• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

This job is only for those who have passed B.Com!

ಈ ಕೆಲಸ ಬಿ.ಕಾಂ ಪಾಸ್ ಆದವರಿಗೆ ಮಾತ್ರ!

November 19, 2026
Karwar Pradeep where are you

ಕಾರವಾರ | ಪ್ರದೀಪ್ ಎಲ್ಲಿದೀಯಪ್ಪ?

November 19, 2026
Minister's outrage against excise irregularities!

ಅಬಕಾರಿ ಅಕ್ರಮದ ವಿರುದ್ಧ ಸಚಿವರ ಆಕ್ರೋಶ!

November 19, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

This job is only for those who have passed B.Com!

ಈ ಕೆಲಸ ಬಿ.ಕಾಂ ಪಾಸ್ ಆದವರಿಗೆ ಮಾತ್ರ!

November 19, 2026
Karwar Pradeep where are you

ಕಾರವಾರ | ಪ್ರದೀಪ್ ಎಲ್ಲಿದೀಯಪ್ಪ?

November 19, 2026
Minister's outrage against excise irregularities!

ಅಬಕಾರಿ ಅಕ್ರಮದ ವಿರುದ್ಧ ಸಚಿವರ ಆಕ್ರೋಶ!

November 19, 2026
  • Home
  • Janamata
Friday, November 20, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಅಬಕಾರಿ ಅಕ್ರಮದ ವಿರುದ್ಧ ಸಚಿವರ ಆಕ್ರೋಶ!

Mobiletime.in by Mobiletime.in
November 19, 2026
in ನಮ್ಮ ಊರು-ನಮ್ಮ ಜಿಲ್ಲೆ
Minister's outrage against excise irregularities!
Share on FacebookShare on WhatsappShare on Twitter
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಅಬಕಾರಿ ಅಕ್ರಮ ನಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಬಕಾರಿ ಅಕ್ರಮ ತಡೆಯುವಲ್ಲಿ ಅಧಿಕಾರಿಗಳು ವಿಫಲವಾಗಿರುವ ಬಗ್ಗೆ ಉಸ್ತುವಾರಿ ಸಚಿವ ಲಕ್ಷಣ ಸವದಿ ಅವರೇ ಅಸಮಧಾನವ್ಯಕ್ತಪಡಿಸಿದ್ದಾರೆ.

`ಅಬಕಾರಿ ಇಲಾಖೆಗೆ ಸಂಬoಧಿಸಿದoತೆ ನಡೆಯುತ್ತಿರುವ ಅಕ್ರಮಗಳನ್ನು ತಡೆಯುವಲ್ಲಿ ಅಬಕಾರಿ ಅಧಿಕಾರಿಗಳು ವಿಫಲವಾಗಿದ್ದು, ಈ ಅಕ್ರಮಗಳನ್ನು ಸಂಪೂರ್ಣವಾಗಿ ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲವಾದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ’ ಎಂದವರು ಎಚ್ಚರಿಸಿದ್ದಾರೆ. `ಉತ್ತರ ಕನ್ನಡ ಜಿಲ್ಲೆಯ ಮಾರ್ಗವಾಗಿ ಟ್ಯಾಂಕರ್‌ಗಳ ಮೂಲಕ ಅಕ್ರಮವಾಗಿ ಸ್ಪಿರಿಟ್ ಸಾಗಾಣೆಯ ಗೋವಾ ರಾಜ್ಯಕ್ಕೆ ತೆರಳುತ್ತಿದ್ದು, ಈ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಅಬಕಾರಿ ಇಲಾಖೆಯ ಚೆಕ್ ಪೋಸ್ಟ್ಗಳು ಇದ್ದರ ಕೂಡಾ ಈ ಅಕ್ರಮ ಸಾಗಾಣಿಕೆ ನಡೆಯಿತ್ತಿರುವುದು ಅಬಕಾರಿ ಇಲಾಖೆ ಅಧಿಕಾರಿಗಳ ಕಾರ್ಯ ವೈಫಲ್ಯ ತೋರಿಸುತ್ತದೆ’ ಎಂದವರು ಹೇಳಿದ್ದಾರೆ. `ಈ ಅಕ್ರಮ ಸಾಗಾಟದಿಂದ ರಾಜ್ಯದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿಗಳ ನಷ್ಠವಾಗುತ್ತಿದೆ. ಇದನ್ನು ತಡೆಯಲು ಅಬಕಾರಿ ಇಲಾಖೆಯಿಂದ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಅವರು ಹೇಳಿದ್ದಾರೆ. `ಈ ಘಟನೆಯು ಅಬಕಾರಿ ಅಕ್ರಮ ತಡೆಗೆ ಇರುವ ಇಲಾಖೆಯೇ ಬೇಲಿ ಇದ್ದು ಹೊಲ ಮೇಯ್ದಂತೆ ಆಗಿದೆ. ಇಂತಹ ಘಟನೆಗಳು ಮರುಕಳಿಸಿದ್ದಲ್ಲಿ ಸಂಬ0ಧಪಟ್ಟ ಅಧಿಕಾರಿಗಳನ್ನು ಮನೆಗೆ ಕಳಿಸಲಾಗುತ್ತದೆ’ ಎಂದು ಎಚ್ಚರಿಸಿದ್ದಾರೆ. `ಈ ಬಗ್ಗೆ ಪೊಲೀಸ್ ಇಲಾಖೆಯ ಮೂಲಕವೂ ಪರಿಶೀಲನೆ ಕಾರ್ಯ ನಡೆಸಬೇಕು’ ಎಂದು ಸೂಚಿಸಿದ್ದಾರೆ.

