• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Dandeli Tree felling by mobile phone light!

ದಾಂಡೇಲಿ | ಮೊಬೈಲ್ ಬೆಳಕಿನಲ್ಲಿ ಮರ ಕಟಾವು!

August 15, 2026

ಕುಮಟಾ | ಮೇಲಧಿಕಾರಿಗೆ ಹೊಡೆದ ನೌಕರ!

August 15, 2026
Sirsi Auto-rickshaw driver in hiding for 46 years!

ಶಿರಸಿ | 46 ವರ್ಷ ಅಡಗಿದ್ದ ಆಟೋ ಚಾಲಕ!

August 15, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Dandeli Tree felling by mobile phone light!

ದಾಂಡೇಲಿ | ಮೊಬೈಲ್ ಬೆಳಕಿನಲ್ಲಿ ಮರ ಕಟಾವು!

August 15, 2026

ಕುಮಟಾ | ಮೇಲಧಿಕಾರಿಗೆ ಹೊಡೆದ ನೌಕರ!

August 15, 2026
Sirsi Auto-rickshaw driver in hiding for 46 years!

ಶಿರಸಿ | 46 ವರ್ಷ ಅಡಗಿದ್ದ ಆಟೋ ಚಾಲಕ!

August 15, 2026
  • Home
  • Janamata
Saturday, August 15, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮೊಬೈಲ್ ಬೆಳಕಿನಲ್ಲಿ ಸಚಿವರ ಭಾಷಣ!

Achyutkumar by Achyutkumar
August 15, 2026
Minister's speech in mobile light!
Share on FacebookShare on WhatsappShare on Twitter
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಅಧಿಕಾರವಹಿಸಿಕೊಂಡಿರುವ ಲಕ್ಷ್ಮಣ ಸವದಿ ಅವರಿಗೆ ಸ್ವಾತಂತ್ರ‍್ಯ ದಿನಾಚರಣೆಯ ಭಾಷಣ ಮಾಡಲು ಬೆಳಕಿನ ಸಮಸ್ಯೆಯಾಗಿದೆ. ಬರೆದುಕೊಂಡು ಬಂದಿದ್ದ ಭಾಷಣ ಓದಲಾಗದೇ ಸಮಸ್ಯೆ ಅನುಭವಿಸಿದ ಅವರು ಮೊಬೈಲ್ ಟಾರ್ಚ ಆನ್ ಮಾಡಿ ಅದನ್ನು ಓದಿದ್ದಾರೆ.

ADVERTISEMENT

ಕಾರವಾರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತವೂ ಅದ್ಧೂರಿಯಾಗಿ ಸ್ವಾತಂತ್ರ‍್ಯ ದಿನಾಚರಣೆಯ ಸಿದ್ಧತೆ ನಡೆಸಿತ್ತು. ಮೈದಾನದಲ್ಲಿನ ಅಲಂಕಾರಗಳು ಆಕರ್ಷಕವಾಗಿದ್ದವು. ಆದರೆ, ವೇದಿಕೆ ಮೇಲೆ ಸರಿಯಾದ ಬೆಳಕು ಮೂಡುತ್ತಿರಲಿಲ್ಲ. ಪರೇಡ್ ಪರಿವೀಕ್ಷಣೆ ಮಾಡಿದ ಬಳಿಕ ಸಚಿವ ಲಕ್ಷ್ಮಣ ಸವದಿ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತು ಶುರು ಮಾಡಿದ್ದು, ಅವರು ಮೊದಲೇ ಸಿದ್ಧಪಡಿಸಿಕೊಂಡು ಬಂದಿದ್ದ ಭಾಷಣ ಓದಲು ತಡವರಿಸಿದರು. ವೇದಿಕೆ ಮೇಲಿನ ಕತ್ತಲಿನಿಂದಾಗಿ ಅವರಿಗೆ ಅಕ್ಷರಗಳು ಸ್ಪಷ್ಟವಾಗಿ ಕಾಣಿಸಲಿಲ್ಲ. ಮಳೆಯ ಮುನ್ನೆಚ್ಚರಿಕಾ ಕ್ರಮವಾಗಿ ವೇದಿಕೆಗೆ ಸಂಪೂರ್ಣವಾಗಿ ಪೆಂಡಾಲ್ ಅಳವಡಿಸಿದ್ದರಿಂದ ವೇದಿಕೆ ಕತ್ತಲಾಗಿದ್ದು, `ತಕ್ಷಣ ಲೈಟ್ ವ್ಯವಸ್ಥೆ ಮಾಡಿ, ಏನೂ ಕಾಣಿಸುತ್ತಿಲ್ಲ’ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಬೆಳಕಿನ ವ್ಯವಸ್ಥೆ ಆಗಲು ತಡವಾದ ಕಾರಣ ತಕ್ಷಣ ತಮ್ಮ ಮೊಬೈಲ್ ಟಾರ್ಚ ಆನ್ ಮಾಡಿ, ಭಾಷಣ ಮುಂದುವರೆಸಿದರು.

