ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕೆಲಸ ಅತ್ಯಂತ ಚುರುಕಾಗಿ ನಡೆದಿದ್ದು, ವಿವಿಧ ಕಾರಣಗಳಿಂದ 65,330 ಮಂದಿಗೆ ನೋಟಿಸ್ ನೀಡಲು ನಿರ್ಧರಿಸಲಾಗಿದೆ. `ನೋಟಿಸ್ ಸ್ವೀಕರಿಸಿದ ಪ್ರತಿಯೊಬ್ಬರು ಖುದ್ಧು ವಿಚಾರಣೆಗೆ ಹಾಜರಾಗಬೇಕು’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಸೂಚಿಸಿದ್ದಾರೆ.
ಸೋಮವಾರ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ರಾಜಕೀಯ ಪಕ್ಷಗಳೊಂದಿಗೆ ಸಭೆ ನಡೆಸಿದ ಡೀಸಿ `ಮ್ಯಾಪಿಂಗ್ ಆಗದಿರುವ ಮತದಾರರು ಮತ್ತು ಮ್ಯಾಪಿಂಗ್‌ನಲ್ಲಿ ತಾರ್ಕಿಕ ವ್ಯತ್ಯಾಸ ಹೊಂದಿರುವ ಮತದಾರರಿಗೆ ಹಾಗೂ ಅಗತ್ಯವಿರುವ ಇತರ ಪ್ರಕರಣಗಳಿಗೆ ಸಂಬoಧಿಸಿದoತೆ ನೋಟಿಸ್ ಸ್ವೀಕರಿಸುವ ಮತದಾರರ ವಿಚಾರಣೆಗೆ ಖುದ್ದಾಗಿ ಹಾಜರಾಗುವುದು ಕಡ್ಡಾಯ’ ಎಂದು ತಿಳಿಸಿದರು. `ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು ಮತದಾರರ ಸಂಖ್ಯೆ 12,30,037ರಲ್ಲಿ 11,23,022 ಮಂದಿಯ ಮ್ಯಾಪಿಂಗ್ ಮುಗಿದಿದ್ದು, ಸ್ಥಳಾಂತರ, ವಲಸೆ, ಮರಣ, ದ್ವಿಪ್ರತಿಯ ಮತ್ತು ಇತರೆ ಪ್ರಕರಣಗಳಿಗೆ ಸಂಬoಧಿಸಿದoತೆ 1,07,015 ಮಂದಿಯನ್ನು ಗುರುತಿಸಲಾಗಿದೆ. ಅದರಲ್ಲಿ 65,330 ಮಂದಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಬೇಕಾಗಿದೆ. ಈ ಕುರಿತು ಸಂಬoಧಪಟ್ಟ ಮತದಾರರು ಖುದ್ದು ಹಾಜರಾಗುವ ಬಗ್ಗೆ ಬಿ.ಎಲ್.ಓ ಗಳ ಮೂಲಕ ನೋಟಿಸ್ ನೀಡಲಾಗುತ್ತದೆ’ ಎಂದವರು ವಿವರಿಸಿದರು.
