ಬಸ್ ನಿಲ್ದಾಣಕ್ಕೆ ಬಂದು ಪಂಚ ಗ್ಯಾರಂಟಿ ಯೋಜನೆ ಬಗ್ಗೆ ಗುಣಗಾನ ಮಾಡಿದ ಶಿರಸಿ ಶಾಸಕ ಭೀಮಣ್ಣ ನಾಯ್ಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಸೆಲ್ಪಿ ಕ್ಲಿಕ್ಕಿಸಿಕೊಂಡರು. ಈ ವೇಳೆ ಅನೇಕ ಕ್ಯಾಮರಾಗಳು ಈ ಸನ್ನಿವೇಶವನ್ನು ಚಿತ್ರಿಸಿದವು.
ಶಿರಸಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಾಹಿತಿ ನೀಡುತ್ತಿದೆ. ಜುಲೈ 10 ರಿಂದ 12ರವರೆಗೆ ಸೀಎಂ ಸಿದ್ದರಾಮಯ್ಯ ಅವರನ್ನು ಹೋಲುವ ಪ್ರತಿಮೆಯೂ ಇಲ್ಲಿರಲಿದೆ. ಹೀಗಾಗಿ ಬಸ್ ನಿಲ್ದಾಣಕ್ಕೆ ಬಂದು ಹೋಗುವವರೆಲ್ಲ ಅಲ್ಲಿ ನಿಂತಿರುವ ಸಿದ್ದರಾಮಯ್ಯ ಅವರ ಜೊತೆ ಮಾತನಾಡಿ ಫೋಟೋ ತೆಗಿಸಿಕೊಳ್ಳುತ್ತಿದ್ದಾರೆ.
ಶುಕ್ರವಾರ ಶಾಸಕ ಭೀಮಣ್ಣ ನಾಯ್ಕ ಅವರು ಬಸ್ ನಿಲ್ದಾಣಕ್ಕೆ ಬಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. `ರಾಜ್ಯ ಸರ್ಕಾರವು ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದೆ. ಆ ಮೂಲಕ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದಿದೆ’ ಎಂದು ಅವರು ಈ ವೇಳೆ ಭಾಷಣ ಮಾಡಿದರು.
`ಶಿರಸಿ-ಸಿದ್ದಾಪುರ ಕ್ಷೇತ್ರಕ್ಕೆ ಕಳೆದ 2 ವರ್ಷದ ಅವಧಿಯಲ್ಲಿ ಸುಮಾರು 300 ಕೋಟಿಗೂ ಅಧಿಕ ಅನುದಾನದಲ್ಲಿ ವಿವಿಧ ಯೋಜನೆಗಳನ್ನು ಮಂಜೂರು ಮಾಡಿಸಲಾಗಿದೆ. ಪ್ರಸ್ತುತ 50 ಕೋಟಿ ರೂ ಮೊತ್ತದ ಕಾಮಗಾರಿಗಳಿಗೆ ಕ್ರಿಯಾ ಯೋಜನೆ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ’ ಎಂದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ, ಉಪಾಧ್ಯಕ್ಷ ನಾಗರಾಜ್ ಮುರುಡೇಶ್ವರ, ಶಿರಸಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಗದೀಶ್ ಗೌಡ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷೆ ಸುಮಾ ಉಗ್ರಣಕರ, ಉಪವಿಭಾಗಾಧಿಕಾರಿ ಕಾವ್ಯರಾಣಿ ಕೆ.ಎಸ್, ಜಿಲ್ಲಾ ವಾರ್ತಾಧಿಕಾರಿ ಬಿ ಶಿವಕುಮಾರ್, ವಾಕರಸಾ ಸಂಸ್ಥೆಯ ಶಿರಸಿ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜ ಅಮ್ಮಣ್ಣನವರ್ ಸಹ ಸಿದ್ದರಾಮಯ್ಯ ಪ್ರತಿಮೆ ಜೊತೆ ಫೋಟೋ ತೆಗೆಸಿಕೊಂಡರು.
Discussion about this post