ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಯ ನೇರ ನೇಮಕಾತಿಗೆ ಪರೀಕ್ಷಾ ಪ್ರಾಧಿಕಾರ ಈ ದಿನ ಪರೀಕ್ಷೆ ನಡೆಸಿದ್ದು, ಇದರಲ್ಲಿ 4774 ಅಭ್ಯರ್ಥಿಗಳು ಗೈರಾಗಿದ್ದಾರೆ. ಒಟ್ಟು 11671 ಅಭ್ಯರ್ಥಿಗಳು ಈ ಪರೀಕ್ಷೆ ಎದುರಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವೂ ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆ-2026ನ್ನು ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಒಟ್ಟು 23 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಿತು. ಪರೀಕ್ಷೆಯು ಎರಡು ಅವಧಿಗಳಲ್ಲಿ ನಡೆಯಿತು. ಬೆಳಗಿನ ಅವಧಿಯಲ್ಲಿ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ನಡೆದ ಪರೀಕ್ಷೆಗೆ ನೋಂದಾಯಿಸಿದ್ದ ಒಟ್ಟು 8,222 ಅಭ್ಯರ್ಥಿಗಳ ಪೈಕಿ 5,847 ಅಭ್ಯರ್ಥಿಗಳು ಹಾಜರಾಗಿದ್ದು, 2,375 ಅಭ್ಯರ್ಥಿಗಳು ಗೈರು ಹಾಜರಾಗಿದ್ದಾರೆ.
ಅದೇ ರೀತಿ, ಮಧ್ಯಾಹ್ನದ ಅವಧಿಯಲ್ಲಿ ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ನಡೆದ ಪರೀಕ್ಷೆಗೆ ಒಟ್ಟು 5,824 ಅಭ್ಯರ್ಥಿಗಳು ಹಾಜರಾಗಿದ್ದು, 2,399 ಅಭ್ಯರ್ಥಿಗಳು ಗೈರು ಹಾಜರಾಗಿದ್ದಾರೆ. ಪರೀಕ್ಷೆಯ ಸಂದರ್ಭದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹೊರಡಿಸಿರುವ ಎಲ್ಲಾ ಮಾರ್ಗಸೂಚಿಗಳು, ಗೌಪ್ಯತಾ ನಿಯಮಗಳು ಹಾಗೂ ಪರೀಕ್ಷಾ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಯಿತು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದAತೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು.
ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಪೊಲೀಸ್ ಬಂದೋಬಸ್ತ್, ವೈದ್ಯಕೀಯ ಸೌಲಭ್ಯ, ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಹಾಗೂ ಇತರೆ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಲಾಗಿತ್ತು. ಜಿಲ್ಲಾ ಆಡಳಿತದ ಸಮನ್ವಯದಲ್ಲಿ ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಜೆಸ್ಕಾಂ, ಸಾರಿಗೆ ಇಲಾಖೆ ಹಾಗೂ ಇತರೆ ಸಂಬAಧಿತ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯ ಸಹಕಾರದಿಂದ ಪರೀಕ್ಷೆಯನ್ನು ಯಾವುದೇ ತೊಂದರೆಗಳಿಲ್ಲದೆ ಯಶಸ್ವಿಯಾಗಿ ಪೂರ್ಣಗೊಳಿಸಲಾಯಿತು.
ಜಿಲ್ಲಾಧಿಕಾರಿ ಕೆ ಲಕ್ಷ್ಮಿ ಪ್ರಿಯಾ ಅವರು ಅಂಕೋಲಾ ಮತ್ತು ಕುಮಟಾ ದ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರೀಕ್ಷೆಯ ಸುಗಮ ಹಾಗೂ ಯಶಸ್ವಿ ನಿರ್ವಹಣೆಗೆ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಉಪಮುಖ್ಯ ಅಧೀಕ್ಷಕರು, ವೀಕ್ಷಕರನ್ನು ನೇಮಕ ಮಾಡಲಾಗಿತ್ತು.