Advertisement. Scroll to continue reading.
`ಉತ್ತರ ಕನ್ನಡ ಜಿಲ್ಲೆಯಲ್ಲಿ ಅಗತ್ಯವಿರುವ ಕಡೆ ಅಂಗನವಾಡಿ ಕಟ್ಟಡ ನಿರ್ಮಿಸಲು ನಿವೇಶನ ಹುಡುಕಬೇಕು. ನಿವೇಶನ ಸಿಗದ ಕಡೆ ಸಂಬoಧಿಸಿದ ಇಲಾಖೆ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ಕೆಲಸ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Advertisement. Scroll to continue reading.
Advertisement. Scroll to continue reading.
ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಸಮನ್ವಯ ಸಮಿತಿ ಸಭೆ ನಡೆಸಿದ ಅವರು `ಅಂಗನವಾಡಿ ಕಟ್ಟಡ ನಿಮಾರ್ಣಕ್ಕೆ ಸಂಬoಧಿಸಿದoತೆ ವಿವಿಧ ಯೋಜನೆಗಳಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು’ ಎಂದು ಸೂಚಿಸಿದ್ದಾರೆ. `ಅಂಗನವಾಡಿ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಪ್ರಸ್ತುತ ಪ್ರಗತಿಯಲ್ಲಿರುವ 91 ಕಾಮಗಾರಿಗಳು ನಡೆಯುತ್ತಿವೆ. ಈ ಕುರಿತು ಸಂಬoದಪಟ್ಟ ಕಾಮಗಾರಿ ನಿರ್ಮಾಣ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಬೇಕು. ಎಲ್ಲಾ ಅಂಗನವಾಡಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳು ಇರುವ ಬಗ್ಗೆ ಪರಿಶೀಲಿಸಬೇಕು. ದುರಸ್ಥಿ ಸಂಬoಧಿತ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಮುಕ್ತಾಯಗೊಳಿಸಬೇಕು. ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ನಿವೇಶನ ಅಗತ್ಯವಿರುವ ಸ್ಥಳಗಳಲ್ಲಿ ನಿವೇಶನ ಪಡೆಯುವ ಕುರಿತಂತೆ ಸ್ಥಳೀಯ ಸಂಬAದಪಟ್ಟ ಇಲಾಖಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಬೇಕು’ ಎಂದು ಹೇಳಿದ್ದಾರೆ.
`ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ವಿವಿಧ ಯೋಜನೆಗಳ ಕುರಿತಂತೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಇನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು’ ಎಂದು ನಿರ್ದೇಶನ ನೀಡಿದರು. ಈ ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪದ್ಮಾವತಿ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ನಟರಾಜ್, ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಇದ್ದರು.