ಪ್ರವಾಸೋದ್ಯಮ ಚಟುವಟಿಕೆ ಶುರು ಮಾಡುವವರಿಗೆ ಜಿಲ್ಲೆಯ ಎಲ್ಲಾ ಬ್ಯಾಂಕುಗಳು ಸಾಲ ಕೊಡಲು ಮುಂದಾಗಿವೆ. `ಹೆಚ್ಚಿನ ಸಂಖ್ಯೆಯಲ್ಲಿ ಸಾಲ ಕೊಡಬೇಕು’ ಎಂದು ಬ್ಯಾಂಕ್ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ ಅವರು ನಿರ್ದೇಶನ ನೀಡಿದ್ದಾರೆ.
ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಲೀಡ್ ಬ್ಯಾಂಕ್ ಪçಗತಿ ಪರಿಶೀಲನಾ ಸಭೆ ನಡೆಸಿದ ಅವರು `ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕುರಿತಂತೆ ಮುಖ್ಯಮಂತ್ರಿಗಳು ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ. ಜಿಲ್ಲೆಯಲ್ಲಿ ಏರ್ ಪೋರ್ಟ್ ಸಹ ಶೀಘ್ರದಲ್ಲಿ ಆರಂಭವಾಗಲಿದೆ. ಮುಂದಿನ 5ರಿಂದ 6 ವರ್ಷಗಳಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಅಭಿವೃದ್ಧಿಯಾಗಲಿದ್ದು, ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ನಡೆಸುವವರಿಗೆ ಹಾಗೂ ಬಂಡವಾಳ ಹೂಡಿಕೆದಾರರಿಗೆ ಬ್ಯಾಂಕ್ಗಳು ಹೆಚ್ಚಿನ ಪ್ರಮಾಣದ ಸಾಲಗಳನ್ನು ಆದ್ಯತೆಯಲ್ಲಿ ವಿತರಿಸಬೇಕು. ಆ ಮೂಲಕ ಪ್ರವಾಸೋದ್ಯಮ ಬೆಳವಣಿಗೆಗೆ ಮತ್ತು ಬ್ಯಾಂಕ್ಗಳ ಸಾಲ ಮತ್ತು ಠೇವಣಿ ಅನುಪಾತದಲ್ಲಿ ನಿಗಧಿತ ಗುರಿ ಸಾಧಿಸಬೇಕು’ ಎಂದು ಸೂಚಿಸಿದ್ದಾರೆ.
`ಮಾರ್ಚ್ 2026ರ ತ್ರೆöÊಮಾಸಿಕ ಅಂತ್ಯದಲ್ಲಿ ಜಿಲ್ಲೆಯ ಬ್ಯಾಂಕ್ಗಳಲ್ಲಿ ಒಟ್ಟು ರೂ 27,064 ಕೋಟಿ ಠೇವಣಿ ಸಂಗ್ರಹ ಮತ್ತು ರೂ.12,528 ಕೋಟಿ ಸಾಲ ವಿತರಣೆ ಮಾಡಿದ್ದು, ಸಾಲ ಮತ್ತು ಠೇವಣಿ ಅನುಪಾತ ಶೇ 46.29 ಮಾತ್ರ ಇದ್ದು, ಪ್ರಸಕ್ತ ವರ್ಷದಲ್ಲಿ ಈ ಅನುಪಾತವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಎಲ್ಲಾ ಬ್ಯಾಂಕ್ಗಳು ಪ್ರತ್ಯೇಕವನ್ನು ಯೋಜನೆಯನ್ನು ರೂಪಿಸಿ ನಿಗಧಿತ ಗುರಿ ಸಾಧಿಸಬೇಕು’ ಎಂದು ಸೂಚಿಸಿದರು. ಸಭೆಯಲ್ಲಿ ವಿವಿಧ ಸರ್ಕಾರಿ ಯೋಜನೆಗಳಿಗೆ ಬ್ಯಾಂಕ್ ಗಳಿಂದ ನೀಡುತ್ತಿರುವ ಸಾಲಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.
ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಕರೀಂ ಅಸಾದಿ, ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ್, ಕೆನರಾ ಬ್ಯಾಂಕ್ ಪ್ರಾದೇಶಿಕ ಮೆನೇಜರ್ ನಾಗರಾಜ್, ನಬಾರ್ಡ್ ಬ್ಯಾಂಕ್ ಮೆನೇಜರ್ ಸುಶೀಲ್, ಲೀಡ್ ಬ್ಯಾಂಕ್ ಮೆನೇಜರ್ ರಾಜಪ್ಪ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಎಲ್ಲಾ ಬ್ಯಾಂಕ್ ಗಳ ಅಧಿಕಾರಿಗಳು ಇದ್ದರು.