ಕಾರವಾರದ ಶಿರವಾಡದಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್’ನಲ್ಲಿ ಎರಡು ಹುದ್ದೆ ಖಾಲಿ ಇದೆ. ಆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿರವಾಡದ ಕರ್ನಾಟಕ ಪಬ್ಲಿಕ್ ಸ್ಕೂಲ್’ನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಜಾರಿಯಲ್ಲಿದೆ. ಅಲ್ಲಿ ಸದ್ಯ ದತ್ತಾಂಶ ನಿರ್ವಹಣೆ ಸಹಾಯಕ ಹಾಗೂ ಭದ್ರತಾ ಸಿಬ್ಬಂದಿ ಹುದ್ದೆಗಳಿಗೆ ಯೋಗ್ಯರ ಹುಡುಕಾಟ ನಡೆದಿದೆ. ಇದಕ್ಕಾಗಿ ಶಾಲಾ ಮುಖ್ಯಸ್ಥರು ಅರ್ಜಿ ಕರೆದಿದ್ದಾರೆ.
ದತ್ತಾಂಶ ನಿರ್ವಹಣೆ ಸಹಾಯಕ ಹುದ್ದೆಗೆ ಯಾವುದೇ ಪದವಿ ಕಡ್ಡಾಯ. ಜೊತೆಗೆ ಕಂಪ್ಯೂಟರ್ ಕೋರ್ಸ್ ಸರ್ಟಿಫಿಕೇಟ್ ಹೊಂದಿರಬೇಕು ಎಂಬ ನಿಯಮವಿದೆ. ಭದ್ರತಾ ಸಿಬ್ಬಂದಿ ಹುದ್ದೆಗೆ ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದರೆ ಸಾಕು. ಈ ಹುದ್ದೆಗಳಿಗೆ ಸಮಾನ ವೇತನ ನೀಡಲಾಗುತ್ತದೆ. ಸದ್ಯ ತಿಂಗಳಿಗೆ 10 ಸಾವಿರ ಗೌರವಧನ ನಿಗದಿಪಡಿಸಲಾಗಿದೆ.
ಅರ್ಜಿಯನ್ನು ಸರ್ಕಾರಿ ಪದವಿ ಪೂರ್ವ ಕಾಲೇಜು ಶಿರವಾಡ, ಕಾರವಾರ ಎಂಬ ವಿಳಾಸಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಇಲ್ಲಿ ಫೋನ್ ಮಾಡಿ: 9449574131 ಹಾಗೂ 9448797066