ADVERTISEMENT

ಜಿಲ್ಲೆಯಲ್ಲಿ ಬರ ಘೋಷಣೆಯಾಗಿರುವ ಈ ಸಂದರ್ಭದಲ್ಲಿ ಕುಡಿಯುವ ನೀರಿನ ಮತ್ತು ಮೇವಿನ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ ಸಚಿವರು ಈಗಾಗಲೇ ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ಬಿಡುಗಡೆಯಾಗಿರುವ 1 ಕೋಟಿ ರೂಗಳಿಗೆ ಶಾಸಕರ ಅನುಮೋದನೆಯೊಂದಿಗೆ ಟಾಸ್ಕ್ ಪೋರ್ಸ್ ಮೂಲಕ ತುರ್ತು ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚಿಸಿ, ಹೆಚ್ಚಿನ ಅನುದಾನದ ಅಗತ್ಯವಿದ್ದಲ್ಲಿ ಸರ್ಕಾರದಿಂದ ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದರು. `ಜಿಲ್ಲೆಯ ಜನತೆ ಬೇಡ್ತಿ- ಅಘನಾಶಿನಿ ನದಿ ಯೋಜನೆಗೆ ತೀವ್ರ ಪ್ರತಿಭಟನೆ ಮತ್ತು ವಿರೋಧ ವ್ಯಕ್ತಪಡಿಸುತ್ತಿದ್ದು, ಈ ಯೋಜನೆಯನ್ನು ವಿರೋಧಿಸಿ ಕೆ.ಡಿ.ಪಿ ಸಭೆಯಲ್ಲಿ ನಿರ್ಣಯ ಕೈಗೊಳ್ಳುವಂತೆ ಶಾಸಕ ಭೀಮಣ್ಣ ನಾಯ್ಕ ಮತ್ತು ಶಿವರಾಮ ಹೆಬ್ಬಾರ್ ಕೋರಿದ್ದು, ಈ ನಿರ್ಣಯವನ್ನು ಅನುಮೋದಿಸಲಾಗಿದೆ’ ಎಂದು ಸಚಿವರು ತಿಳಿಸಿದರು.

