ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!
January 3, 2026
ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!
January 3, 2026
ರಂಜಿತಾ ಕೊಂದ ರಫೀಕ್ ಇನ್ನಿಲ್ಲ!
January 4, 2026
ಕಾರವಾರ ನಗರದಲ್ಲಿರುವ ರಾಧಾಕೃಷ್ಣ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ಮಂಗಳವಾರ ದೇವಾಲಯಕ್ಕೆ ನುಗ್ಗಿದ ಕಳ್ಳರು ಅಲ್ಲಿದ್ದ ಆಭರಣಗಳನ್ನು ದೋಚಿದ್ದಾರೆ.
ದೇವಸ್ಥಾನದ ಮೇಲ್ಚಾವಣಿಯನ್ನು ತೆಗೆದು ಕಳ್ಳರು ಒಳಗೆ ನುಗ್ಗಿದ್ದಾರೆ. ದೇವರ ಅಲಂಕಾರಕ್ಕೆ ಬಳಸುತ್ತಿದ್ದ ಬೆಳ್ಳಿ ಆಭರಣಗಳನ್ನು ಅವರು ತಮ್ಮದಾಗಿಸಿಕೊಂಡಿದ್ದಾರೆ. ಪೂಜೆಗಾಗಿ ದೇವಸ್ಥಾನ ಬಾಗಿಲು ತೆರೆದಾಗ ಮೇಲ್ಚಾವಣಿ ಒಡೆದಿರುವುದು ಕಾಣಿಸಿದೆ. ನಂತರ ಕಳ್ಳತನವೂ ಗಮನಕ್ಕೆ ಬಂದಿದೆ.
ದೇವಾಲಯದ ಒಳಭಾಗದಲ್ಲಿನ ವಸ್ತುಗಳು ಚದುರಿ ಬಿದ್ದಿದ್ದು, ಭಕ್ತರು ಹಾಗೂ ದೇವಾಲಯ ಆಡಳಿತ ಮಂಡಳಿಯವರು ಅದರಿಂದ ಆತಂಕಕ್ಕೆ ಒಳಗದರು. ಕಾರವಾರ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸಮೀಪದ ಸಿಸಿ ಟಿವಿ ಕ್ಯಾಮರಾ ಆಧಾರದಲ್ಲಿ ಕಳ್ಳರನ್ನು ಪತ್ತೆ ಮಾಡುವ ಕೆಲಸವೂ ನಡೆಯುತ್ತಿದೆ.

This will close in 6 seconds
You cannot copy content of this page