ಗೋವಾ – ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯ ಅನಮೋಡ್ ಸಮೀಪದ ಕ್ಯಾಸಲ್‌ರಾಕ್ ತಿರುವಿನ ಬಳಿ ಲಾರಿಗೆ ಲಾರಿ ಗುದ್ದಿದೆ. ಈ ಮುಖಾಮುಖಿ ಡಿಕ್ಕಿಯಲ್ಲಿ ಎರಡು ಲಾರಿಗಳು ಹಾನಿಗೊಳಗಾಗಿವೆ.
ಮಂಗಳವಾರ ಮಧ್ಯರಾತ್ರಿ 12 ಗಂಟೆ ವೇಳೆಗೆ ಈ ಅಪಘಾತ ನಡೆದಿದೆ. ಸರಕು ಸಾಗಾಣಿಕೆ ಮಾಡುತ್ತಿದ್ದ ಲಾರಿಗಳ ಡಿಕ್ಕಿಯಿಂದ ರಸ್ತೆ ಸಂಚಾರ ಅಸ್ತವ್ಯಸ್ಥವಾಗಿದ್ದು, ಅದನ್ನು ಸರಿಪಡಿಸಲು ಪೊಲೀಸರು ಹರಸಾಹಸ ಮಾಡಿದ್ದರೆ. ಅಪಘಾತದಲ್ಲಿ ಎರಡು ಲಾರಿ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಚಾಲಕರನ್ನು ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಲಾರಿಯಿಂದ ಹೊರ ತೆಗೆದು ಆಸ್ಪತ್ರೆಗೆ ಕಳುಹಿಸಿದ್ದಾರೆ.
ಸದ್ಯ ಚಾಲಕರಿಬ್ಬರು ಬೆಳಗಾವಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ರಾಮನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಪುನಃ ಸುಗಮಗೊಳಿಸಿದರು. ಈ ಅಪಘಾತದಲ್ಲಿ ತಪ್ಪು ಯಾರದ್ದು? ಎನ್ನುವುದರ ಬಗ್ಗೆ ತನಿಖೆ ನಡೆದಿದೆ.