ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!
January 3, 2026
ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!
January 3, 2026
ರಂಜಿತಾ ಕೊಂದ ರಫೀಕ್ ಇನ್ನಿಲ್ಲ!
January 4, 2026
ಹುಬ್ಬಳ್ಳಿ-ಅಂಕೋಲಾ ರಸ್ತೆಯಲ್ಲಿ ಅತ್ಯಂತ ವೇಗವಾಗಿ ಚಲಿಸುತ್ತಿದ್ದ ಸರ್ಕಾರಿ ಬಸ್ಸು ಪ್ರಪಾತಕ್ಕೆ ಬಿದ್ದಿದೆ. ಈ ಅವಘಡದಲ್ಲಿ 20ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ.
ಕಾರವಾರ-ರಾಯಚೂರು ಮಾರ್ಗದ ಬಸ್ಸು ಇದಾಗಿತ್ತು. ಯಲ್ಲಾಪುರ-ಅಂಕೋಲಾ ನಡುವಿನ ವಜ್ರಳ್ಳಿ ಬಳಿ ಬಸ್ಸು ಪಲ್ಟಿಯಾಯಿತು. ಪರಿಣಾಮ ಬಸ್ಸು ಕಂದಕಕ್ಕೆ ಬಿದ್ದಿದ್ದು, ಅನೇಕರು ಪೆಟ್ಟು ಮಾಡಿಕೊಂಡರು. ಆ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಮಹಿಳೆಯರು, ಮಕ್ಕಳು ಸೇರಿ ಅನೇಕರು ಈ ಬಸ್ಸಿನಲ್ಲಿದ್ದು ಅಪಘಾತದಿಂದ ಗಾಯಗೊಂಡಿದ್ದಾರೆ.
ಅತಿ ವೇಗವೇ ಈ ಅಪಘಾತಕ್ಕೆ ಕಾರಣ ಎಂಬ ಮಾಹಿತಿ ಸಿಕ್ಕಿದೆ. ಗಾಯಗೊಂಡವರನ್ನು ತುರ್ತಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾ ಹಾಗೂ ಯಲ್ಲಾಪುರ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ರಕ್ಷಣಾ ತಂಡಗಳು ಧಾವಿಸಿ ಕಾರ್ಯಾಚರಣೆ ನಡೆಸುತ್ತಿವೆ. ಗಾಯಾಳುಗಳಿಗೆ ತುರ್ತು ಚಿಕಿತ್ಸೆ ಮುಂದುವರೆದಿದೆ.
You cannot copy content of this page