ಹಳೆಯ ಸ್ಕಾçಫ್ ಮಾಡಿದ ¨ಸ್‌ಗಳಿಗೆ ಅನುಗುಣವಾಗಿ ಹೊಸ ಬಸ್ ಗಳನ್ನು ಒದಗಿಸುವಂತೆ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಸಿದ್ದಾಪುರದಲ್ಲಿ ಬಸ್ ಡಿಪೋ ಆರಂಭಿಸುವ ಕುರಿತಂತೆ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸಾರಿಗೆ ಸಚಿವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು. ಅಕ್ಷರ ದಾಸೋಹ ಕಾರ್ಯಕ್ರಮದಡಿಯಲ್ಲಿ ಮಕ್ಕಳಿಗೆ ನೀಡುತ್ತಿರುವ ಊಟದ ಗುಣಮಟ್ಟವನ್ನು ಖುದ್ದು ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಮಕ್ಕಳೊಂದಿಗೆ ಊಟ ಮಾಡಬೇಕು, ಈ ಕುರಿತು ಪೋಟೋಗಳನ್ನು ಸಲ್ಲಿಸುವಂತೆ ತಿಳಿಸಿದ ಅವರು, ಮಕ್ಕಳಿಗೆ ನೀಡುವ ಆಹಾರದ ಗುಣಮಟ್ಟದಲ್ಲಿ ವ್ಯತ್ಯಾಸವಾಗದಂತೆ ಎಚ್ಚರಿಕೆ ವಹಿಸಬೇಕು. ಎನ್.ಜಿ.ಓಗಳ ಮೂಲಕ ನೀಡುವ ಆಹಾರವನ್ನು ಕೂಲಂಕುಷವಾಗಿ ಪರಿಶೀಲಿಸುವಂತೆ ಸೂಚಿಸಿದರು. ಆಹಾರ ಇಲಾಖೆ ಮೂಲಕ ನೀಡಲಾಗುವ ಸೀಮೆಎಣ್ಣೆ ಸಮರ್ಪಕವಾಗಿ ತಲುಪದ ಬಗ್ಗೆ ದೂರುಗಳು ಬಂದಿದ್ದು, ಈ ಬಗ್ಗೆ ಪರಿಶೀಲಿಸಿ ಅರ್ಹರಿಗೆ ಸೌಲಭ್ಯ ದೊರೆಯುವಂತೆ ಮಾಡಬೇಕು, ಎಪಿಎಲ್ ಕಾರ್ಡ್ದಾರರಿಗೂ ತಾಲೂಕು ಕೇಂದ್ರದಲ್ಲಿ ಸೀಮೆಎಣ್ಣೆ ನೀಡುವ ಕುರಿತಂತೆ ಪ್ರಸ್ತಾವನೆ ಸಲ್ಲಿಸಬೇಕು. ಅಗತ್ಯವಿರುವಡೆಗಳಲ್ಲಿ ಹೊಸ ಪಡಿತರ ಅಂಗಡಿಗಳನ್ನು ತೆರೆಯುವಂತೆ ತಿಳಿಸಿದರು. ಶಿರಸಿಯ ಸರ್ಕಾರಿ ಆಸ್ಪತ್ರೆಗೆ ಅಗತ್ಯವಿರುವ ಹೊಸ ಯಂತ್ರೋಪಕರಣಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು. ಆರೋಗ್ಯ ಕೇಂದ್ರಗಳಲ್ಲಿ ಔಷಧಗಳ ಕೊರತೆಯಾಗಬಾರದು. ತಜ್ಞ ವೈದ್ಯರ ಕೊರತೆ ಇರುವ ಕಡೆಗಳಲ್ಲಿ ರೋಗಿಗಳಿಗೆ ಯಾವುದೇ ತೊಂದರೆಯಾಗದAತೆ ಪರ್ಯಾಯ ಕ್ರಮಗಳನ್ನು ಕೈಗೊ¼ಬೇಕು’ ಎಂದು ನಿರ್ದೇಶನ ನೀಡಿದರು.

`ಜಿಲ್ಲೆಯ ಹಾಸ್ಟೆಲ್ ಗಳಲ್ಲಿ ಮೆನು ಪ್ರಕಾರ ವಿದ್ಯಾರ್ಥಿಗಳಿಗೆ ಉತ್ತಮ ಅಹಾರ ನೀಡಬೇಕು’ ಎಂದ ಸಚಿವರು, `ಮುಂದಿನ ದಿನಗಳಲ್ಲಿ ತಾನೇ ಅನಿರೀಕ್ಷಿತವಾಗಿವಾಗಿ ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ, ಅಲ್ಲಿಯೇ ಊಟ ಮಾಡಿ, ಸಮಗ್ರವಾಗಿ ಪರಿಶೀಲನೆ ನಡೆಸುವೆ’ ಎಂದರು. ಹೊಸದಾಗಿ ಅಗತ್ಯವಿರುವ ವಿದ್ಯಾರ್ಥಿನಿಲಯಗಳ ಬೇಡಿಕೆ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು. `ಜೆಜೆಎಂ ಕಾಮಗಾರಿಗಳ ವಿರುದ್ಧ ಅಪಸ್ವರ ಕೇಳಿಬರುತಿದ್ದು, ಅಸಮರ್ಪಕ ಯೋಜನೆ ಅನುಷ್ಠಾನ, ನೀರಿನ ಮೂಲಗಳಿಲ್ಲದೇ ಪೈಪ್ ಅಳವಡಿಕೆ ಮಾಡಿರುವುದು, ಕಾಮಗಾರಿ ಮುಗಿದರೂ ನೀರು ಸರಬರಜು ಆಗದೇ ಇರುವುದು ಮುಂತಾದ ದೂರುಗಳಿದು,್ದ ಜಿಲ್ಲಾ ಪಂಚಾಯತ್ ಸಿಇಓ ಅವರು ತಾಲೂಕುವಾರು ಭೇಟಿ ನೀಡಿ, ಕಾಮಗಾರಿಗಳ ಪರಿಶೀಲನೆ ನಡೆಸಬೇಕು’ ಎಂದರು. ಲೋಕೋಪಯೋಗಿ ಇಲಾಖೆ ವತಿಯಿಂದ ರಸ್ತೆಗಳ ಗುಂಡಿ ಮುಚ್ಚದೇ ಇರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಅಪಘಾತಗಳು ಸಂಭವಿಸುತ್ತಿರುವ ಬಗ್ಗೆ ಶಾಸಕರು ನೀಡಿದ ದೂರಿನ ಕುರಿತಂತೆ, ಲೋಕೋಪಯೋಗಿ ಇಲಾಖೆಗೆ ರಸ್ತೆ ನಿರ್ವಹಣೆ ಯೋಜನೆಗೆ ಬರುವ ಅನುದಾನದ ಬಳಕೆ ಕುರಿತಂತೆ ಮೂರನೇ ವ್ಯಕ್ತಿಯಿಂದ ತಪಾಸಣೆ ನಡೆಸಿ, ಇದುವರೆಗೆ ಬಿಡುಗಡೆಯಾಗಿರುವ ಮತ್ತು ವೆಚ್ಚವಾಗಿರುವ ಮೊತ್ತದ ಮಾಹಿತಿಯನ್ನು ಪಡೆಯುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

