ಶಿರಸಿಯ ಶ್ರೀ ಭೂತೇಶ್ವರ ಪತ್ತಿನ ಸಹಕಾರಿ ಸಂಘಕ್ಕೆ ಕೆಡಿಸಿಸಿ ಬ್ಯಾಂಕ್ ಮತ್ತೊಂದು ಪ್ರಶಸ್ತಿ ನೀಡಿದೆ. `ಭೂತೇಶ್ವರ ಪತ್ತಿನ ಸಹಕಾರಿ ಸಂಘವ ಜಿಲ್ಲೆಯ ಉತ್ತಮ ಅರ್ಬನ್ ಪತ್ತಿನ ಸಹಕಾರಿ ಸಂಘ’ ಎಂದು ಕೆಡಿಸಿಸಿ ಬ್ಯಾಂಕ್ ಅಭಿಪ್ರಾಯವ್ಯಕ್ತಪಡಿಸಿದೆ.
ಶಿರಸಿ ನಗರದ ಕೆಡಿಸಿಸಿ ಬ್ಯಾಂಕ್ ಮುಖ್ಯ ಕಚೇರಿಯಲ್ಲಿ ಸೋಮವಾರ ನಡೆದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಯಲ್ಲಾಪುರ ಕ್ಷೇತ್ರ ಶಾಸಕ ಹಾಗೂ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವರಾಮ ಹೆಬ್ಬಾರ್ ಅವರು ಭೂತೇಶ್ವರ ಪತ್ತಿನ ಸಹಕಾರಿ ಸಂಘಕ್ಕೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಕೆಡಿಸಿಸಿ ಬ್ಯಾಂಕ್’ನ ವಿವಿಧ ನಿರ್ದೇಶಕರು ಹಾಗೂ ಇನ್ನಿತರ ಗಣ್ಯರ ಸಮ್ಮುಖದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸಂಘದ ಅಧ್ಯಕ್ಷ ಶ್ರೀಧರ ಮೊಗೇರ್ ಹಾಗೂ ಮುಖ್ಯ ಕಾರ್ಯನಿರ್ವಾಹಕ ವಿನಾಯಕ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿದ್ದಾರೆ.
ಕೆಡಿಸಿಸಿ ಬ್ಯಾಂಕ್ ನೀಡಿದ ಈ ಪ್ರಶಸ್ತಿಯೂ 10 ಸಾವಿರ ನಗದು ಹಣವನ್ನು ಒಳಗೊಂಡಿದೆ. ಜೊತೆಗೆ ಆಕರ್ಷಕ ಫಲಕವನ್ನು ನೀಡಿ ಗೌರವಿಸಲಾಗಿದೆ. 2024-25 ನೇ ಸಾಲಿನಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಣೆ ಮಾಡಿರುವ ಕಾರಣ ಸಂಘಕ್ಕೆ ಈ ಪ್ರಶಸ್ತಿ ಸಿಕ್ಕಿದೆ. ಇದೇ ಕೆಡಿಸಿಸಿ ಬ್ಯಾಂಕಿನಲ್ಲಿ ವಿಭಾಗೀಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಸಹಕಾರಿ ಧುರೀಣ ವಸಂತ ಶೆಟ್ಟಿ ಅವರು ಶ್ರೀ ಭೂತೇಶ್ವರ ಪತ್ತಿನ ಸಹಕಾರಿ ಸಂಘದ ಸ್ಥಾಪಕರಾಗಿದ್ದಾರೆ. ಭೂತೇಶ್ವರ ಪತ್ತಿನ ಸಹಕಾರಿ ಸಂಘವೂ ಬೆಳ್ಳಿ ಹಬ್ಬದ ಸಂದರ್ಭದಲ್ಲಿದ್ದು, ಈ ವೇಳೆ ಉತ್ತಮ ಸಂಘ ಪ್ರಶಸ್ತಿ ದೊರೆತಿದೆ.