ಶಿರಸಿಯ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ಶ್ರೀ ಭೂತೇಶ್ವರ ಪತ್ತಿನ ಸಹಕಾರಿ ಸಂಘಕ್ಕೆ `ಲೋಕಧ್ವನಿ ಹೆಮ್ಮೆಯ ಸಾಧಕ’ ಪ್ರಶಸ್ತಿ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಶ್ರೀಧರ ಮೊಗೇರ್ ಹಾಗೂ ಮುಖ್ಯ ಕಾರ್ಯನಿರ್ವಾಹಕ ವಿನಾಯಕ ಶೆಟ್ಟಿ ಅವರು ಈ ಪ್ರಶಸ್ತಿ ಸ್ವೀಕರಿಸಿದ್ದಾರೆ. ಸಂಘದ ಉಪಾಧ್ಯಕ್ಷ ಭಾಸ್ಕರ ಶೆಟ್ಟಿ ಹಾಗೂ ಸಹ ಕಾರ್ಯನಿರ್ವಾಹಕ ರಾಘವೇಂದ್ರ ಶೆಟ್ಟಿ ಪ್ರಶಸ್ತಿ ಸ್ವೀಕಾರದ ಸಂತಸ ಹಂಚಿಕೊAಡಿದ್ದಾರೆ.
`ಸಹಕಾರಿ ಕ್ಷೇತ್ರದ ಆಶಯಗಳನ್ನು ಎತ್ತಿ ಹಿಡಿಯುವ ಉದ್ದೇಶದಿಂದ ವಸಂತ ಶೆಟ್ಟಿ ಅವರ ದೂರದೃಷ್ಟಿಯ ಫಲವಾಗಿ ಈ ಸಂಘವು ಸ್ಥಾಪನೆಯಾಗಿತ್ತು. ಆರಂಭದಿAದಲೂ ಸಾಮಾನ್ಯ ಜನರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡುತ್ತಾ ಬಂದಿರುವ ಈ ಸಂಸ್ಥೆ ಇದೀಗ ಶಿರಸಿ ಭಾಗದ ಪ್ರಮುಖ ಆರ್ಥಿಕ ಶಕ್ತಿಯಾಗಿ ಬೆಳೆದಿದೆ’ ಎಂದು ಸನ್ಮಾನಿತರು ವಿವರಿಸಿದರು. `ಬ್ಯಾಂಕಿಗ್ ಜೊತೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಸಂಸ್ಥೆ ಬೆಂಬಲ ನೀಡುತ್ತಿದೆ. ಈ ಹಿನ್ನಲೆ ಪ್ರಶಸ್ತಿ ಬಂದಿರುವುದಕ್ಕೆ ಖುಷಿಯಾಗಿದೆ’ ಎಂದವರು ಹೆಮ್ಮೆಯಿಂದ ಮಾತನಾಡಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಮಂಕಾಳ ವೈದ್ಯ, ಶಾಸಕ ಶಿವರಾಮ್ ಹೆಬ್ಬಾರ್, ವಿಧಾನ ಪರಿಷತ್ ಸದಸ್ಯ ಶಾಂತರಾಮ ಸಿದ್ದಿ, ಜನಶಕ್ತಿ ವಿಶ್ವಸ್ಥ ಮಂಡಳಿ ಧರ್ಮದರ್ಶಿ ವಿಶ್ವೇಶ್ವರ ಭಟ್ ಇನ್ನಿತರರು ಈ ವೇಳೆ ಇದ್ದರು.