ಬಾಳೆಹೊನ್ನೂರು ಶ್ರೀ ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನದ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಯಲ್ಲಾಪುರಕ್ಕೆ ಆಗಮಿಸಿದ್ದಾರೆ. ಕಲ್ಮಠದ ಶಿವಸಾನಿಧ್ಯ ಸಭಾಭವನದಲ್ಲಿ ಅವರು ಅಕ್ಟೊಬರ್ 24ರಂದು ಧರ್ಮ ಸಭೆ ನಡೆಸಲು ನಿರ್ಧರಿಸಿದ್ದಾರೆ.
ADVERTISEMENT
ಈ ಕುರಿತು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಲಿಂಗಯ್ಯ ಅಲ್ಲಯ್ಯನವರಮಠ ಹಾಗೂ ವಿಶ್ವ ಹಿಂದೂ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಗಜಾನನ ನಾಯ್ಕ ತಳ್ಳಿಕೇರಿ ಅವರು ಈ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. `ಬೆಳಿಗ್ಗೆ 9 ಗಂಟೆಗೆ ಶ್ರೀಗಳು ಇಷ್ಟಲಿಂಗ ಮಹಾಪೂಜೆ ನೆರವೇರಿಸಲಿದ್ದು, ಬಳಿಕ ಭಕ್ತರಿಗೆ ಆಶೀರ್ವಚನ ನೀಡಲಿದ್ದಾರೆ’ ಎಂದವರು ಹೇಳಿದ್ದಾರೆ.
ADVERTISEMENT
`ಬೆಳಗ್ಗೆ 9ರಿಂದ ಮಧ್ಯಾಹ್ನ 12ಗಂಟೆಯವರೆಗೆ ಧರ್ಮಸಭೆ ನಡೆಯಲಿದೆ. 12ಗಂಟೆಗೆ ಮಹಾಪೂಜೆ ನೆರವೇರಲಿದೆ. ಅದಾದ ನಂತರ ನಂತರ ಆಶೀರ್ವಚನ, ಪ್ರಸಾದ ವಿತರಣೆ ನಡೆಯಲಿದೆ’ ಎಂದವರು ವಿವರಿಸಿದ್ದಾರೆ. ಇಲ್ಲಿನ ಕಾರ್ಯಕ್ರಮಗಳನ್ನು ಮುಗಿಸಿ ಶ್ರೀಗಳು ಗೋಕರ್ಣ ಶಾಖಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಯಲ್ಲಾಪುರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಕಲ ಭಕ್ತರು ಹಾಗೂ ಸಮಾಜದ ಬಂಧುಗಳು ಭಾಗವಹಿಸಬೇಕು’ ಎಂದವರು ಮನವಿ ಮಾಡಿದ್ದಾರೆ.