ಮಕ್ಕಳ ಬೆಳವಣಿಗೆಗೆ ಪೂರಕವಾಗಿ ಸಾತ್ವಿಕ ಆಹಾರ ಸಿದ್ಧಪಡಿಸಿಕೊಡುವ ಶಿರಸಿಯ ಪೂರ್ಣಿಮಾ ಹೆಗಡೆ ಅವರನ್ನು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಗುರುತಿಸಿದೆ. ಈ ಸಂಸ್ಥೆಯ ರಾಜ್ಯ ಸಮ್ಮೇಳನದಲ್ಲಿ ಪೂರ್ಣಿಮಾ ಹೆಗಡೆ ಅವರನ್ನು ಗೌರವಿಸಲಾಗಿದೆ.
ರಾಜ್ಯದ 30 ಜಿಲ್ಲೆಗಳ ಪ್ರತಿನಿಧಿಗಳನ್ನು ಒಗ್ಗೂಡಿಸಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯೂ ಸಮಾರಂಭವನ್ನು ಆಯೋಜಿಸಿದೆ. ಈ ವೇಳೆ ಸಂಸ್ಥೆಯ ರಜತ ಮಹೋತ್ಸವವನ್ನು ಅದ್ಧೂರಿಯಾಗಿ ನೆರವೇರಿಸಲಾಗಿದೆ. ತುಮಕೂರಿನ ಹೆಗ್ಗೆರೆ ಗಂಗಾಧರಯ್ಯ ಆಡಿಟೋರಿಯಂನಲ್ಲಿ ಕಾರ್ಯಕ್ರಮ ನಡೆದಿದ್ದು, ಆಹಾರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಿರಸಿ ಬೆಳ್ಳೇಕೇರಿಯ ಪೂರ್ಣಿಮಾ ಹೆಗಡೆ ಅವರನ್ನು ಈ ವೇದಿಕೆಯಲ್ಲಿ ಗೌರವಿಸಲಾಗಿದೆ.
ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ, ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ, ಸಂಸ್ಥೆಯ ಅಧ್ಯಕ್ಷೆ ಉಮಾ ರೆಡ್ಡಿ, ತುಮಕೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಪಾಂಡುರAಗ ಕುರಾಂಡ್ವಾಡ್ ಸೇರಿ ಸಾತ್ವಿಕ್ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಹೆಗಡೆ ಅವರನ್ನು ಸನ್ಮಾನಿಸಿದ್ದಾರೆ. ನಂತರ ಅವರಿಗೆ ಅತ್ಯುತ್ತಮ ಮಹಿಳಾ ಉದ್ಯಮಿ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಎಂ ಎಂ ಭಟ್ ಹಾಗೂ ಕಾರ್ಯದರ್ಶಿ ಗಣೇಶ್ ಹೆಗಡೆ ಅವರು ಈ ಘಳಿಗೆಗೆ ಸಾಕ್ಷಿಯಾಗಿದ್ದಾರೆ.