ಅದಾದ ನಂತರ ಅಧಿಕಾರಿಗಳು ವೇದಿಕೆಯಲ್ಲಿದ್ದ ಪೋಡಿಯಂ’ನ್ನು ಧ್ವಜ ಸ್ತಂಭದ ಸಮೀಪ ಸರಿಸಿದರು. ಆಗ ಅಲ್ಲಿ ಬೆಳಕು ಮೂಡಿದ್ದು, ಸಚಿವರ ಮುಖ ಸಹ ಜನರಿಗೆ ಸ್ಪಷ್ಟವಾಗಿ ಕಾಣಿಸಿತು. ಅದಾದ ನಂತರ ಸಚಿವರು ಅಡೆತಡೆ ಇಲ್ಲದೇ ಭಾಷಣ ಓದಿ ಮುಗಿಸಿದರು. `ರಾಜ್ಯದಲ್ಲಿ ಆಡಳಿತ ವ್ಯವಸ್ಥೆಗೆ ವೇಗ ನೀಡುವ ಜತೆಗೆ ರೈತರು, ಯುವಜನರು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಿ ಮುಂದಿನ 100 ದಿನಗಳಲ್ಲಿ ಆಡಳಿತ ಮತ್ತು ಅಭಿವೃದ್ಧಿಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವ ಗುರಿ ಹೊಂದಲಾಗಿದೆ’ ಎಂದು ಅವರು ತಮ್ಮ ಭಾಷಣದಲ್ಲಿ ಹೇಳಿದರು. `ಸಾರ್ವಜನಿಕರ ಹಿತದೃಷ್ಟಿಯಿಂದ 100 ದಿನಗಳೊಳಗೆ 10 ಪ್ರಮುಖ ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸಲಾಗುವುದು. ರೈತ ಮಿತ್ರ, ಬಡವರ ಬಂಧು, ಗ್ರಾಮಾನುಭವ, ಯುವ ಯುಗ ಯುವ ಕರ್ನಾಟಕ ನಿರ್ಮಾಣ, ಭಾರತ್ ಜೋಡೋ ಯುವಕ ಸಂಘ ಮಿಷನ್, ಯುವ ಉದ್ಯೋಗ ಸೇತು, ಸರ್ಕಾರಿ ಆಸ್ಪತ್ರೆಗಳ ದತ್ತು ಯೋಜನೆ, ನಶೆ ಮುಕ್ತ ಕರ್ನಾಟಕ, ಪ್ರಜಾ ಸೇವೆ ಇಲಾಖೆ, ಭೂ ಗ್ಯಾರಂಟಿ, ಕರ್ನಾಟಕ ಮೊಬಿಲಿಟಿ ಗ್ರಿಡ್ ಮಿಷನ್ ಹಾಗೂ ತೇಗದ ಸಿರಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು’ ಎಂದು ತಿಳಿಸಿದರು.

`ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಯುವ ನೇಮಕಾತಿ ಪರೀಕ್ಷೆಗಳು ಪಾರದರ್ಶಕವಾಗಿ ನಡೆಯುವಂತೆ ಮತ್ತು ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಹಲವು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ’ ಎಂದರು. `ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಕೋಟ್ಯಂತರ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಸುಧಾರಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ 639.88 ಕೋಟಿ, ಅನ್ನಭಾಗ್ಯ ಯೋಜನೆಯಡಿ 298.89 ಕೋಟಿ, ಯುವನಿಧಿಯಡಿ 25.64 ಕೋಟಿ, ಗೃಹಲಕ್ಷ್ಮಿ ಯೋಜನೆಯಡಿ 1,811.84 ಕೋಟಿ ಹಾಗೂ ಗೃಹಜ್ಯೋತಿ ಯೋಜನೆಯಡಿ 641.45 ಕೋಟಿ ನೆರವು ನೀಡಲಾಗಿದೆ’ ಎಂದು ಹೇಳಿದರು.

`ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಮಳೆಯಲ್ಲಿ ಶೇ.16ರಷ್ಟು ಕೊರತೆ ದಾಖಲಾಗಿದೆ. ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದAತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕುಡಿಯುವ ನೀರು ಪೂರೈಕೆಗಾಗಿ 72 ಖಾಸಗಿ ಕೊಳವೆಬಾವಿಗಳನ್ನು ವ್ಯವಸ್ಥೆ ಮಾಡಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಕುಡಿಯುವ ನೀರಿನ ಉದ್ದೇಶಕ್ಕಾಗಿ 1 ಕೋಟಿ ಅನುದಾನ ನೀಡಲಾಗಿದೆ. ವಿಕೋಪ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿವೆ’ ಎಂದರು. `ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಶಿಕ್ಷಣ ನೀಡುವ 25 ಶಾಲೆಗಳನ್ನು ಗುರುತಿಸಲಾಗಿದೆ. ಸಿಎಸ್‌ಆರ್ ನಿಧಿಯಡಿ ಈ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಉದ್ಯಮಿಗಳು ಹಾಗೂ ಸಾರ್ವಜನಿಕರ ಸಹಯೋಗದಲ್ಲಿ ಶಾಲೆಗಳ ಸೌಲಭ್ಯಗಳನ್ನು ಸುಧಾರಿಸಲಾಗುವುದು ‘ಎಂದು ಹೇಳಿದರು.

