ಮುoಡಗೋಡು-ಯಲ್ಲಾಪುರ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್ಸುಗಳ ನಡುವೆ ಬುಧವಾರ ರಾತ್ರಿ ನಡೆದ ಅಪಘಾತದಲ್ಲಿ 24 ಪ್ರಯಾಣಿಕರಿಗೆ ಗಾಯವಾಗಿದೆ. ಬಸ್ಸಿನ ಚಾಲಕ ದ್ಯಾಮನಗೌಡ ಬೀರಾದರ್ ಅವರು ಅಪಘಾತದಲ್ಲಿ ಜರ್ಜರಿತರಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಯಲ್ಲಾಪುರ-ಮುಂಡಗೋಡು ಮಾರ್ಗದ ಶಿಡ್ಲಗುಂಡಿ ಸಮೀಪ ಈ ದುರಂತ ನಡೆದಿದೆ. ಎರಡು ಕೆಎಸ್‌ಆರ್‌ಟಿಸಿ ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಬಸ್ ಮುಂದಿನ ಭಾಗ ಸಂಪೂರ್ಣವಾಗಿ ಜಖಂ ಆಗಿದೆ. ಬೆಂಗಳೂರಿನಿAದ ಮುಂಡಗೋಡು ಮಾರ್ಗವಾಗಿ ಯಲ್ಲಾಪುರಕ್ಕೆ ಬರುತ್ತಿದ್ದ ಬಸ್ಸು ಹಾಗೂ ಯಲ್ಲಾಪುರದಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಮತ್ತೊಂದು ಬಸ್ಸು ಪರಸ್ಪರ ಗುದ್ದಿಗೊಂಡಿದೆ. ಎರಡು ಬಸ್ಸಿನ ವೇಗ ಎಂದಿಗಿAತ ಜಾಸ್ತಿಯೇ ಇದ್ದ ಪರಿಣಾಮ ಗಾಯಗೊಂಡವರ ಸಂಖ್ಯೆಯೂ ಹೆಚ್ಚಾಗಿದೆ.
ಈ ಅಪಘಾತದಲ್ಲಿ ಯಲ್ಲಾಪುರದ ಕಡೆ ಬರುತ್ತಿದ್ದ ಬಸ್ಸಿನ ಚಾಲಕ ಬಸ್ಸಿನ ಒಳಗೆ ಸಿಕ್ಕಿಬಿದ್ದಿದ್ದು, ಸ್ಥಳೀಯರು ಚಾಲಕನನ್ನು ಹೊರಗೆ ತರಲು ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ಅದು ಸಾಧ್ಯವಾಗದೇ ಇದ್ದಾಗ ಯಂತ್ರೋಪಕರಣಗಳ ನೆರವುಪಡೆದು ಚಾಲಕನನ್ನು ಬಸ್ಸಿನಿಂದ ಹೊರಗೆ ತರಲಾಗಿದೆ. ತೀವೃ ಪ್ರಮಾಣದಲ್ಲಿ ಅಸ್ವಸ್ಥರಾಗಿದ್ದ ಚಾಲಕ ದ್ಯಾಮನಗೌಡ ಬೀರಾದರ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಎರಡೂ ಬಸ್ಸಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಯಲ್ಲಾಪುರ ಹಾಗೂ ಮುಂಡಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲ್ಲಾಪುರ ಆಸ್ಪತ್ರೆಗೆ 16 ಜನ ಹಾಗೂ ಮುಂಡಗೋಡು ಆಸ್ಪತ್ರೆಗೆ 6 ಜನರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದವರನ್ನು ಹುಬ್ಬಳ್ಳಿಗೆ ಕರೆದೊಯ್ಯಲಾಗಿದೆ. ಯಲ್ಲಾಪುರದಿಂದ ಮೂವರು ಹಾಗೂ ಮುಂಡಗೋಡಿನಿAದ ಮೂವರನ್ನು ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲ್ಲಾಪುರ ಹಾಗೂ ಮುಂಡಗೋಡಿನ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ರಸ್ತೆ ಸಂಚಾರ ಸುಗಮಗೊಳಿಸಿದ್ದಾರೆ. ಶಾಸಕ ಶಿವರಾಮ ಹೆಬ್ಬಾರ್, ಜಿ ಪಂ ಮಾಜಿ ಸದಸ್ಯ ವಿಜಯ ಮಿರಾಶಿ ಸೇರಿ ಅನೇಕರು ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ್ದಾರೆ.