`ಜಿಲ್ಲೆಯಲ್ಲಿನ ಎಲ್ಲಾ ಮಳೆಮಾಪನ ಯಂತ್ರಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಪರಿಶೀಲಿಸಬೇಕು/ ಬೆಳೆ ವಿಮೆ ಪಾವತಿ ಮಾಡಿದ ಎಲ್ಲಾ ರೈತರಿಗೂ ಯೋಜನೆಯ ಪ್ರಯೋಜನ ದೊರೆಯಬೇಕು’ ಎಂದ ಸಚಿವರು `ಪ್ರಸ್ತುತ ಬಿಡುಗಡೆಯಾಗಿರುವ ಕಳೆದ ಸಾಲಿನ ಅನುದಾನ ಫಲಾನುಭವಿಗಳಿಗೆ ಜಮೆ ಆಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ತಾಂತ್ರಿಕ ಕಾರಣಗಳಿಂದ ಜಮೆ ಆಗದಿದ್ದಲ್ಲಿ ಸಮಸ್ಯೆಗಳನ್ನು ಬಗೆಹರಿಸಬೇಕು’ ಎಂದರು. `ರಾಜ್ಯ ಸರ್ಕಾರದಿಂದ ರೈತರಿಗೆ ನೀಡುವ ರೂ.2500 ಬರ ಪರಿಹಾರ ಯೋಜನೆಯಡಿ ಜಿಲ್ಲೆಯಲ್ಲಿ ರೂ.2.51 ಕೋಟಿ ಮೊತ್ತ ಪಾವತಿಸಲು ಅನುಮೋದನೆಗೆ ಸಲ್ಲಿಸಲಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. `ಜಿಲ್ಲೆಯ 15 ಮಂದಿ ಮಹಿಳೆಯರು ಗೃಹಲಕ್ಷಿö್ಮ ಯೋಜನೆಯಲ್ಲಿ ನೋಂದಣಿ ಮಾಡುವಾಗ ಅವರು ಜೀವಂತವಿದ್ದರೂ ತಂತ್ರಾAಶದಲ್ಲಿ ಮೃತರು ಎಂದು ತೋರಿಸುತ್ತಿದ್ದು, ಈ ಸಮಸ್ಯೆಯನ್ನು ಬಗೆಹರಿಸಬೇಕು’ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಸ್ ನಾಯ್ಕ ಮನವಿ ಮಾಡಿದರು. ಮುಂದಿನ ಕ್ಯಾಬಿನೆಟ್ ಸಭೆಯನ್ನು ಜಿಲ್ಲೆಯಲ್ಲಿ ಆಯೋಜನೆ ಮಾಡುವಂತೆ ಶಾಸಕ ಭೀಮಣ್ಣ ನಾಯ್ಕ ಕೋರಿದರು. ಜಿಲ್ಲಾ ಪಂಚಾಯತದಲ್ಲಿ ನಡೆದ ಈ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಗೋಡಬೋಲೆ, ಜಿಲ್ಲಾಧಿಕಾರಿ ಹರ್ಷಲ್ ಬೊಯರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

This job is only for those who have passed B.Com!

ಈ ಕೆಲಸ ಬಿ.ಕಾಂ ಪಾಸ್ ಆದವರಿಗೆ ಮಾತ್ರ!

November 19, 2026
Karwar Pradeep where are you

ಕಾರವಾರ | ಪ್ರದೀಪ್ ಎಲ್ಲಿದೀಯಪ್ಪ?

November 19, 2026
Minister's outrage against excise irregularities!

ಅಬಕಾರಿ ಅಕ್ರಮದ ವಿರುದ್ಧ ಸಚಿವರ ಆಕ್ರೋಶ!

November 19, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383