ಕಾರವಾರದ ಕಿನ್ನರ ಬಳಿಯ ನಿರಾಕರ ದೇವಸ್ಥಾನದ ಬಳಿ ಅಗ್ನಿ ಅವಘಡ ನಡೆದಿದ್ದು, ಮನೆಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ರಾತ್ರಿ ವೇಳೆ ಮನೆಯೊಳಗೆ ಮಲಗಿದ್ದವರು ನಿದ್ದೆಗಣ್ಣಿನಲ್ಲಿಯೇ ಹೊರಗೆ ಓಡಿ ಪ್ರಾಣ ಉಳಿಸಿಕೊಂಡಿದ್ದಾರೆ.
ADVERTISEMENT
ಕಾರವಾರದ ಕಿನ್ನರದ ಮುರಳಿಧರ ಸುಬ್ರಾಯ ರಾಣೆ ಅವರ ಮನೆಯಲ್ಲಿ ಶುಕ್ರವಾರ ರಾತ್ರಿ ದುರಂತ ನಡೆದಿದೆ. 10.30ರ ವೇಳೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಮನೆಯಲ್ಲಿದ್ದವರು ಹೊರಗೆ ಓಡಿದ್ದಾರೆ. ಬೆಂಕಿ ನೋಡಿದ ಸ್ಥಳೀಯರು ಅಲ್ಲಿ ಜಮಾಯಿಸಿದ್ದು, ಅದನ್ನು ಆರಿಸುವ ಪ್ರಯತ್ನ ಮಾಡಿದ್ದಾರೆ. ಆದರೆ, ಅದು ಸಾಧ್ಯವಾಗಿಲ್ಲ.
ಉಚಿತ ಬಂಜೆತನ ತಪಾಸಣಾ ಶಿಬಿರ - ಜೂನ್ 23, 2026
ಸ್ಥಳ: ಹೈಟೆಕ್ ರಕ್ತ ತಪಾಸಣಾ ಕೇಂದ್ರ & ಪಾಲಿ ಕ್ಲಿನಿಕ್ ಅಂಕೋಲಾ | ನೋವಾ ಐವಿಎಫ್
ADVERTISEMENT
ಮನೆ ಇರುವ ಸ್ಥಳಕ್ಕೆ ಅಗ್ನಿಶಾಮಕ ವಾಹನ ತೆರಳುವ ಹಾಗಿರಲಿಲ್ಲ. ಇಕ್ಕಟ್ಟಾದ ರಸ್ತೆಯಲ್ಲಿಯೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಬೆಂಕಿ ಇನ್ನಷ್ಟು ವ್ಯಾಪಿಸುವುದನ್ನು ತಡೆದಿದ್ದಾರೆ. ಆದರೆ, ಅಷ್ಟರೊಳಗೆ ಬೆಂಕಿ ಇಡೀ ಮನೆಯನ್ನು ಸುಟ್ಟಿದ್ದು ಕುಟುಂಬದವರು ಕಣ್ಣೀರಾಗಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣ ಗೊತ್ತಾಗಲಿಲ್ಲ. ಲಕ್ಷಾಂತರ ರೂ ಮೌಲ್ಯದ ಆಸ್ತಿಗೆ ಹಾನಿಯಾಗಿದೆ. ಅಧಿಕಾರಿಗಳು ಸ್ಥಳ ಭೇಟಿ ಮಾಡಿದ್ದಾರೆ.