ಉತ್ತರ ಕನ್ನಡ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಜಾರಿಯಲ್ಲಿದ್ದು, ಆಹಾರ ಬೆಳೆಗಳಿಗೆ ಈ ಬಾರಿ `ಇಪ್ಕೋ ಟೋಕಿಯೋ ಜನರಲ್ ಇನ್ಸುರೆನ್ಸ್’ ಕಂಪನಿ ಯೋಜನೆ ಅನುಷ್ಠಾನದ ಹೊಣೆ ಹೊತ್ತಿದೆ.
2026-27 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಭತ್ತ, ಮುಸುಕಿನ ಜೋಳ, ಹಾಗೂ ಹತ್ತಿ ಬೆಳೆಗಳಿಗೆ ವಿಮಾ ಸೌಲಭ್ಯ ನೀಡಲಾಗಿದ್ದು, ಮೆಕ್ಕೆಜೋಳ ಹಾಗೂ ಹತ್ತಿ ಬೆಳೆಗಳಿಗೆ ವಿಮೆ ನೊಂದಾಯಿಸಿಕೊಳ್ಳಲು ಬೆಳೆ ಸಾಲ ಪಡೆದ ರೈತರಿಗೆ ಮಾತ್ರ ಅಂತಿಮ ದಿನಾಂಕ ವಿಸ್ತರಿಸಲಾಗಿದೆ. ಅಗಸ್ಟ್ 7ರವರೆಗೆ ವಿಮೆ ನೊಂದಾಯಸಿಕೊಳ್ಳಲು ಅವಕಾಶ ನೀಡಲಾಗಿದೆ. ಇದರೊಂದಿಗೆ ಭತ್ತದ ಬೆಳೆಗೆ ವಿಮೆ ನೊಂದಾಯಿಸಿಕೊಳ್ಳಲು ಬೆಳೆ ಸಾಲ ಪಡೆದ ರೈತರು ಹಾಗೂ ಪಡೆಯದ ರೈತರಿಗೆ ವಿಮಾ ಯೋಜನೆ ಅಡಿ ನೋಂದಾಯಿಸಿಕೊಳ್ಳಲು ಅಗಸ್ಟ್ 14ಕ್ಕೆ ಕೊನೆ ದಿನ.
ರೈತರು ಪ್ರೋಟ್ ಐಡಿ, ಆಧಾರ ಕಾರ್ಡ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಪಹಣಿಯ ಪ್ರತಿಗಳ ಜೊತೆ ತಮ್ಮ ಹತ್ತಿರದ ರಾಷ್ಟ್ರೀಕೃತ ಬ್ಯಾಂಕ್, ವ್ಯವಸಾಯ ಸೇವಾ ಸಹಕಾರಿ ಸಂಘ, ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಬೆಳೆ ವಿಮ ನೊಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆ ಅಥವಾ ಟೋಲ್ ಪ್ರೀ ಸಂಖ್ಯೆ 1800 103 5490ಗೂ ಕರೆ ಮಾಡುವಂತೆ ಕೃಷಿ ಇಲಾಖೆ ಸೂಚಿಸಿದೆ.