`ಟಾಸ್ಕ್ ಫೋರ್ಸ್ ಕ್ರಿಯಾ ಯೋಜನೆಯಡಿ ಮಂಜೂರಾದ ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಮುಕ್ತಾಯಗೊಳಿಸಬೇಕು’ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಜಿ ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ ಸೂಚನೆ ನೀಡಿದ್ದಾರೆ.
ಕಾರವಾರದಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ನಡೆಸಿದ ಅವರು `ಈ ವರ್ಷ 1.50 ಕೋಟಿ ರೂ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದ್ದು, ಅದನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಬೇಕು. ಮತ್ತೆ 2.50 ಕೋಟಿ ರೂ ವೆಚ್ಚದ ಕಾಮಗಾರಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಅನುಮೋದನೆ ಪಡೆಯಬೇಕು’ ಎಂದು ಸೂಚಿಸಿದ್ದಾರೆ.
`ಟಾಸ್ಕ್ ಪೋರ್ಸ್ ಯೋಜನೆಯಡಿ ಈವರೆಗೆ ಕೈಗೊಂಡಿರುವ ಕಾಮಗಾರಿಗಳು ಮತ್ತು ಅವುಗಳ ಪ್ರಗತಿ ಕುರಿತಂತೆ ವಿವರವಾದ ವರದಿ ಸಲ್ಲಿಸಬೇಕು. ಬೋರ್‌ವೆಲ್ ಕಾಮಗಾರಿ ಸಂದರ್ಭದಲ್ಲಿ ಕಡ್ಡಾಯವಾಗಿ ಜಿಯಾಲಿಜಿಸ್ಟ್ ಅಭಿಪ್ರಾಯ ಪಡೆಯಬೇಕು’ ಎಂದು ತಿಳಿಸಿದರು ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅಲ್ಲಾಬಕಷ್ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಇದ್ದರು.