`ಉದ್ಯೋಗ ಖಾತರಿ ಯೋಜನೆಯಡಿ 1.85 ಲಕ್ಷ ಮಾನವ ದಿನಗಳನ್ನು ಸೃಜಿಸಿ 10,072 ಕೂಲಿಕಾರರಿಗೆ ಕಾಮಗಾರಿ ನೀಡಲಾಗಿದೆ. ವಿ.ಬಿ.ಜಿ. ರಾಮ್‌ಜಿ ಯೋಜನೆಯಡಿ 9,000 ಮಾನವ ದಿನಗಳನ್ನು ಸೃಜಿಸಿ 1,089 ಕೂಲಿಕಾರರಿಗೆ ಕೆಲಸ ನೀಡಲಾಗಿದೆ. ಒಟ್ಟು 23.28 ಕೋಟಿ ವೆಚ್ಚ ಮಾಡಲಾಗಿದೆ. ಜಿಲ್ಲೆಯಲ್ಲಿ ಸುಮಾರು 12 ಸಾವಿರ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಬರ ತಡೆಗಟ್ಟುವಿಕೆ, ಪ್ರವಾಹ ನಿಯಂತ್ರಣ, ಭೂಕುಸಿತ ನಿಯಂತ್ರಣ, ಅರಣೀಕರಣ, ವೈಯಕ್ತಿಕ ಫಲಾನುಭವಿ ಆಧಾರಿತ ಹಾಗೂ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿದೆ’ ಎಂದರು. `ಜಿಲ್ಲೆಗೆ 300 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರಾಗಿದ್ದು, ಮೊದಲ ಹಂತದಲ್ಲಿ ಸರ್ಕಾರ 100 ಕೋಟಿ ಬಿಡುಗಡೆ ಮಾಡಿದೆ. ಆಸ್ಪತ್ರೆಯಲ್ಲಿ ಎಂಆರ್‌ಐ ಹಾಗೂ ಸಿಟಿ ಸ್ಕ್ಯಾನ್ ಯಂತ್ರಗಳನ್ನು ಅಳವಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿವೆ. ಲಿನಾಕ್ ಬಂಕರ್ ಕಾಮಗಾರಿ ಪ್ರಗತಿಯಲ್ಲಿದ್ದು, ರೇಡಿಯಾಲಜಿ ಯಂತ್ರದ ಅಳವಡಿಕೆ ಬಾಕಿಯಿದೆ. ಮುಂದಿನ ದಿನಗಳಲ್ಲಿ ಕ್ಯಾನ್ಸರ್ ಕೇರ್ ಘಟಕವನ್ನು ಸ್ಥಾಪಿಸಲಾಗುವುದು’ ಎಂದು ಸಚಿವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆಎಸ್‌ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್, ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷಮಾ ಗೋಡಬೋಲೆ, ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. ಪೊಲೀಸ್, ಅರಣ್ಯ, ಗೃಹರಕ್ಷಕ ದಳ ಹಾಗೂ ವಿವಿಧ ಶಾಲಾ–ಕಾಲೇಜುಗಳ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಉತ್ತಮ ಸೇವೆ ಸಲ್ಲಿಸಿದ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ, ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ, ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯ ವಿಜೇತರಿಗೆ ಬಹುಮಾನ ಹಾಗೂ ಭಾರತ್ ಜೋಡೋ ಯುವ ಮಿಷನ್ ಸದಸ್ಯತ್ವ ಕಾರ್ಡ್ ವಿತರಿಸಲಾಯಿತು.

ಅರಣ್ಯ ಇಲಾಖೆಯಿಂದ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳ ನಕ್ಷೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಡೈರೆಕ್ಟರಿಯನ್ನು ಬಿಡುಗಡೆ ಮಾಡಲಾಯಿತು. ಬಾಲಮಂದಿರ ಪ್ರೌಢಶಾಲೆ ಮತ್ತು ಸೆಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ದೇಶಭಕ್ತಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Dandeli Tree felling by mobile phone light!

ದಾಂಡೇಲಿ | ಮೊಬೈಲ್ ಬೆಳಕಿನಲ್ಲಿ ಮರ ಕಟಾವು!

August 15, 2026

ಕುಮಟಾ | ಮೇಲಧಿಕಾರಿಗೆ ಹೊಡೆದ ನೌಕರ!

August 15, 2026
Sirsi Auto-rickshaw driver in hiding for 46 years!

ಶಿರಸಿ | 46 ವರ್ಷ ಅಡಗಿದ್ದ ಆಟೋ ಚಾಲಕ!

August 15, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!