ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಗಳ ವಿವರ ಕೋರಿ ಸಾಮಾಜಿಕ ಕಾರ್ಯಕರ್ತ ಆಗ್ನೇಲ್ ರೋಡ್ರಿಗ್ರಸ್ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಪೊಲೀಸರು ಆ ಮಾಹಿತಿ ನೀಡಿಲ್ಲ. ಅರ್ಜಿ ಸಲ್ಲಿಸಿ 63 ದಿನ ಕಳೆದರೂ ಮಾಹಿತಿ ನೀಡಿದ ಅಧಿಕಾರಿಗಳ ವಿರುದ್ಧ ಅರ್ಜಿದಾರರು ಅಸಮಧಾನವ್ಯಕ್ತಪಡಿಸಿದ್ದಾರೆ.
2025ರ ಜುಲೈ, ಅಗಸ್ಟ, ಸೆಪ್ಟೆಂಬರ್ ಹಾಗೂ ಅಕ್ಟೊಬರ್ ಅವಧಿಯಲ್ಲಿನ ಮಾಹಿತಿಗಾಗಿ ಆಗ್ನೇಲ್ ರೋಡ್ರಿಗಸ್ ಅರ್ಜಿ ಸಲ್ಲಿಸಿದ್ದಾರೆ. ಕಳ್ಳತನ ಪ್ರಕರಣಗಳ ಮಾಹಿತಿ ಅಗತ್ಯವಿರುವ ಕಾರಣ ಅವರು ಈ ಅರ್ಜಿ ಸಲ್ಲಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಮಾಹಿತಿ ಸಿಗದ ಕಾರಣ ಪ್ರಥಮ ಮೇಲ್ಮನವಿ ಸಲ್ಲಿಸಿದ್ದಾರೆ. ಆದರೆ, ಪ್ರಥಮ ಮೇಲ್ಮನವಿ ಸಲ್ಲಿಸಿದ ನಂತರವೂ ಅವರಿಗೆ ಅಗತ್ಯ ದಾಖಲೆ ಸಿಕ್ಕಿಲ್ಲ. ಹೀಗಾಗಿ ಕಾನೂನು ಹೋರಾಟ ಮುಂದುವರೆಸುವುದಾಗಿ ಅವರು ಹೇಳಿದ್ದಾರೆ.
`ನಿಯಮಗಳ ಪ್ರಕಾರ 30 ದಿನದಲ್ಲಿ ದಾಖಲೆ ಒದಗಿಸಬೇಕು. ಆದರೆ, ಆ ನಿಯಮ ಪಾಲನೆ ಆಗುತ್ತಿಲ್ಲ. ಈ ಬಗ್ಗೆ ಪ್ರಶ್ನಿಸಲು ಠಾನೆಗೆ ಹೋದರೂ ಅಧಿಕಾರಿಗಳು ಸಿಕ್ಕಿಲ್ಲ’ ಎಂದವರು ದೂರಿದ್ದಾರೆ. `ಮಾಹಿತಿ ನೀಡದ ಅಧಿಕಾರಿಗಳಿಗೆ ದಂಡ ವಿಧಿಸುವ ಬಗ್ಗೆ ಕಾನೂನು ಹೇಳಿದ್ದು, ಈ ಬಗ್ಗೆ ದೂರು ಸಲ್ಲಿಸಲಾಗುತ್ತದೆ ಎಂದವರು ಮಾಹಿತಿ ನೀಡಿದ್ದಾರೆ.