• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

15 ವರ್ಷವಾದರೂ ಸಿಗದ ಜಾತಿ ಪತ್ರ: ಜಿಲ್ಲಾಡಳಿತಕ್ಕೆ ನೋಟಿಸ್ ನೀಡಿದ ಹೈಕೋರ್ಟ!

15 ವರ್ಷವಾದರೂ ಸಿಗದ ಜಾತಿ ಪತ್ರ: ಜಿಲ್ಲಾಡಳಿತಕ್ಕೆ ನೋಟಿಸ್ ನೀಡಿದ ಹೈಕೋರ್ಟ!

October 15, 2026
Yellapura Sugarcane Growers' Protest Highway Blockade

ಯಲ್ಲಾಪುರ | ಕಬ್ಬು ಬೆಳೆಗಾರರ ಪ್ರತಿಭಟನೆ: ಹೆದ್ದಾರಿ ತಡೆ

October 15, 2026
ಈಜಲು ಹೋದವ ನೀರುಪಾಲಾದ!

ಶಿರಸಿ | ನಾದಿನಿ ಕಾಟಕ್ಕೆ ವಿಷ ಕುಡಿದ ಸೊಸೆ!

ADVERTISEMENT
  • Home
  • Janamata
Friday, October 16, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಾರವಾರ | ಸೇವೆಗೆ ಸಿದ್ಧಗೊಂಡ ಸ್ವದೇಶಿ ನೌಕೆ: ನೌಕಾನೆಲೆಗೆ ಶಕ್ತಿ ತುಂಬಿದ ಸಮರ್ಥಕ್!

Mobiletime.in by Mobiletime.in
Karwar Indigenous vessel ready for service 'Samarthak' bolsters the naval base!
Share on FacebookShare on WhatsappShare on Twitter
ADVERTISEMENT
ADVERTISEMENT

ಭಾರತೀಯ ನೌಕಾಪಡೆ ನಿರ್ಮಿಸಿದ ಸ್ವದೇಶಿ ಯುದ್ಧನೌಕೆ INS ಸಮರ್ಥಕ್ ಅಧಿಕೃತ ಸೇವೆ ಶುರು ಮಾಡಲು ಸಿದ್ಧವಾಗಿದೆ. ಮೇಕ್ ಇನ್ ಇಂಡಿಯಾ ಕಾರ್ಯಕ್ರಮದ ಅಡಿ ನಿರ್ಮಿಸಲಾದ ಈ ನೌಕೆ ಅಕ್ಟೊಬರ್ 16ರಿಂದ ಕಾರ್ಯಾಚರಣೆ ನಡೆಸಲಿದೆ. ಕಾರವಾರಕ್ಕೆ ಆಗಮಿಸಲಿರುವ ಉಪರಾಷ್ಟಪತಿ ಚಂದ್ರಪುರo ಪೊನ್ನುಸ್ವಾಮಿ ರಾಧಾಕೃಷ್ಣನ್ ಅವರು ದೇಶ ಸೇವೆಗೆ ಈ ನೌಕೆಯನ್ನು ನಿಯೋಜಿಸಲಿದ್ದಾರೆ.

