`ವಿದ್ಯಾರ್ಥಿಗಳ ತಾಂತ್ರಿಕ ಕೌಶಲ್ಯವನ್ನು ಹೆಚ್ಚಿಸಲು ಸ್ಟೆಮ್ ಲ್ಯಾಬ್ ಸಹಾಯಕಾರಿ’ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ. ಶಿರಸಿಯ ಮಾರಿಕಾಂಬಾ ಪ್ರೌಢಶಾಲೆಯಲ್ಲಿ ಸ್ಥಾಪಿಸಲಾದ `ಸ್ಟೆಮ್ ಲ್ಯಾಬ್’ ವೀಕ್ಷಿಸಿ ಅವರು `ಈ ಬಗೆಯ ಕೌಶಲ್ಯ ಸಾಧನಗಳನ್ನು ಕೆ.ಪಿ.ಎಸ್. ಶಾಲೆಗಳಲ್ಲೂ ಸಹ ಅಳವಡಿಸಲಾಗುತ್ತಿದೆ’ ಎಂದಿದ್ದಾರೆ.
ಸ್ಕೊಡ್‌ವೆಸ್ ಸಂಸ್ಥೆ ಹಾಗೂ ಗುಜರಾತ್‌ನ ದೇಸಾಯಿ ಫೌಂಡೇಶನ್‌ನ ಸಹಯೋಗದಲ್ಲಿ ಮಾರಿಕಾಂಬಾ ಪ್ರೌಢಶಾಲೆಯಲ್ಲಿ ಸ್ಟೆಮ್ ಲ್ಯಾಬ್’ನ್ನು ಸ್ಥಾಪಿಸಲಾಗಿದೆ. `ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಹಂತದಲ್ಲಿಯೇ ವಿದ್ಯಾರ್ಥಿಗಳಲ್ಲಿ ಇರುವ ತಾಂತ್ರಿಕ ಪ್ರತಿಭೆಗಳನ್ನು ಗುರುತಿಸಿ ಕೌಶಲ್ಯಗಳನ್ನು ಹೆಚ್ಚಿಸಲು ಸ್ಟೆಮ್ ಲ್ಯಾಬ್ ಮಾದರಿಯ ಸೌಲಭ್ಯ ಸಹಕಾರಿ’ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗಾಗಿ ಸ್ಟೆಮ್ ಲ್ಯಾಬ್‌ನಂತಹ ಕಾರ್ಯಕ್ರಮಗಳನ್ನು ಅಳವಡಿಸಿರುವುದಕ್ಕೆ ದೇಸಾಯಿ ಫೌಂಡೇಶನ್ ಮತ್ತು ಸ್ಕೊಡ್‌ವೆಸ್ ಸಂಸ್ಥೆಯನ್ನು ಅವರು ಅಭಿನಂದಿಸಿದರು.
ಶಿರಸಿ-ಸಿದ್ದಾಪುರ ವಿಧಾನಸಭಾಕ್ಷೆತ್ರದ ಶಾಸಕ ಬೀಮಣ್ಣ ನಾಯ್ಕ ಅವರು ಮಾತನಾಡಿ, `ಮಾರಿಕಾಂಬಾ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ಸ್ಟೆಮ್ ಲ್ಯಾಬ್ ಬಳಕೆಯಿಂದ ಹೆಚ್ಚಿನ ಅಂಕ ಪಡೆಯಲು ಸಾಧ್ಯವಾಯಿತು’ ಎಂದು ಸಚಿವರಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಿ ಆರ್ ನಾಯಕ್, ಬಿಇಒ. ನಾಗರಾಜ ನಾಯ್ಕ, ಸ್ಕೊಡ್‌ವೆಸ್ ಸಂಸ್ಥೆಯ ನಿರ್ದೇಶಕ ಕೆ ಎನ್ ಹೊಸಮನಿ, ಕಾರ್ಯಕ್ರಮಾಧಿಕಾರಿ ನಾರಾಯಣ ಹೆಗಡೆ ಅವರು ಹಾಜರಿದ್ದರು.
ಸ್ಕೊಡ್‌ವೆಸ್ ಸಂಸ್ಥೆಯಿAದ ಸರ್ಕಾರಿ ಶಾಲೆಗಳಿಗೆ ಆಸಾನಿ ಸ್ಯಾನಿಟರಿ ನಾಪಕಿನ್‌ನ್ನು ಉಚಿತವಾಗಿ ಪೂರೈಸಲಾಗುತ್ತಿರುವ ಬಗ್ಗೆ ಮಾಹಿತಿ ಪಡೆದು, ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ರಾಜ್ಯದಾದ್ಯಂತ ವಿಸ್ತರಿಸುವ ಬಗ್ಗೆ ಸಂಬAಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿಯೂ ಸಚಿವರು ತಿಳಿಸಿದರು.