ಹೆಸರನಲ್ಲಿಯೇ `ಕನ್ನಡ’ ಪದಹೊಂದಿದ `ಉತ್ತರ ಕನ್ನಡ’ ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವ ಅದ್ಧೂರಿಯಾಗಿ ನಡೆದಿದೆ. ಕಲೆ, ಸಂಸ್ಕೃತಿಯ ಪ್ರತಿರೂಪ ಆಹ್ವಾದಿಸಿದ ಜನಪ್ರತಿನಿಧಿಗಳು ಭವಿಷ್ಯದ ಅಭಿವೃದ್ಧಿಯ ಕನಸುಗಳನ್ನು ಬಿಚ್ಚಿಟ್ಟಿದ್ದಾರೆ.
`ಕನ್ನಡ ಭಾಷೆಗೆ ಶಾಸ್ತಿಯ ಭಾಷಾ ಸ್ಥಾನಮಾನ ಸಿಕ್ಕಿರುವುದು ಹೆಮ್ಮೆಯ ವಿಷಯ’ ಎಂದು ಸಚಿವ ಮಂಕಾಳು ವೈದ್ಯ ಅವರು ಕಾರವಾರದಲ್ಲಿ ಸಂತಸವ್ಯಕ್ತಪಡಿಸಿದ್ದಾರೆ. `ಕನ್ನಡ ಭಾಷೆಯು 2000 ವರ್ಷಗಳ ಇತಿಹಾಸ ಹೊಂದಿದ್ದು, ಅಂದಿನಿoದಲೂ ಉಳಿದು ಅತ್ಯಂತ ಎತ್ತರಕ್ಕೆ ಬೆಳೆದಿದೆ. ಕನ್ನಡ ಭಾಷೆಗೆ ಇದುವರೆಗೆ 8 ಬಾರಿ ಜ್ಞಾನಪೀಠ ಪ್ರಶಸ್ತಿ ಲಭಿಸಿದ್ದು, ಕನ್ನಡ ಭಾಷೆಯು ನಿರಂತರವಾಗಿ ಬೆಳೆಯಲಿದೆ’ ಎಂದವರು ಹೇಳಿದರು.
`ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 450 ಹಾಸಿಗೆ ಹೊಸ ಆಸ್ಪತ್ರೆಯ ಕಟ್ಟಡ ಕಾಮಗಾರಿ ಮುಕ್ತಾಯಗೊಂಡಿದ್ದು, ಜಿಲ್ಲೆಯ ಜನರ ಬೇಡಿಕೆಯಂತೆ ಮುಂಬರುವ ಬಜೆಟ್‌ನಲ್ಲಿ ಮಲ್ಟಿ ಸ್ಪೆಷಲಿಟಿ ಆಸ್ಪತ್ರೆಯು ಘೋಷಣೆಯಾಗುತ್ತದೆ. ಜಿಲ್ಲೆಯಲ್ಲಿ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭವಾಗಲಿದೆ’ ಎಂದು ಸಚಿವ ಮಂಕಾಳು ವೈದ್ಯ ಸ್ಪಷ್ಟಪಡಿಸಿದರು.
`ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಶಿರಸಿ ಮತ್ತು ಭಟ್ಕಳದಲ್ಲಿ ಹಾಸ್ಟೇಲ್ ನಿರ್ಮಿಸಲಾಗುತ್ತಿದೆ. ಕಾರ್ಮಿಕ ಇಲಾಖೆಯಿಂದ ವಿಶೇಷವಾಗಿ ಕಾರ್ಮಿಕ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ 55 ಕೋಟಿ ರೂ ವೆಚ್ಚದಲ್ಲಿ ವಸತಿ ಶಾಲೆಯನ್ನು ಭಟ್ಕಳದಲ್ಲಿ ನಿರ್ಮಿಸಲಾಗುತ್ತಿದೆ. ರಾಜ್ಯದ ಕರಾವಳಿ ಪ್ರದೇಶವನ್ನು ಅಭಿವೃದ್ಧಿಪಡಿಸಲು ನೀಲನಕ್ಷೆಯನ್ನು ತಯಾರಿಸಿ, 23 ಸಾವಿರ ಕೋಟಿ ವೆಚ್ಚದಲ್ಲಿ 126 ಪ್ರಾಜೇಕ್ಟ್ಗಳು ಕೈಗೆತ್ತಿಕೊಳ್ಳಲಾಗಿದೆ. ಈ ಯೋಜನೆಗÀಳಿಂದ ಪ್ರವಾಸೋದ್ಯಮ, ವಾಣಿಜ್ಯ ಬಂದರು, ಮೀನುಗಾರಿಕೆ ಬಂದರು ಮತ್ತು ಮೀನುಗಾರಿಕೆಗೆ ಅಭಿವೃದ್ಧಿಯ ಜೊತೆಯಲ್ಲಿ ನಿರುದ್ಯೋಗ ಸಮಸ್ಯೆ, ಕಡಲ ಕೊರೆತ ಸಮಸ್ಯೆಗಳನ್ನು ನಿವಾರಿಸಲು ಸಹಕಾರಿಯಾಗಲಿದೆ’ ಎಂದರು.
ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಸ್ತಬ್ಧ ಚಿತ್ರ ಮೆರವಣಿಗೆಗೆ ಚಾಲನೆ ನೀಡಿದರು. ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಲೀಷ್ ಶಸಿ, ಅಪರ ಜಿಲ್ಲಾ ಅಧಿಕಾರಿ ಸಾಜಿದ್ ಮುಲ್ಲಾ, ತರಬೇತಿ ನಿರತ ಐಎಎಸ್ ಅಧಿಕಾರಿ ಝೂಪೀಶನ್ ಹಕ್ ಮತ್ತಿತರರು ಉಪಸ್ಥಿತರಿದ್ದರು. ಸಾಧಕರಿಗೆ ಸನ್ಮಾನ, ಅಗತ್ಯವಿದ್ದವರಿಗೆ ಪೌಷ್ಠಿಕ ಆಹಾರ ನೀಡಲಾಯಿತು. ಪೊಲೀಸ್, ಅರಣ್ಯ, ಗೃಹ ರಕ್ಷಕ ದಳ, ಎನ್.ಸಿ.ಸಿ, ಸ್ಕೌಟ್ಸ್ ಅಂಡ್ ಗೈಡ್ಸ್, ಸೇವಾದಳ ತಂಡಗಳಿoದ ಆಕರ್ಷಕ ಪಥ ಸಂಚಲನ ನಡೆಯಿತು. ಹಾಗೂ ಶಾಲಾ ವಿದ್ಯಾರ್ಥಿಗಳಿಂದ ನಾಡಿನ ಕಲೆ ಸಾಹಿತ್ಯ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.