ಕಾಂಗ್ರೆಸ್, ಕಾಕ್ರೋಚ್, ಆಮ್ ಆದ್ಮಿ ಪಕ್ಷದ ವಿರುದ್ಧ ಬಿಜೆಪಿಗರು ಕಿಡಿಕಾರಿದ್ದು, `ಈ ಮೂರು ಪಕ್ಷದವರು ಸೇರಿ ದೇಶದಲ್ಲಿ ಅಭದ್ರತೆ ಹಾಗೂ ಅಸ್ಥಿರತೆ ಸೃಷ್ಠಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ. ಆ ಮೂರು ಪಕ್ಷದವರ ವಿರುದ್ಧ ಬಿಜೆಪಿಕರು ಗುರುವಾರ ಕಾರವಾರದಲ್ಲಿ ಪ್ರತಿಭಟನೆಯನ್ನು ಮಾಡಿದ್ದಾರೆ.
`ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರದ ಸತತ ಗೆಲುವು ಸಹಿಸಿಕೊಳ್ಳಲಾಗದೇ ವಿರೋಧಿಗಳು ಅನಗತ್ಯ ಗೊಂದಲ ಮೂಡಿಸುತ್ತಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಯ ಲಾಭ ಪಡೆದುಕೊಂಡು ಪಶ್ಚಿಮ ಬಂಗಾಳ, ನೇಪಾಳ ಹಾಗೂ ಶ್ರೀಲಂಕಾಗಳಲ್ಲಿ ಸರ್ಕಾರಗಳನ್ನು ಉರುಳಿಸಲಾಗಿದ್ದು, ಅದೇ ರೀತಿ ಎಲ್ಲಡೆ ಮಾಡುವ ಹುನ್ನಾರ ನಡೆಸಿದ್ದಾರೆ’ ಎಂದು ಪ್ರತಿಭಟನಾಕಾರರು ದೂರಿದ್ದಾರೆ.
`ನೀಟ್ ಪರೀಕ್ಷೆಯಲ್ಲಿನ ಅಕ್ರಮದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತನಿಖೆಗೆ ಸೂಚಿಸಿದ್ದಾರೆ. ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುವ ಭರವಸೆಯನ್ನು ನೀಡಿದ್ದಾರೆ. ಆದರೆ, ಈ ವಿಷಯವನ್ನು ವಿಪಕ್ಷಗಳು ರಾಜಕೀಯ ಲಾಭಕ್ಕೆ ಬಳಸಿಕೊಂಡಿದ್ದಾರೆ’ ಎಂದು ಬಿಜೆಪಿಗರು ಆರೋಪಿಸಿದ್ದಾರೆ. `ರಾಜ್ಯದಲ್ಲಿ ರೈತರ ಸಮಸ್ಯೆ, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವಿಕೆ ಸೇರಿ ಅನೇಕ ತೊಂದರೆಗಳಿವೆ. ಅದನ್ನು ಬಿಟ್ಟು ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು ದೆಹಲಿಗೆ ಹೋಗಿ ರಾಜಕೀಯ ಮಾಡುತ್ತಿದ್ದಾರೆ’ ಎಂದು ಕಿಡಿಕಾರಿದ್ದಾರೆ. ಬಿಜೆಪಿ ಪ್ರಮುಖರಾದ ನಾಗರಾಜ ನಾಯಕ, ಗುರುಪ್ರಸಾದ ಹೆಗಡೆ, ದಿನಕರ ಶೆಟ್ಟಿ, ಕೆ ಜಿ ನಾಯ್ಕ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.