ಮಹಿಳೆಯರಿಗಾಗಿ ಮನೆ ಅಂಗಳದಲ್ಲಿಯೇ ಹಣ್ಣು ಹಾಗೂ ತರಕಾರಿ ಬೆಳೆಯುವ ಬಗ್ಗೆ ಶಿರಸಿಯ ಶ್ರೀ ಭೂತೇಶ್ವರ ಪತ್ತಿನ ಸಹಕಾರಿ ಸಂಘ ನಿಯಮಿತವೂ ಕಾರ್ಯಾಗಾರ ನಡೆಸುತ್ತಿದೆ. ಶಿರಸಿ ತೋಟಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಈ ಶಿಬಿರ ನಡೆಯಲಿದೆ.
ಶ್ರೀ ಭೂತೇಶ್ವರ ಪತ್ತಿನ ಸಹಕಾರಿ ಸಂಘ ನಿಯಮಿತದ ರಜತ ಮಹೋತ್ಸವದ ಹಿನ್ನಲೆ ಡಿಸೆಂಬರ್ 6ರಂದು ಮಧ್ಯಾಹ್ನ 3 ಗಂಟೆಗೆ ಈ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಯಲ್ಲಾಪುರ ರಸ್ತೆಯಲ್ಲಿರುವ ಆದರ್ಶ ವನಿತಾ ಸಮಾಜದಲ್ಲಿ ಈ ಕಾರ್ಯಾಗಾರ ನಡೆಯಲಿದೆ. ಸೋಂದಾ ಸ್ವರ್ಣವಲ್ಲಿ ಮಠದ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಹಾಗೂ ನಿವೃತ್ತ ಕೃಷಿ ವಿಜ್ಞಾನಿ ಸತೀಶ ಹೆಗಡೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಶ್ರೀಧರ ಹಿರಿಯಾ ಮೋಗೇರ ಅಧ್ಯಕ್ಷತೆವಹಿಸಲಿದ್ದಾರೆ. ಹಿರಿಯ ತೋಟಗಾರಿಕಾ ಸಹಾಯಕ ನಿರ್ದೇಶಕ ಸತೀಶ ಹೆಗಡೆ, ತೋಟಗಾರಿಕಾ ಅಧಿಕಾರಿ ಗಣೇಶ ಹೆಗಡೆ ಹಾಗೂ ಕೃಷಿ ವಿಜ್ಞಾನಿ ಸುಜಯ ಭಟ್ಟ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಘದ ಆಂತರಿಕ ಸಲಹೆಗಾರ ಪ್ರಕಾಶ ಮದ್ಗುಣಿ ಅತಿಥಿಗಳಾಗಿ ಕಾರ್ಯಕ್ರಮದಲ್ಲಿರಲಿದ್ದಾರೆ.
ಈ ತರಬೇತಿ ಶಿಬಿರವು ಸಂಪೂರ್ಣ ಉಚಿತವಾಗಿದ್ದು, ಭಾಗವಹಿಸುವ ಶಿಬಿರಾರ್ಥಿಗಳಿಗೆ ಉಚಿತವಾಗಿ ಸೀಡ್ ಕಿಟ್ (ಬೀಜದ ಪೊಟ್ಟಣ) ಹಾಗೂ ಗೊಬ್ಬರವನ್ನು ವಿತರಿಸಲಾಗುತ್ತದೆ. ಆಸಕ್ತ ಮಹಿಳೆಯರು ಡಿ. 2ರ ಒಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿ ಹಾಗೂ ಹೆಸರು ನೋಂದಣಿಗಾಗಿ ಉಷಾ ಭಟ್ಟ (ಮೊ: 8277349882 / 9742782285) ಅವರನ್ನು ಸಂಪರ್ಕಿಸುವAತೆ ಶ್ರೀ ಭೂತೇಶ್ವರ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಭಾಸ್ಕರ ಶೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಾಹಕ ವಿನಾಯಕ ಶೆಟ್ಟಿ ಅವರು ತಿಳಿಸಿದ್ದಾರೆ.