ಯುವಜನತೆಗೆ ಉದ್ಯೋಗ ಮತ್ತು ಆರ್ಥಿಕ ಸ್ವಾವಲಂಬನೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉದ್ಯೋಗ ಮೇಳ ಆಯೋಜಿಸುತ್ತಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವೂ ನವೆಂಬರ್ 30ರಂದು ಮಂಗಳೂರಿನಲ್ಲಿ ವಿಭಾಗೀಯ ಮಟ್ಟದ ಉದ್ಯೋಗ ಮೇಳ ನಡೆಸುತ್ತಿದೆ.
ಮಂಗಳೂರು ನಗರದ ಸಂತ ಅಲೋಶಿಯಸ್ ಡೀಮ್ಡ್ ವಿಶ್ವವಿದ್ಯಾನಿಲಯದ ಆವರಣದಲ್ಲಿ ಅಂದು ಬೆಳಿಗ್ಗೆ 9 ಗಂಟೆಯಿAದ ಸಂಜೆ 5 ಗಂಟೆಯವರೆಗೆ ಈ ಮೇಳ ನಡೆಯಲಿದೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಾದ ಡಾ ಶರಣ ಪ್ರಕಾಶ್ ಪಾಟೀಲ್, ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕಾಂತಾ ನಾಯಕ್ ಅವರ ನೇತೃತ್ವದಲ್ಲಿ ಈ ಉದ್ಯೋಗ ಮೇಳ ಜರುಗಲಿದೆ.
ಈ ಉದ್ಯೋಗ ಮೇಳದಲ್ಲಿ ಇನ್ಫೋಸಿಸ್, ಅಕ್ಸೆಂಚರ್, ಟೊಯೊಟಾ ಕಿರ್ಲೋಸ್ಕರ್, ಕಿಯಾ ಇಂಡಿಯಾ, ಐಸಿಐಸಿಐ ಬ್ಯಾಂಕ್, ಎಸ್ಬಿಐ ಲೈಫ್, ಡಾ ರೆಡ್ಡೀಸ್, ಸಿಂಜಿನ್, ರಿಲಯನ್ಸ್ ರಿಟೇಲ್, ಸ್ವಿಗ್ಗಿ ಇನ್ಸ್ಟಾಮಾರ್ಟ್, ಮೆಡ್ಪ್ಲಸ್ ಸೇರಿದಂತೆ 150ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳು ಪಾಲ್ಗೊಳ್ಳಲಿದೆ. ಎಲ್ಲಾ ಜಿಲ್ಲೆಗಳ ಯುವಜನತೆ ಸೇರಿದಂತೆ ರಾಜ್ಯದಾದ್ಯಂತ ಇರುವ ಉದ್ಯೋಗಾಕಾಂಕ್ಷಿಗಳಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದು. ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತ ಕಂಪನಿಗಳ ನಡುವೆ ನೇರ ಸಂಪರ್ಕ ಕಲ್ಪಿಸಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗಾವಕಾಶ ಪಡೆಯುವ ಅವಕಾಶ ನೀಡಲಾಗಿದೆ.
ಐದು ಪ್ರತಿಗಳ ಬಯೋಡಾಟಾ ಜೊತೆ ಮೇಳಕ್ಕೆ ಬನ್ನಿ. ನೋಂದಣಿ ಮತ್ತು ಹೆಚ್ಚಿನ ಮಾಹಿತಿಗೆ ಇಲ್ಲಿ ಫೋನ್ ಮಾಡಿ: 9606494308