ಉತ್ತರ ಕನ್ನಡ ಜಿಲ್ಲಾ ಪಂಚಾಯತವು ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದೆ. 9ರಿಂದ 16 ವರ್ಷದೊಳಿಗಿನ ಎಲ್ಲಾ ಮಕ್ಕಳು ಮುಕ್ತವಾಗಿ ಈ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ನೀಡಲಾಗಿದೆ.
ಮಕ್ಕಳ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತವೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಬಾಲಭವನ ಸೊಸೈಟಿ ಆಶ್ರಯದಲ್ಲಿ ಈ ಸ್ಪರ್ಧೆ ಆಯೋಜಿಸಿದೆ. ಸೃಜನಾತ್ಮಕ ಕಲೆ, ಸೃಜನಾತ್ಮಕ ಬರವಣಿಗೆ, ಸೃಜನಾತ್ಮಕ ಪ್ರದರ್ಶನ ಕಲೆ, ವಿಜ್ಞಾನದಲ್ಲಿ ನೂತನ ಆವಿಷ್ಕಾರ, ಭಾಷಣ ಸ್ಪರ್ಧೆ ನಡೆಯಲಿದೆ. ಇದರೊಂದಿಗೆ ವಿಕಲಚೇತನ ಹಾಗೂ ಬುಡಕಟ್ಟು ಪ್ರದೇಶದ ಮಕ್ಕಳಿಗಾಗಿ ಪ್ರತ್ಯೇಕ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ. ಈ ಎಲ್ಲಾ ಸ್ಪರ್ಧೆಗಳು ನವೆಂಬರ್ 4ರಂದು ಬೆಳಗ್ಗೆ 10.30ಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸ್ತಿ ಶಕ್ತಿ ಭವನದಲ್ಲಿ ಆಯೋಜಿಸಲಾಗಿದೆ.
ಭಾಷÀಣ ಸ್ಪರ್ಧೆಯನ್ನು ಹೊರತುಪಡಿಸಿ ಉಳಿದ ಪ್ರತಿ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನಗಳಿಸಿದ 10 ಮಕ್ಕಳಿಗೆ ರಾಜ್ಯ ಮಟ್ಟದ ಕಲಾಶ್ರೀ ಪ್ರಶಸ್ತಿ ಆಯ್ಕೆ ಶಿಬಿರದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತದೆ. ಹೀಗಾಗಿ ಸ್ಪರ್ಧೆಯಲ್ಲಿ ಭಾಗವಹಿಸುವವರು ನವೆಂಬರ್ 3ರ ಸಂಜೆ 5ಗಂಟೆ ಒಳಗೆ ಹೆಸರು ನೋಂದಾಯಿಸಲು ಸೂಚಿಸಲಾಗಿದೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕೆ? ಹಾಗಾದರೆ, ಇಲ್ಲಿ ಫೋನ್ ಮಾಡಿ: 7892410524