ತಮಿಳುನಾಡಿನ ಕಟ್ಟುಪಳ್ಳಿಯಲ್ಲಿರುವ ಲಾರ್ಸನ್ ಅಂಡ್ ಟೂಬ್ರೊ (ಎಲ್ ಅಂಡ್ ಟಿ) ಸಂಸ್ಥೆಯು ಈ ಯುದ್ಧನೌಕೆಯನ್ನು ನಿರ್ಮಿಸಿದೆ. ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳ್ಳಲಿರುವ ನಾಲ್ಕು ಬಹು ಉದ್ದೇಶದ ನೌಕೆಗಳ ಪೈಕಿ ಐಎನ್‌ಎಸ್ ಸಮರ್ಥಕ್ ಮೊದಲನೆಯದಾಗಿದೆ. ಇದರ ಸೇರ್ಪಡೆಯು ದೇಶದ ರಕ್ಷಣಾ ಸ್ವಾವಲಂಬನೆಯ ಪ್ರಯತ್ನದಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ. ಸಮುದ್ರ ಕಣ್ಗಾವಲು ಮತ್ತು ಗಸ್ತು ಕಾರ್ಯಾಚರಣೆಗಳಿಗಾಗಿ ಪ್ರಮುಖವಾಗಿ ವಿನ್ಯಾಸಗೊಳಿಸಲಾದ ಐಎನ್‌ಎಸ್ ಸಮರ್ಥಕ್ ನೌಕೆಯೂ ಕಡಿಮೆ ತೀವ್ರತೆಯ ಸಮುದ್ರ ಕಾರ್ಯಾಚರಣೆಗಳು, ಗುರಿ ನಿಯೋಜನೆ, ವಿವಿಧ ವ್ಯವಸ್ಥೆಗಳ ಪರೀಕ್ಷೆ ಹಾಗೂ ಮಾನವರಹಿತ ಮತ್ತು ಸ್ವಾಯತ್ತ ವ್ಯವಸ್ಥೆಗಳಿಗೆ ತಾಯಿ ನೌಕೆಯಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ ಮಾನವೀಯ ನೆರವು, ವಿಪತ್ತು ಪರಿಹಾರ, ರಕ್ಷಣಾ ಕಾರ್ಯಾಚರಣೆ, ಮುಳುಗಿದ ವಸ್ತುಗಳ ಪತ್ತೆ ಮತ್ತು ರಕ್ಷಣಾ ಕಾರ್ಯಗಳು ಹಾಗೂ ಆಸ್ಪತ್ರೆ ನೌಕೆಯಾಗಿ ಸೇವೆ ಸಲ್ಲಿಸುವ ಸಾಮರ್ಥ್ಯವೂ ಇದೆ. ಸವಾಲಿನ ಸಮುದ್ರ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಸ್ವದೇಶಿ ಸಂವೇದಕಗಳು, ಶಸ್ತ್ರಾಸ್ತ್ರಗಳು ಮತ್ತು ಎಲೆಕ್ಟ್ರಾನಿಕ್ ವ್ಯವಸ್ಥೆಗಳನ್ನು ಈ ನೌಕೆಯಲ್ಲಿ ಅಳವಡಿಸಲಾಗಿದೆ.

100 ಮೀಟರ್‌ಗಿಂತಲೂ ಹೆಚ್ಚು ಉದ್ದವಿರುವ ಈ ನೌಕೆಯು ಸುಮಾರು 5,000 ಟನ್ ತೂಕವನ್ನು ಹೊಂದಿದೆ. 7,200 ನಾಟಿಕಲ್ ಮೈಲುಗಳಿಗಿಂತಲೂ ಅಧಿಕ ದೂರ ಕ್ರಮಿಸುವ ಸಾಮರ್ಥ್ಯ ಹೊಂದಿರುವ ಇದು, ಭಾರತೀಯ ನೌಕಾಪಡೆಯ ಕಾರ್ಯಾಚರಣಾ ಸಾಮರ್ಥ್ಯವನ್ನು ಹೆಚ್ಚಿಸಲಿದೆ. ಬಹು ಉದ್ದೇಶದ ಮತ್ತು ವೆಚ್ಚದ ದೃಷ್ಟಿಯಿಂದ ಪರಿಣಾಮಕಾರಿಯಾದ ಈ ನೌಕೆಯ ಸೇರ್ಪಡೆಯಿಂದ ವಿಧ್ವಂಸಕ ನೌಕೆಗಳು, ಯುದ್ಧನೌಕೆಗಳು ಹಾಗೂ ವಿಮಾನವಾಹಕ ನೌಕೆಗಳಂತಹ ಪ್ರಮುಖ ಸಮರ ನೌಕೆಗಳನ್ನು ಅವುಗಳ ಮುಖ್ಯ ಕಾರ್ಯಾಚರಣೆಗಳಿಗೆ ಬಳಸಲು ಹೆಚ್ಚಿನ ಅವಕಾಶ ದೊರೆಯಲಿದೆ. ಗುರಿ ನಿಯೋಜನೆ, ಸಿಬ್ಬಂದಿ ತರಬೇತಿ, ಸಮುದ್ರ ಕಣ್ಗಾವಲು ಮತ್ತು ಸರಕು ಸಾಗಣೆ ಹಾಗೂ ಅಗತ್ಯ ನೆರವು ಒದಗಿಸುವ ಕಾರ್ಯಗಳಲ್ಲಿಯೂ ಐಎನ್‌ಎಸ್ ಸಮರ್ಥಕ್ ಪ್ರಮುಖ ಪಾತ್ರವಹಿಸಲಿದೆ.