`ನೋಟಿಸ್ ತಲುಪಿದ ಮತದಾರರು ಖುದ್ದಾಗಿ ವಿಚಾರಣಾ ದಿನಾಂಕದAದು ನೋಟಿಸಲ್ಲಿ ನಮೂದಿಸಲಾದ ದಿನಾಂಕ/ಸ್ಥಳದಲ್ಲಿ ಸಮಯಕ್ಕೆ ವಿಚಾರಣೆಗೆ ಹಾಜರಾಗಿ ಸಂಬoಧಪಟ್ಟ ದಾಖಲೆಗಳನ್ನು ಸಲ್ಲಿಸಬೇಕಾಗಿರುತ್ತದೆ. ವಿಚಾರಣೆಗೆ ಹಾಜರಾಗದ ಮತದಾರರಿಗೆ ಪುನ: ಇನ್ನೊಂದು ದಿನಾಂಕ ನಿಗಧಿಪಡಿಸಿ ದಾಖಲೆಗಳೊಂದಿಗೆ ಹಾಜರಾಗಲು ಅವಕಾಶ ನೀಡಲಾಗುತ್ತದೆ. ಗರಿಷ್ಠ 2 ವಿಚಾರಣಾ ದಿನಾಂಕಗಳನ್ನು ನೀಡಲು ಮಾತ್ರ ಅವಕಾಶವಿದೆ’ ಎಂದವರು ಮಾಹಿತಿ ನೀಡಿದರು. `ಸೆಪ್ಟಂಬರ್ 23ರವರೆಗಿನ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸುವ ಅವಧಿಯಲ್ಲಿ ದಿನಾಂಕ 1-10-2026ಕ್ಕೆ 18 ವಷÀð ಪೂರ್ಣಗೊಳಿಸುವ ಅರ್ಹ ನಾಗರೀಕರು ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರ್ಪಡೆಗೊಳಿಸಲು ಅವಕಾಶವಿದ್ದು, ನಮೂನೆ-6 ರೊಂದಿಗೆ ನಿಗದಿತ ದಾಖಲೆಗಳೊಂದಿಗೆ ಡಿಕ್ಲೇರೇಷನ್ ಫಾರಂ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ಅದೇ ರೀತಿಯಲ್ಲಿ ಹೆಸರನ್ನು ಕಡಿಮೆಗೊಳಿಸಲು ನಮೂನೆ-7 ಹಾಗೂ ವಿವಿಧ ತಿದ್ದುಪಡಿ ಹಾಗೂ ಹೆಸರನ್ನು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯೊಳಗೆ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ಅಥವಾ ಒಂದು ವಿಧಾನಸಭಾ ಕ್ಷೇತ್ರದಿಂದ ಇನ್ನೊಂದು ವಿಧಾನಸಭಾ ಕ್ಷೇತ್ರಕ್ಕೆ ಬದಲಾಯಿಸಲು ಸಹ ಅವಕಾಶ ಇರುತ್ತದೆ’ ಎಂದರು.
`ಜಿಲ್ಲೆಯಲ್ಲಿ ಇಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಪಟ್ಟಿಯಲ್ಲಿ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 5,62,004 ಪುರುಷರು ಮತ್ತು 5,61,014 ಹಾಗೂ 4 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 11,23,022 ಮತದಾರರಿದ್ದಾರೆ. ಮತಗಟ್ಟೆಗಳ ಪುರ್ನವಿಂಗಡಣೆ ಕಾರ್ಯದ ನಂತರ 78 ಹೊಸ ಮತಗಟ್ಟೆಗಳನ್ನು ತೆರೆಯಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಮತಗಟ್ಟೆಗಳ ಸಂಖ್ಯೆ 1,523 ಆಗಿದೆ’ ಎಂದರು. `ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸುವ ಅವಧಿಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಜಾಗರೂಕತೆಯಿಂದ ಪರಿಶೀಲನೆ ಮಾಡಿ, ಯಾವುದೇ ಅರ್ಹ ಮತದಾರರು, ಮತದಾರರ ಪಟ್ಟಿಯಿಂದ ವಂಚಿತರಾಗದAತೆೆ ಎಚ್ಚರಿಕೆ ವಹಿಸಲಾಗುವುದು ಮತ್ತು ಈ ಕುರಿತ ಪ್ರತೀ ವಾರದ ವರದಿಯ ವಿವರಗಳನ್ನು ಎಲ್ಲಾ ರಾಜಕೀಯ ಪಕ್ಷಗಳಿಗೂ ನೀಡಲಾಗುವುದು. ಅಕ್ಟೋಬರ್ 22ರವರೆಗೆ ಎಲ್ಲಾ ಹಕ್ಕು ಮತ್ತು ಆಕ್ಷೇಪಣೆಗಳನ್ನು ವಿಲೇವಾರಿ ಮಾಡಿ, ಅಕ್ಟೋಬರ್ 27 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು’ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷ ಅರವಿಂದ್ ಕಲ್ಗುಟಕರ್, ರಮೇಶ್ ಮುದಗೇಕರ್, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಸೂರಜ್ ನಾಯ್ಕ್ ಸೋನಿ, ವಕ್ತಾರ ಉದಯ ಭೋವಿ, ಕೃಷ್ಣ ಲಿಂಗಣಕರ್, ಜ್ಞಾನೇಶ್ವರ, ಬಿಜೆಪಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸಂಜಯ ಸಾಳೂಂಕೆ ಉಪಸ್ಥಿತರಿದ್ದರು