ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಬುಧವಾರ ವಿವಿಧ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಕಾರವಾರದ ಸೈಂಟ್ ಮೈಕಲ್ ಮತ್ತು ಹಿಂದೂ ಹೈಸ್ಕೂಲಿಗೆ ಅವರು ಭೇಟಿ ನೀಡಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿದ ಕುರಿತು ಅವರು ಪರಿಶೀಲನೆ ಮಾಡಿದ್ದಾರೆ. ಪರೀಕ್ಷಾ ಮಂಡಳಿಯ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅವರು ಶಿಕ್ಷಕರಿಗೆ ತಿಳಿಸಿದರು. ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಅದಾದ ನಂತರ ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿರುವ ಸಿಸಿ ಟಿವಿ ಕೊಠಡಿಗೆ ಡೀಸಿ ಭೇಟಿ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿನ ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆಯನ್ನು ಗಮನಿಸಿದರು. ಪರೀಕ್ಷೆ ಸುಗಮವಾಗಿ ನಡೆಯುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ವಿವಿಧ ಸಲಹೆ-ಸೂಚನೆ ನೀಡಿದರು. ಡಿಡಿಪಿಐ ಲತಾ ನಾಯಕ ಅವರು ಜೊತೆಗಿದ್ದರು.