ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!
January 3, 2026
ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!
January 3, 2026
ರಂಜಿತಾ ಕೊಂದ ರಫೀಕ್ ಇನ್ನಿಲ್ಲ!
January 4, 2026
ಕುಮಟಾದ ಹೊಲನಗದ್ದೆ ಗ್ರಾಮ ಪಂಚಾಯತ ವ್ಯಾಪ್ತಿಯ ಮದ್ಗುಣಿ ಸರ್ಕಾರಿ ಅಂಗನವಾಡಿಗೆ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಕಲಿಕಾ ಸಾಮಗ್ರಿ ವಿತರಿಸಿದ್ದಾರೆ.
ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಜನ ಸಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಅಂಗನವಾಡಿಗೆ ಭೇಟಿ ನೀಡಿದರು. ಈ ವೇಳೆ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್ ಹಾಗೂ ಸುಧಾಕರ್ ನಾಯ್ಕ ಮಕ್ಕಳಿಗೆ ಅಗತ್ಯ ಸಾಮಗ್ರಿ ವಿತರಿಸಿದರು. `ಈಚೆಗೆ ಮಕ್ಕಳು ಆಂಗ್ಲ ಮಾಧ್ಯಮ ಶಾಲೆಗೆ ಮಕ್ಕಳನ್ನು ಕಳುಹಿಸುತ್ತಿದ್ದಾರೆ. ಮುಂದಿನ ವರ್ಷದಿಂದ ಸರ್ಕಾರವೇ ಎಲ್‌ಕೆಜಿ ಹಾಗೂ ಯುಕೆಜಿ ಹಂತದಲ್ಲಿ ಆಂಗ್ಲ ಶಿಕ್ಷಣ ನೀಡುತ್ತಿದ್ದು, ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಬೇಕು’ ಎಂದು ಮನವಿ ಮಾಡಿದರು.
`ಸರಕಾರದ ಸರಕಾರಿ ಶಾಲೆಗಳು ಮಕ್ಕಳ ಸಂಖ್ಯೆ ಕಡಿಮೆ ಆಗುತ್ತಿದ್ದು, ಅದನ್ನು ಉಳಿಸಿ ಬೆಳೆಸುವ ಹೊಣೆ ನಮ್ಮೆಲ್ಲರ ಮೇಲಿದೆ’ ಎಂದರು. ಈ ಸಂದರ್ಭದಲ್ಲಿ ಶಿಕ್ಷಕಿ ಶಶಿಕಲಾ ಪಟಗಾರ ಹಾಗೂ ಸಹಾಯಕಿ ತೇಜಾ ಪಟಗಾರ ಇದ್ದರು.
You cannot copy content of this page