`ಗ್ರಾಮೀಣ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ಕುಟುಂಬಗಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಸಹಕಾರಿ ಸಂಸ್ಥೆಗಳ ಪಾತ್ರ ದೊಡ್ಡದು’ ಎಂದು ಶಿರಸಿ ಗಣೇಶ ನೇತ್ರಾಲಯದ ನೇತ್ರ ತಜ್ಞ ಡಾ ರವೀಂದ್ರ ಕೋಳ್ವೇಕರ್ ಅವರು ಹೇಳಿದ್ದಾರೆ. ಸ್ಕೊಡ್‌ವೆಸ್ ಮಹಿಳಾ ಸೌಹಾರ್ದ ಸಹಕಾರಿಯ ಸರ್ವ ಸಾಧಾರಣ ಸಭೆಯಲ್ಲಿ ಮಾತನಾಡಿದ ಅವರು `ಮಹಿಳೆಯರ ಆರ್ಥಿಕ ಸಬಲೀಕರಣದಿಂದ ಕುಟುಂಬ ಹಾಗೂ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ’ ಎಂದು ಹೇಳಿದ್ದಾರೆ.
Advertisement. Scroll to continue reading.
`ಮಹಿಳೆಯರು ಉಳಿತಾಯ, ಸ್ವ-ಸಹಾಯ ಸಂಘಗಳು ಹಾಗೂ ಸಹಕಾರಿ ಚಟುವಟಿಕೆಗಳ ಮೂಲಕ ತಮ್ಮ ಆರ್ಥಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳುತ್ತಿರುವುದು ಶ್ಲಾಘನೀಯ’ ಎಂದವರು ಅಭಿಪ್ರಾಯಪಟ್ಟಿದ್ದಾರೆ. ಸಭೆಯ ಅಧ್ಯಕ್ಷತೆ ವಹಿಸಿದ್ದ ಸ್ಕೊಡ್‌ವೆಸ್ ಮಹಿಳಾ ಸೌಹಾರ್ದ ಸಹಕಾರಿಯ ಅಧ್ಯಕ್ಷೆ ಸರಸ್ವತಿ ಎನ್ ರವಿ ಮಾತನಾಡಿ `ಸ್ಕೊಡ್‌ವೆಸ್ ಮಹಿಳಾ ಸೌಹಾರ್ದ ಸಹಕಾರಿ ಸಂಸ್ಥೆಯು ಸದಸ್ಯರ ವಿಶ್ವಾಸ, ಪಾರದರ್ಶಕತೆ ಹಾಗೂ ಪ್ರಾಮಾಣಿಕ ಸೇವೆಯೊಂದಿಗೆ ನಿರಂತರವಾಗಿ ಪ್ರಗತಿಯತ್ತ ಸಾಗುತ್ತಿದೆ. ಕಳೆದ ಸಾಲಿನಲ್ಲಿ ಸಹಕಾರಿಯು ಉತ್ತಮ ಆರ್ಥಿಕ ಸಾಧನೆ ದಾಖಲಿಸಿದ್ದು, ಸದಸ್ಯರ ಹಿತಾಸಕ್ತಿಗೆ ಅನುಗುಣವಾಗಿ ವಿವಿಧ ಸೇವೆಗಳನ್ನು ಪರಿಣಾಮಕಾರಿಯಾಗಿ ಒದಗಿಸಲಾಗುತ್ತಿದೆ’ ಎಂದು ತಿಳಿಸಿದರು. `ಸದರಿ ವರ್ಷದಲ್ಲಿ ಸ್ಕೊಡ್‌ವೆಸ್ ಮಹಿಳಾ ಸೌಹಾರ್ದ ಸಹಕಾರಿಯು 20.68 ಲಕ್ಷ ನಿವ್ವಳ ಲಾಭಗಳಿಸಿದೆ’ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಶಿರಸಿ ಹೆರಿಟೇಜ್ ಇನ್ನರ್‌ವೀಲ್ ಕ್ಲಬ್‌ನ ಅಧ್ಯಕ್ಷ ಚೇತನಾ ಹೆಗಡೆ ಸಂದರ್ಭೋಚಿತವಾಗಿ ಮಾತನಾಡಿದರು. ವೇದಿಕೆಯಲ್ಲಿ ಸಹಕಾರಿಯ ಉಪಾಧ್ಯಕ್ಷೆ ಹೇಮಲತಾ ಚೌಗುಲೆ, ನಿರ್ದೇಶಕರಾದ ಲಲಿತಾ ಹೆಗಡೆ, ಸ್ವಾತಿ ಶೆಟ್ಟಿ, ವೀಣಾ ಮೊಗೇರ್, ಗೀತಾ ಹಣಬರ್, ಭಾಗೀರಥಿ ನಾಯ್ಕ, ಸರೋಜಾ ಗಂಗೊಳ್ಳಿ, ಲಕ್ಷ್ಮೀ ಎಸ್., ಪೂರ್ಣಿಮಾ ಪಾಟೀಲ್, ದಾನೇಶ್ವರಿ ಹಿರೇಮಠ್ ಹಾಗೂ ಸ್ಕೊಡ್‌ವೆಸ್ ಮಹಿಳಾ ಸೌಹಾರ್ದ ಸಹಕಾರಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗಣಪತಿ ನಾಯ್ಕ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಹಿಳಾ ಸೌಹಾರ್ದ ಸಹಕಾರಿಯ ಸಾಧಕರು ಹಾಗೂ ಠೇವಣಿದಾರ ಸದಸ್ಯರಿಗೆ ಸನ್ಮಾನಿಸಲಾಯಿತು. ಬೆಳಗಿನ ಅವಧಿಯಲ್ಲಿ ಸಹಕಾರಿಯ ಸದಸ್ಯರು ಹಾಗೂ ಸ್ವ-ಸಹಾಯ ಸಂಘದ ಮಹಿಳೆಯರಿಗೆ ವಿವಿಧ ಆಟೋಟಗಳನ್ನು ಏರ್ಪಡಿಸಲಾಗಿತ್ತು. ಉತ್ತರ ಕನ್ನಡ ಹಾಗೂ ಹಾವೇರಿ ಸೇರಿದಂತೆ 300ಕ್ಕೂ ಅಧೀನ ಮಹಿಳಾ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Advertisement. Scroll to continue reading.
ಕಾರ್ಯಕ್ರಮವನ್ನು ಸ್ಕೊಡ್‌ವೆಸ್‌ನ ಕಾರ್ಯಕ್ರಮಾಧಿಕಾರಿ ನಾರಾಯಣ ಹೆಗಡೆ ನಿರೂಪಿಸಿದರು. ಸ್ಕೊಡ್‌ವೆಸ್ ಮಹಿಳಾ ಸೌಹಾರ್ದ ಸಹಕಾರಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗಣಪತಿ ನಾಯ್ಕ ಗಣಪತಿ ನಾಯ್ಕ ವಂದಿಸಿದರು.