ಐಎನ್‌ಎಸ್ ಸಮರ್ಥಕ್‌ನ ಲಾಂಛನದಲ್ಲಿ ಆಕ್ರಮಣಕಾರಿ ಭಂಗಿಯಲ್ಲಿರುವ ಭಾರತೀಯ ಆನೆಯ ಚಿತ್ರವಿದ್ದು, ಇದು ಶಕ್ತಿ-ಬುದ್ಧಿವಂತಿಕೆ ಮತ್ತು ಧೈರ್ಯವನ್ನು ಪ್ರತಿನಿಧಿಸುತ್ತದೆ. ಈ ನೌಕೆಯ ಸಿಬ್ಬಂದಿಯನ್ನು `ಪ್ರಚಂಡ ಪುಂಡರೀಕರು’ ಎಂದು ಕರೆಯಲಾಗುತ್ತದೆ. ಪುರಾಣಗಳಲ್ಲಿ ಉಲ್ಲೇಖವಾಗಿರುವ ಅಷ್ಟ್ಟದಿಗ್ಗಜಗಳಲ್ಲಿ ಪುಂಡರೀಕನೂ ಒಬ್ಬನಾಗಿದ್ದು, ದಕ್ಷಿಣ-ಪೂರ್ವ ದಿಕ್ಕಿನ ರಕ್ಷಕನೆಂದು ಪರಿಗಣಿಸಲಾಗಿದೆ. ಯಾವುದೇ ಕಾರ್ಯವನ್ನು ಯಾವುದೇ ಸಮಯದಲ್ಲಿ ನಿರ್ವಹಿಸಲು ಸಿದ್ಧವಾಗಿರುವುದು ಮತ್ತು ತುರ್ತು ಸಂದರ್ಭಗಳಲ್ಲಿ ಮೊದಲು ಸ್ಪಂದಿಸುವ ಸಾಮರ್ಥ್ಯವನ್ನು ಹೊಂದಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

15 ವರ್ಷವಾದರೂ ಸಿಗದ ಜಾತಿ ಪತ್ರ: ಜಿಲ್ಲಾಡಳಿತಕ್ಕೆ ನೋಟಿಸ್ ನೀಡಿದ ಹೈಕೋರ್ಟ!

15 ವರ್ಷವಾದರೂ ಸಿಗದ ಜಾತಿ ಪತ್ರ: ಜಿಲ್ಲಾಡಳಿತಕ್ಕೆ ನೋಟಿಸ್ ನೀಡಿದ ಹೈಕೋರ್ಟ!

October 15, 2026
Yellapura Sugarcane Growers' Protest Highway Blockade

ಯಲ್ಲಾಪುರ | ಕಬ್ಬು ಬೆಳೆಗಾರರ ಪ್ರತಿಭಟನೆ: ಹೆದ್ದಾರಿ ತಡೆ

October 15, 2026
ಈಜಲು ಹೋದವ ನೀರುಪಾಲಾದ!

ಶಿರಸಿ | ನಾದಿನಿ ಕಾಟಕ್ಕೆ ವಿಷ ಕುಡಿದ ಸೊಸೆ!

October 15, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383