗಳಲ್ಲಿ ಆಹಾರ ನೀಡಿಕೆ, ವಿದ್ಯ್ಯಾರ್ಥಿ ನಿಲಯಗಳಲ್ಲಿ ಆಹಾರ ವಿತರಣೆ, ಗರ್ಭಿಣಿ ಮತ್ತು ಬಾಣಂತಿಯರಿಗೆ ನೀಡುವ ಪೌಷ್ಠಿಕ ಆಹಾರ, ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ನೀಡುವ ಆಹಾರ, ಆಹಾರ ಪದಾರ್ಥಗಳ ದಾಸ್ತಾನು ಸೇರಿದಂತೆ ಆಹಾರ ವಿತರಣಾ ವ್ಯವಸ್ಥೆಯ ಪ್ರಕ್ರಿಯೆಗಳಲ್ಲಿ ಯಾವುದೇ ಲೋಪಗಳು ಕಂಡುಬಾರದAತೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕು’ ಎಂದು ಕೃಷ್ಣ ಅವರು ಸೂಚಿಸಿದ್ದಾರೆ. ಕರ್ನಾಟಕ ರಾಜ್ಯ ಆಹಾರ ಆಯೋಗದಿಂದ 3 ದಿನಗಳ ಕಾಲ ಜಿಲ್ಲೆಯಲ್ಲಿ ಪಡಿತರ ದಾಸ್ತಾನು ಕೇಂದ್ರಗಳು, ಶಾಲೆ ಮತ್ತು ಅಂಗನವಾಡಿಗಳು, ಹಾಸ್ಟೆಲ್ಗಳು, ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಭೇಟಿ ಸಂದರ್ಭದಲ್ಲಿ ಕಂಡುಬರುವ ನ್ಯೂನತೆಗಳ ಕುರಿತಂತೆ ವರದಿಯನ್ನು ಸಿದ್ದಪಡಿಸಿದ್ದಾರೆ. `ಈ ವರದಿಯಲ್ಲಿನ ಲೋಪಗಳನ್ನು ಅಧಿಕಾರಿಗಳು ಸರಿಪಡಿಸುವ ಕಾರ್ಯ ಮಾಡುವ ಮೂಲಕ ಪ್ರತಿಯೊಬ್ಬರಿಗೂ ಆಹಾರದ ಹಕ್ಕಿನ ಸಂಪೂರ್ಣ ಪ್ರಯೋಜನ ದೊರೆಯುವಂತೆ ಮಾಡಬೇಕು’ ಎಂದು ಸೂಚಿಸಿದ್ದಾರೆ.
`ಆಹಾರ ಸಿದ್ದಪಡಿಸುವ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಇಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಬೇಕು. ಗೋದಾಮುಗಳಲ್ಲಿ ಆಹಾರ ಶೇಖರಣೆಯನ್ನು ವೈಜ್ಞಾನಿಕ ರೀತಿಯಲ್ಲಿ ನಿರ್ವಹಿಸಬೇಕು. ಆಹಾರ ತಯಾರಿಕಾ ಮಾದರಿಗಳನ್ನು ಆಗಾಗ್ಗೆ ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಬೇಕು. ಉತ್ತಮ ಗುಣಮಟ್ದ ಆಹಾರವನ್ನು ಸರಬರಾಜು ಮಾಡಬೇಕು’ ಎಂದು ಅವರು ನಿರ್ದೇಶನ ನೀಡಿದರು.