`ರೈತರೆಲ್ಲರೂ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಪ್ರಯೋಜನಪಡೆಯಬೇಕು’ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಹೇಳಿದ್ದಾರೆ. ಫಸಲ್ ಭೀಮಾ ಯೋಜನೆಯ ಪೋಸ್ಟರ್ ಬಿಡುಗಡೆ ಮಾಡಿದ ಅವರು `ನೈಸರ್ಗಿಕ ವಿಕೋಪಗಳಿಂದ ರೈತರಿಗೆ ಉಂಟಾಗುವ ಬೆಳೆ ಹಾನಿ ನಷ್ಟ ತಪ್ಪಿಸಲು ಈ ಯೋಜನೆ ಸಹಕಾರಿ’ ಎಂದಿದ್ದಾರೆ.
`ಅಧಿಕಾರಿಗಳು ಹಾಗೂ ವಿಮಾ ಕಂಪನಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಹೆಚ್ಚಿನ ರೈತರನ್ನು ಯೋಜನೆಯ ವ್ಯಾಪ್ತಿಗೆ ತರಬೇರಕು. ನೋಂದಣಿ ಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸಬೇಕು’ ಎಂದವರು ಹೇಳಿದ್ದಾರೆ. `2026ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಅನುಷ್ಠಾನಗೊಳಿಸುವ ಜವಾಬ್ದಾರಿಯನ್ನು ಇಪ್ಕೋ ಟೋಕಿಯೋ ವಿಮಾ ಕಂಪನಿಗೆವಹಿಸಲಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಈ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್, ಜಿ ಪಂ ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೆಸ್ತಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಪ್ರಸಾದ್ ಗಾಂವ್ಕರ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಮಂಜುನಾಥ್ ರೇವಣಕರ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಉಮೇಶ್ ಉಪಸ್ಥಿತರಿದ್ದರು. ಇಪ್ಕೋ ಟೋಕಿಯೋ ವಿಮಾ ಕಂಪನಿಯ ಉತ್ತರ ಕನ್ನಡ ಜಿಲ್ಲಾ ಸಂಯೋಜಕ ರವೀಂದ್ರ ಮೊಗವೀರ ಹಾಗೂ ವಿವಿಧ ತಾಲೂಕುಗಳ ವಿಮಾ ಪ್ರತಿನಿಧಿಗಳು ಭಾಗವಹಿಸಿದ್ದರು.