ಕೇಂದ್ರ ಸರ್ಕಾರ ನಡೆಸುವ ಜನ ಗಣತಿ ಕಾರ್ಯದಲ್ಲಿ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಭಾಗವಹಿಸಿದ್ದು, ತಮ್ಮ ಮೊಬೈಲ್ ಮೂಲಕ ಐದೇ ನಿಮಿಷದಲ್ಲಿ ಅವರು ಗಣತಿ ದಾಖಲಾತಿಯನ್ನು ಪೂರ್ಣಗೊಳಿಸಿದ್ದಾರೆ. ತಾವು ಗಣತಿಯಲ್ಲಿ ಭಾಗವಹಿಸಿದ ವಿಷಯವನ್ನು ಅವರು ಅಧಿಕಾರಿಗಳ ವಾಟ್ಸಪ್ ಗುಂಪಿನಲ್ಲಿ ಹಂಚಿಕೊAಡಿದ್ದು, ಅದರಿಂದ ಪ್ರೇರಣೆಗೊಂಡ ಇನ್ನಿತರ ಅಧಿಕಾರಿಗಳು ಗಣತಿ ಪ್ರಕ್ರಿಯೆ ಮುಗಿಸಿದ್ದಾರೆ. `ಸ್ವಯಂ ಗಣತಿ ಕಾರ್ಯದಲ್ಲಿ ಪ್ರತಿಯೊಬ್ಬರು ಸ್ವಯಂ ಪ್ರೇರಣೆಯಿಂದ ಭಾಗವಹಿಸಬೇಕು’ ಎಂದು ಕೆ ಲಕ್ಷ್ಮೀಪ್ರಿಯಾ ಅವರು ಈ ವೇಳೆ ಕರೆ ನೀಡಿದ್ದಾರೆ.
`ನಮ್ಮ ಜನಗಣತಿ- ನಮ್ಮ ಅಭಿವೃದ್ಧಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಸರ್ಕಾರ ಜನಗಣತಿ 2027ಕ್ಕೆ ಮುಂದಾಗಿದೆ. ಇದರ ಅಂಗವಾಗಿ ಸರ್ಕಾರ ಸ್ವಯಂ ಗಣತಿ ವ್ಯವಸ್ಥೆಯನ್ನು ಪರಿಚಯಿಸಿದೆ. 2026ರ ಏಪ್ರಿಲ್ 1 ರಿಂದ 15 ರವರೆಗೆ ಜಿಲ್ಲೆಯ ಎಲ್ಲಾ ನಾಗರಿಕರು ಅಧಿಕೃತ ಪೋರ್ಟಲ್ http://se.census.gov.in/ ಮೂಲಕ ತಮ್ಮ ಮಾಹಿತಿ ನೀಡಿ ಗಣತಿ ಕಾರ್ಯದಲ್ಲಿ ಭಾಗವಹಿಸುವಂತೆ ಕೋರಲಾಗಿದೆ. ಈ ಪ್ರಕ್ರಿಯೆಯು ಅತ್ಯಂತ ಸರಳ ಮತ್ತು ಸುರಕ್ಷಿತವಾಗಿದೆ’ ಎಂದು ಜಿಲ್ಲಾಧಿಕಾರಿಗಳೇ ಹೇಳಿದ್ದಾರೆ.
`ಮೊಬೈಲ್ ಸಂಖ್ಯೆ ಮತ್ತು ಔಖಿP ಮೂಲಕ ಸುಲಭವಾಗಿ 5ರಿಂದ 10 ನಿಮಿಷಗಳಲ್ಲಿ ಸ್ವಯಂ ಗಣತಿ ಪೂರ್ಣಗೊಳಿಸಬಹುದಾಗಿದ್ದು, ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ನಿಮ್ಮ ಅರ್ಜಿಯ ಸಂಖ್ಯೆ ದೊರೆಯುತ್ತದೆ. ಈ ಸಂಖ್ಯೆಯನ್ನು ಏಪ್ರಿಲ್ 16ರಿಂದ ಮೇ 15 ರವರೆಗೆ ಮನೆಮನೆಗೆ ಭೇಟಿ ನೀಡುವ ಗಣತಿದಾರರಿಗೆ ನೀಡಿದದರೆ ಗಣತಿದಾರರು ಅತೀ ಕಡಿಮೆ ಸಮಯದಲ್ಲಿ ಗಣತಿ ಪೂರ್ಣಗೊಳಿಸಲು ಸಾಧ್ಯವಾಗಲಿದೆ’ ಎಂದವರು ಹೇಳಿದ್ದಾರೆ.
`ಜನಗಣತಿ ನಮ್ಮ ರಾಜ್ಯ ಮತ್ತು ದೇಶದ ಭವಿಷ್ಯ ರೂಪಿಸುವ ಮಹತ್ವದ ಕಾರ್ಯವಾಗಿದ್ದು, ಇದು ದತ್ತಾಂಶ ಆಧಾರಿತ ನಿರ್ಧಾರಗಳಿಗೆ ಸಹಾಯ ಮಾಡುತ್ತದೆ. ಆರೋಗ್ಯ, ಶಿಕ್ಷಣ, ವಸತಿ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಸಮರ್ಪಕ ಸಂಪನ್ಮೂಲ ಹಂಚಿಕೆಗೆ ದಾರಿ ತೋರುತ್ತದೆ. ಜನಗಣತಿಯಲ್ಲಿ ನಮ್ಮ ಭಾಗವಹಿಸುವಿಕೆ ಅತ್ಯಂತ ಮುಖ್ಯವಾಗಿದ್ದು, ಇಂದು ನಾವು ನೀಡುವ ನಿಖರ ಮಾಹಿತಿಯು, ನಾಳೆಯ ಉತ್ತಮ ನೀತಿಗಳು ಮತ್ತು ಸೇವೆಗಳಿಗೆ ಆಧಾರವಾಗುತ್ತದೆ. ಜನಗಣತಿಯಿಂದ ಯಾರು ಬಿಟ್ಟು ಹೋಗದಂತೆ ಸರ್ಕಾರ ಮುತುವರ್ಜಿವಹಿಸಿದೆ. ನಿಗದಿತ ಅವಧಿಯಲ್ಲಿ ಸ್ವಯಂ ಗಣತಿಯನ್ನು ಪೂರ್ಣಗೊಳಿಸಿ, ಜಿಲ್ಲೆಯಲ್ಲಿ ಜನಗಣತಿ 2027 ಅನ್ನು ಯಶಸ್ವಿಗೊಳಿಸಲು ನಾವೆಲ್ಲರೂ ಕೈ ಜೋಡಿಸೋಣ’ ಎಂದು ಜಿಲ್ಲಾಧಿಕಾರಿಗಳು ನಾಗರಿಕರಲ್ಲಿ ಮನವಿ ಮಾಡಿದ್ದಾರೆ.
ಗಣತಿಯಲ್ಲಿ ಭಾಗವಹಿಸಲು ಇಲ್ಲಿ ಕ್ಲಿಕ್ಕಿಸಿ: `ಗಣತಿ’